ಕೆಂಟೊ ಮೊಮೊಟಾ ಐತಿಹಾಸಿಕ ಸಾಧನೆ
ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್

ಬರ್ಮಿಂಗ್‌ಹ್ಯಾಮ್, ಮಾ.11: ವಿಶ್ವದ ನಂ.1 ಆಟಗಾರ ಕೆಂಟೊ ಮೊಮೊಟಾ ರವಿವಾರ ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ್ನು ಜಯಿಸಿದ ಜಪಾನ್‌ನ ಮೊದಲ ಆಟಗಾರ ಎನಿಸಿಕೊಳ್ಳುವುದರೊಂದಿಗೆ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಇಲ್ಲಿ ನಡೆದ ಪುರುಷರ ಸಿಂಗಲ್ಸ್ ಫೈನಲ್ ಹಣಾಹಣಿಯಲ್ಲಿ ಹಾಲಿ ವಿಶ್ವ ಚಾಂಪಿಯನ್ ಹಾಗೂ ಏಶ್ಯನ್ ಚಾಂಪಿಯನ್ ಮೊಮೊಟಾ ಡೆನ್ಮಾರ್ಕ್‌ನ ವಿಕ್ಟರ್ ಅಕ್ಸೆಲ್‌ಸೆನ್‌ರನ್ನು 21-11, 15-21, 21-15 ಗೇಮ್‌ಗಳ ಅಂತರದಿಂದ ಮಣಿಸಿದರು.
Next Story





