ನೀತಿ ಸಂಹಿತೆ ಉಲ್ಲಂಘನೆ: ಕಾರು ಸಹಿತ ಮದ್ಯ ವಶ
ಮಡಿಕೇರಿ, ಮಾ.12 : ಲೋಕಸಭಾ ಚುನಾವಣೆ ಘೊಷಣೆಯಾದ ಬೆನ್ನಲ್ಲೆ ಚುನಾವಣಾ ನೀತಿ ಸಂಹಿತೆ ಕೊಡಗು ಜಿಲ್ಲೆಯಲ್ಲೂ ಕಟ್ಟುನಿಟ್ಟಾಗಿ ಜಾರಿಯಾಗಿದ್ದು, ಮಾ.12 ರವರೆಗೆ ಜಿಲ್ಲೆಯ ವಿವಿಧೆಡೆಗಳಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ 14 ಪ್ರಕರಣಗಳನ್ನು ಅಬಕಾರಿ ಇಲಾಖಾ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.
ನಿಯಮ ಬಾಹಿರವಾಗಿ ಅಕ್ರಮವಾಗಿ ಮದ್ಯ ಸಾಗಾಟ ಮಾಡಿದ ವಿವಿಧ ಪ್ರಕರಣಗಳನ್ನು ಪತ್ತೆ ಹಚ್ಚಿರುವ ಅಬಕಾರಿ ಇಲಾಖೆ 35,978 ರೂ. ಮೌಲ್ಯದ ಒಟ್ಟು 86.45 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಮದ್ಯ ಸಾಗಿಸುತ್ತಿದ್ದ ಟಾಟಾ ಇಂಡಿಗೋ ಕಾರೊಂದನ್ನು ಕೂಡ ವಶಪಡಿಸಿಕೊಂಡಿದ್ದು, ಇದರ ಮೌಲ್ಯ 3 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
Next Story





