ಧಾರವಾಡ ಕಟ್ಟಡ ಕುಸಿತ ಪ್ರಕರಣ: 60 ಮಂದಿ ರಕ್ಷಣೆ, ಮುಂದುವರಿದ ಕಾರ್ಯಾಚರಣೆ
ಧಾರವಾಡ, ಮಾ.20: ನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತಕ್ಕೆ ಸಂಬಂಧಿಸಿ ಈತನಕ ಒಟ್ಟು 60 ಜನರನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಒಟ್ಟು ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ವಾಣಿಜ್ಯ ಸಂಕೀರ್ಣವೊಂದು ಮಂಗಳವಾರ ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿತ್ತು.
ಕಟ್ಟಡದ ಅವಶೇಷಗಳಡಿ ಸಿಲುಕಿರುವವರ ಜೀವ ಉಳಿಸುವುದಕ್ಕೆ ಮೊದಲ ಆದ್ಯತೆ ನೀಡಲಾಗಿದ್ದು, ಎನ್ಡಿಆರ್ಎಫ್ ಹಾಗೂ ಎನ್ಎಸ್ಎಸ್ ತಂಡಗಳಿಂದ ಕಾರ್ಯಾಚರಣೆ ನಡೆದಿದೆ ಎಂದು ಜಿಲ್ಲಾಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Next Story