ಕುಸಿದ 7 ಅಂತಸ್ತಿನ ಕಟ್ಟಡ
ಧಾರವಾಡ ನಗರದಲ್ಲಿ ಏಕಾಏಕಿ ಏಳು ಅಂತಸ್ತಿನ ಕಟ್ಟಡ ಕುಸಿದುಬಿದ್ದ ಪರಿಣಾಮ ಓರ್ವ ಯುವಕ ಮೃತಪಟ್ಟು, 22 ಜನರಿಗೆ ಗಾಯಗಳಾಗಿದೆ. ಇನ್ನೂ 10 ಮಂದಿ ಅವಶೇಷಗಳ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡದ ಕುಮಾರೇಶ್ವರ ನಗರದಲ್ಲಿದ್ದ ವಾಣಿಜ್ಯ ಸಂಕೀರ್ಣ ಕಟ್ಟಡ ಕುಸಿದು ಬಿದ್ದಿದ್ದು, ಈ ದುರ್ಘಟನೆಯಲ್ಲಿ ಸಲೀಂ ಮುಕಾಂದಾರ್(28) ಎಂಬ ಯುವಕ ಮೃತಪಟ್ಟಿದ್ದಾರೆ. 22 ಮಂದಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
Next Story