Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕನಿಷ್ಟ 6 ತಿಂಗಳ ಸೇವಾವಧಿ ಇರುವ...

ಕನಿಷ್ಟ 6 ತಿಂಗಳ ಸೇವಾವಧಿ ಇರುವ ಅಧಿಕಾರಿಗಳನ್ನು ಡಿಜಿಪಿ ಹುದ್ದೆಗೆ ಪರಿಗಣಿಸಬೇಕು: ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ13 March 2019 10:39 PM IST
share
ಕನಿಷ್ಟ 6 ತಿಂಗಳ ಸೇವಾವಧಿ ಇರುವ ಅಧಿಕಾರಿಗಳನ್ನು ಡಿಜಿಪಿ ಹುದ್ದೆಗೆ ಪರಿಗಣಿಸಬೇಕು: ಸುಪ್ರೀಂ

ಹೊಸದಿಲ್ಲಿ, ಮಾ.13: ಪೊಲೀಸ್ ವ್ಯವಸ್ಥೆ ಸುಧಾರಣೆ ಬಗ್ಗೆ ಕಳೆದ ವರ್ಷ ನೀಡಿದ್ದ ಆದೇಶದ ಬಗ್ಗೆ ಬುಧವಾರ ಸ್ಪಷ್ಟನೆ ನೀಡಿರುವ ಸುಪ್ರೀಂಕೋರ್ಟ್, ಕನಿಷ್ಟ 6 ತಿಂಗಳ ಸೇವಾವಧಿ ಇರುವ ಅಧಿಕಾರಿಗಳನ್ನು ಪೊಲೀಸ್ ಮಹಾನಿರ್ದೇಶಕರ(ಡಿಜಿಪಿ) ಹುದ್ದೆಗೆ ಪರಿಗಣಿಸಬಹುದು ಎಂದು ತಿಳಿಸಿದೆ.

   ಡಿಜಿಪಿ ಹುದ್ದೆಗೆ ಯುಪಿಎಸ್‌ಸಿ ಮಾಡುವ ಶಿಫಾರಸು ಹಾಗೂ ಪಟ್ಟಿ ರಚನೆ ಪ್ರಕ್ರಿಯೆ ಸಂಪೂರ್ಣ ಅರ್ಹತೆಯ ಆಧಾರದಲ್ಲಿ ನಡೆಯಬೇಕು ಎಂದು ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯಿ ನೇತೃತ್ವದ ನ್ಯಾಯಪೀಠ ತಿಳಿಸಿದೆ. ಉತ್ತರಪ್ರದೇಶದ ಮಾಜಿ ಡಿಜಿಪಿ ಪ್ರಕಾಶ್ ಸಿಂಗ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸಂದರ್ಭ ಸುಪ್ರೀಂಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. 2 ವರ್ಷದ ಸೇವಾವಧಿ ಇರುವ ಪೊಲೀಸ್ ಅಧಿಕಾರಿಗಳನ್ನು ಮಾತ್ರ ಡಿಜಿಪಿ ಹುದ್ದೆಗೆ ಪರಿಗಣಿಸಬೇಕೆಂದು ಯುಪಿಎಸ್‌ಸಿಗೆ ಸೂಚಿಸಿರುವ 2018 ಜುಲೈ 3ರ ಆದೇಶವನ್ನು ರಾಜ್ಯ ಸರಕಾರಗಳು ದುರುಪಯೋಗ ಪಡಿಸಿಕೊಳ್ಳುತ್ತಿವೆ. ಅರ್ಹ ಹಿರಿಯ ಅಧಿಕಾರಿಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಪ್ರಕಾಶ್ ಸಿಂಗ್ ಅರ್ಜಿಯಲ್ಲಿ ತಿಳಿಸಿದ್ದರು.

ಇದರಿಂದ ಪ್ರತಿಭಾನ್ವಿತ ಮತ್ತು ಅನುಭವಿ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ. 2 ವರ್ಷದ ಸೇವಾವಧಿ ಇರದ ಅಧಿಕಾರಿಗಳನ್ನು ಪರಿಗಣಿಸಲಾಗದು ಎಂದು ಯುಪಿಎಸ್ಸಿ ಹೇಳುತ್ತಿರುವುದಾಗಿ ವಕೀಲ ಪ್ರಶಾಂತ್ ಭೂಷಣ್ ನ್ಯಾಯಪೀಠಕ್ಕೆ ತಿಳಿಸಿದರು.

ಇದಕ್ಕೆ ಆಕ್ಷೇಪ ಸೂಚಿಸಿದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್, ನಿವೃತ್ತಿಯ ಅಂಚಿನಲ್ಲಿರುವ ಅಧಿಕಾರಿಗಳನ್ನು ಡಿಜಿಪಿ ಹುದ್ದೆಗೆ ನೇಮಿಸುವ ಕ್ರಮದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಜಾರಿಮಾಡಿದೆ. ಈಗ ಆದೇಶವನ್ನು ಮರು ಪರಿಶೀಲಿಸುವ ಅಗತ್ಯವಿಲ್ಲ ಎಂದು ವಾದಿಸಿದರು.

 ಪ್ರತಿಯೊಂದು ರಾಜ್ಯವೂ ಹಾಲಿ ಡಿಜಿಪಿ ನಿವೃತ್ತಿಗೆ ಕನಿಷ್ಟ ಮೂರು ತಿಂಗಳು ಇರುವಾಗ ತಮ್ಮ ಪ್ರಸ್ತಾವವನ್ನು ಯುಪಿಎಸ್ಸಿಗೆ ಕಳುಹಿಸಬೇಕು. ಬಳಿಕ ಯುಪಿಎಸ್ಸಿ ನ್ಯಾಯಾಲಯದ ನಿರ್ದೇಶನದಂತೆ ಪಟ್ಟಿಯೊಂದನ್ನು ರಚಿಸಿ ರಾಜ್ಯಗಳಿಗೆ ಕಳುಹಿಸಬೇಕು. ಈ ಪಟ್ಟಿಯಿಂದ ಒಬ್ಬರ ಹೆಸರನ್ನು ರಾಜ್ಯ ಸರಕಾರ ಆಯ್ಕೆ ಮಾಡಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

 ಡಿಜಿಪಿ ಹುದ್ದೆಗೆ ನೇಮಕ ಮಾಡುವಾಗ , ಸಾಧ್ಯವಾದಷ್ಟು ಮಟ್ಟಿಗೆ ನಿವೃತ್ತಿಗೆ ಕನಿಷ್ಟ ಎರಡು ವರ್ಷ ಇರುವ ಅಧಿಕಾರಿಗಳನ್ನು ನೇಮಿಸಬೇಕು. ನಿವೃತ್ತಿಗೆ ಆರು ತಿಂಗಳು ಇರುವ ಅಧಿಕಾರಿಗಳನ್ನೂ ಪರಿಗಣಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಕೆಲವು ರಾಜ್ಯಗಳು ಪೊಲೀಸ್ ಅಧಿಕಾರಿಯ ಸೇವಾವಧಿಯ ಅಂತಿಮ ದಿನದಂದು ಅವರನ್ನು ಡಿಜಿಪಿ ಹುದ್ದೆಗೆ ನೇಮಿಸುವುದರಿಂದ ನಿವೃತ್ತಿಯ ಬಳಿಕವೂ ಅವರು 2 ವರ್ಷ ಸರಕಾರಿ ಸೇವೆಯಲ್ಲಿ ಮುಂದುವರಿಯುವಂತಾಗಿದೆ ಎಂದು ಕೇಂದ್ರ ಸರಕಾರ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿದ್ದ ಸುಪ್ರೀಂಕೋರ್ಟ್, ಪೊಲೀಸ್ ವ್ಯವಸ್ಥೆಯ ಸುಧಾರಣೆಗೆ ಕೆಲವೊಂದು ಮಾರ್ಗಸೂಚಿಗಳನ್ನು ಸೂಚಿಸಿತ್ತು.

   ಈ ಹಿನ್ನೆಲೆಯಲ್ಲಿ ಯುಪಿಎಸ್ಸಿಗೆ ಸೂಚನೆ ನೀಡಿದ್ದ ಸುಪ್ರೀಂ, ಡಿಜಿಪಿ ಹುದ್ದೆಗೆ ನೇಮಕ ಮಾಡುವಾಗ ಅರ್ಹತೆ ಮತ್ತು ಸೇವಾ ಜ್ಯೇಷ್ಟತೆಯನ್ನು ಗಮನಿಸಿ, ಸ್ಪಷ್ಟವಾಗಿ 2 ವರ್ಷ ಸೇವಾವಧಿ ಇರುವ ಐಪಿಎಸ್ ಅಧಿಕಾರಿಗಳನ್ನು ಪರಿಗಣಿಸುವಂತೆ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X