ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ಗೆ ಚಿಕಿತ್ಸೆ
ಬೆಂಗಳೂರು, ಮಾ.17: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ನಗರದ ಬನ್ನೇರುಘಟ್ಟ ರಸ್ತೆಯ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂರು ದಿನಗಳ ಹಿಂದೆ ಎದೆನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಹೈದರಾಬಾದ್ನ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಚಿಕಿತ್ಸೆ ಪಡೆದು ಅಲ್ಲಿಂದ ಬೆಂಗಳೂರಿಗೆ ಶನಿವಾರ ಬಂದಿದ್ದು, ನಂತರ ನಗರದ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.
ಈ ಹಿಂದೆ ವಿಶ್ವನಾಥ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿ ಮೂರು ಸ್ಟಂಟ್ಗಳನ್ನು ಅಳವಡಿಸಲಾಗಿತ್ತು. ಮೂರು ಸ್ಟಂಟ್ ಗಳ ಪೈಕಿ ಒಂದರಲ್ಲಿ ತೊಂದರೆ ಕಾಣಿಸಿ ಕೊಂಡಿದ್ದರಿಂದ ಲಘು ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
Next Story