Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯುವ ಜನತೆ ಬಳಕೆಯ ವಸ್ತುವಾಗಬಾರದು: ಆಹಾರ...

ಯುವ ಜನತೆ ಬಳಕೆಯ ವಸ್ತುವಾಗಬಾರದು: ಆಹಾರ ತಜ್ಞ ಡಾ.ಕೆ.ಸಿ.ರಘು

ವಾರ್ತಾಭಾರತಿವಾರ್ತಾಭಾರತಿ12 March 2019 10:08 PM IST
share

ಬೆಂಗಳೂರು, ಮಾ.12: ಯುವಜನತೆ ಸ್ವಾರ್ಥ ಹಿತಾಸಕ್ತಿಗಳ ಕೈಯಲ್ಲಿ ಬಳಕೆಯ ವಸ್ತುವಾಗದೆ, ಉತ್ತಮ ಆರೋಗ್ಯ, ಉನ್ನತ ಶಿಕ್ಷಣವನ್ನು ಪಡೆಯುವ ಮೂಲಕ ತಮ್ಮ ಸುತ್ತಮುತ್ತಲ ಪರಿಸರ, ರಾಜ್ಯ ಹಾಗೂ ದೇಶವನ್ನು ಅಭಿವೃದ್ದಿಯ ಕಡೆಗೆ ಕೊಂಡೊಯ್ಯಬೇಕು ಎಂದು ಆಹಾರ ತಜ್ಞ ಡಾ.ಕೆ.ಸಿ.ರಘು ತಿಳಿಸಿದರು.

ಮಂಗಳವಾರ ಶೇಷಾದ್ರಿಪುರಂ ಇನ್‌ಸ್ಟಿಟ್ಯೂಟ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್‌ಮೆಂಟ್, ಗಾಂಧಿ ಮತ್ತು ವಿವೇಕಾನಂದರ ಅಧ್ಯಯನ ಕೇಂದ್ರ ಹಾಗೂ ಅಪಾಂಜಿ ಕನ್ನಡ ಪರಿಷತ್ ಸಹಯೋಗದಲ್ಲಿ ಆಯೋಜಿಸಿದ್ದ ‘ರಾಷ್ಟ್ರ ನಿರ್ಮಾಣದಲ್ಲಿ ನನ್ನ ಪಾತ್ರ’ ಕುರಿತು ಅವರು ಮಾತನಾಡಿದರು.

ನಮ್ಮ ದೇಶ ಜನಸಂಖ್ಯೆಯಲ್ಲಿ ಪ್ರಪಂಚದಲ್ಲೇ ಎರಡನೇ ಸ್ಥಾನದಲ್ಲಿದೆ. ಅಗಾಧವಾದ ನೈಸರ್ಗಿಕ ಸಂಪನ್ಮೂಲವಿದೆ. ಇಷ್ಟಾಗಿಯು ಬಹುತೇಕ ಕ್ಷೇತ್ರಗಳಲ್ಲಿ ಭಾರತ ಹಿಂದುಳಿದಿರುವುದರ ಕುರಿತು ಯುವ ಜನತೆ ಚಿಂತಿಸಬೇಕು. ಹಾಗೂ ವಿದ್ಯಾರ್ಥಿಗಳು ಓದಿನ ಜೊತೆಗೆ ಉತ್ತಮ ಮೌಲ್ಯಗಳನ್ನು ಹೊಂದುವ ಮೂಲಕ ಸಮಾಜಪರವಾದ ಜೀವನವನ್ನು ನಡೆಸಬೇಕು ಎಂದು ಅವರು ಹೇಳಿದರು.

ಭಾರತದಲ್ಲಿ ಇವತ್ತಿಗೂ ಮೂಲಭೂತ ಸಮಸ್ಯೆಗಳು ಈಡೇರಿಲ್ಲ. ಒಂದು ವರ್ಷದ ಒಳಗಿನ ಮಗುವಿನ ಸಾವಿನ ಪ್ರಮಾಣವನ್ನು ತಗ್ಗಿಸಲು ಇನ್ನೂ ಸಾಧ್ಯವಾಗಿಲ್ಲ. ಇದರ ಜೊತೆಗೆ ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಹಾಗೂ ಮಾನವನ ಜೀವಿತಾವಧಿಯ ಪ್ರಮಾಣವು ಅಂತರ್‌ರಾಷ್ಟ್ರೀಯ ಸರಾಸರಿ ಪ್ರಮಾಣಕ್ಕಿಂತ ಕಡಿಮೆಯಿದೆ. ಅದರಲ್ಲೂ ದಲಿತರು ಹಾಗೂ ಬಡವರ ಜೀವಿತಾವಧಿಯು ಕೇವಲ 50ರಿಂದ 55ವರ್ಷಗಳು. ಇದೆಲ್ಲವೂ ಸುಧಾರಣೆಯಾಗದೆ ದೇಶದ ಅಭಿವೃದ್ಧಿ ಹೇಗೆ ಸಾಧ್ಯವೆಂದು ಅವರು ಹೇಳಿದರು.

ಭಾರತದಲ್ಲಿ ಇಂದಿಗೂ ಜಾತಿ, ಲಿಂಗ, ಭಾಷೆ ಹಾಗೂ ಬಣ್ಣದಿಂದ ಮೇಲು, ಕೀಳಿನಿಂದ ನೋಡಲಾಗುತ್ತಿದೆ. ಕೆಲವು ಸ್ವ ಹಿತಾಸಕ್ತಿಗಳು ಇಂತಹ ಭಾವನೆಗಳನ್ನು ಯುವ ಜನತೆಗೆ ತುಂಬಿಸುವ ಮೂಲಕ ಪರಸ್ಪರ ಅಸಹನೆ, ದ್ವೇಷದ ಭಾವನೆ ಬಿತ್ತಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಇಂತಹ ಸಣ್ಣ ಮಟ್ಟದ ಚಿಂತನೆಗಳಿಗೆ ಮಾರು ಹೋಗದೆ ಸ್ನೇಹ, ಪ್ರೀತಿ, ವಿಶ್ವಾಸದ ಮೂಲಕ ಒಟ್ಟಾಗಿ ದೇಶವನ್ನು ಕಟ್ಟಬೇಕಾಗಿದೆ ಎಂದು ಅವರು ಹೇಳಿದರು.

ದೇಶದಲ್ಲಿ ದಿನ ಕಳೆದಂತೆ ಸಂಪತ್ತಿನ ಅಸಮಾನತೆ ಹೆಚ್ಚಾಗುತ್ತಿದೆ. ಕೇವಲ ಶೇ.1ರಷ್ಟ್ರಿರುವ ಬಂಡವಾಳಶಾಹಿಗಳ ಹಿಡಿತದಲ್ಲಿ ದೇಶದ ಶೇ.60ರಷ್ಟು ಸಂಪತ್ತಿದೆ. ಇದರಿಂದ ಜನಸಾಮಾನ್ಯರ ತಲಾ ಆದಾಯವು ತೀರ ಕಡಿಮೆಯಾಗುತ್ತಿದೆ. ದೇಶದ ಬಹುತೇಕ ಜನತೆ ತಮ್ಮ ದುಡಿಮೆಯ ಬಹುಪಾಲು ಹಣವನ್ನು ಮಕ್ಕಳ ಶಿಕ್ಷಣಕ್ಕೆ ಹಾಗೂ ಆರೋಗ್ಯಕ್ಕೆ ವ್ಯಯ ಮಾಡುತ್ತಿದ್ದಾರೆ. ಇದನ್ನು ತಪ್ಪಿಸಲು ನಮ್ಮ ಸರಕಾರಗಳು ಜನಪರವಾದ ನೀತಿಗಳನ್ನು ಜಾರಿಗೆ ತರಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ಕನ್ನಡ ಉಪನ್ಯಾಸಕ ಎಸ್.ರಾಮಲಿಂಗೇಶ್ವರ ಮಾತನಾಡಿ, ನಮ್ಮ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದ, ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ಬುದ್ಧ, ಬಸವಣ್ಣನ ಚಿಂತನೆಗಳು ಆದರ್ಶಗಳಾಗಬೇಕೆ ವಿನಃ ಜನವಿರೋಧಿ, ಪರಿಸರ ವಿರೋಧಿ ಜಾಹಿರಾತುಗಳಲ್ಲಿ ಭಾಗವಹಿಸುವ ಸಿನೆಮಾ ನಟ, ನಟಿಯರು ಹಾಗೂ ಕ್ರೀಡಾಪಟುಗಳಲ್ಲವೆಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X