Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲಿಕೆಯಲ್ಲಿ ಹಿಂದುಳಿದ ನಾಲ್ವರು...

ಕಲಿಕೆಯಲ್ಲಿ ಹಿಂದುಳಿದ ನಾಲ್ವರು ವಿದ್ಯಾರ್ಥಿಗಳಿಗೆ ಎಸೆಸೆಲ್ಸಿ ಪರೀಕ್ಷೆಗೆ ಅವಕಾಶ ನಿರಾಕರಣೆ

ಅಲ್ಲಿಪಾದೆಯ ಖಾಸಗಿ ವಿದ್ಯಾ ಸಂಸ್ಥೆಗೆ ಶಿಕ್ಷಣ ಇಲಾಖೆ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ22 March 2019 7:15 PM IST
share
ಕಲಿಕೆಯಲ್ಲಿ ಹಿಂದುಳಿದ ನಾಲ್ವರು ವಿದ್ಯಾರ್ಥಿಗಳಿಗೆ ಎಸೆಸೆಲ್ಸಿ ಪರೀಕ್ಷೆಗೆ ಅವಕಾಶ ನಿರಾಕರಣೆ

ಬಂಟ್ವಾಳ, ಮಾ. 22: ಕಲಿಕೆಯಲ್ಲಿ ಹಿಂದುಳಿದಿರುವ ಹಾಗೂ ಶಾಲೆಗೆ ಉತ್ತಮ ಫಲಿತಾಂಶ ಗಳಿಸುವ ಹಿನ್ನೆಲೆಯಲ್ಲಿ ಎಸೆಸೆಲ್ಸಿಯ ನಾಲ್ವರು ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಗೆ ಅವಕಾಶ ನಿರಾಕರಿಸಿದ ಘಟನೆ ಶುಕ್ರವಾರ ಬೆಳಕಿಗೆ ಬಂದಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ 24 ಗಂಟೆಯೊಳಗೆ ಸ್ಪಷ್ಠೀಕರಣ ನೀಡುವಂತೆ ಆದೇಶಿಸಿದ್ದಾರೆ. 

ಬಂಟ್ವಾಳ ತಾಲೂಕಿನ ಅಲ್ಲಿಪಾದೆಯ ಖಾಸಗಿ ವಿದ್ಯಾ ಸಂಸ್ಥೆಯೊಂದರಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ಎಸೆಸೆಲ್ಸಿಯ ನಾಲ್ವರು ಬಾಲಕರು ಈ ಬಾರಿಯ ಅಂತಿಮ ಪರೀಕ್ಷೆಯಿಂದ ವಂಚಿತರಾಗಿದ್ದಾರೆ.

ಈ ಶಾಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 32 ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದು, ಅವರಲ್ಲಿ ನಾಲ್ವರು ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎನ್ನುವ ಏಕೈಕ ಕಾರಣಕ್ಕೆ ಶಾಲಾ ಆಡಳಿತ ಮಂಡಳಿಯು ಅವರನ್ನು ಅಂತಿಮ ಪರೀಕ್ಷೆಗೆ ಹಾಜರಾಗದಂತೆ ಈ ನಿರ್ಧಾರ ಕೈಗೊಂಡಿದೆ. ಅದಲ್ಲದೆ ಈ ನಾಲ್ವರು ವಿದ್ಯಾರ್ಥಿಗಳ ಹೆಸರನ್ನು ಎಸೆಸೆಲ್ಸಿ ಪರೀಕ್ಷಾ ಮಂಡಳಿಗೆ ನೋಂದಣಿ ಮಾಡಿರಲಿಲ್ಲ. ಈ ನಿಟ್ಟಿನಲ್ಲಿ ಗುರುವಾರ ಆರಂಭಗೊಂಡ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ದೊರೆಯದ ಕಾರಣ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ.

ಈ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಸಾಮಾಜಿಕ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದು, ಅದರಂತೆ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ ಮುಖ್ಯೋಪಾಧ್ಯಾಯರನ್ನು ವಿಚಾರಣೆ ನಡೆಸಿದಾಗ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದ ಕಾರಣ ಪರೀಕ್ಷೆಗೆ ಬರೆಯಲು ಅವಕಾಶ ನಿರಾಕರಿಸಿರುವುದಾಗಿ ಒಪ್ಪಿಕೊಂಡಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಸ್ಥಳಕ್ಕೆ ತೆರಳಿದ ವರದಿಗಾರರಿಗೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಅವರ ಕಲಿಕಾ ವೆಚ್ಚ ಹಾಗೂ ಜವಾಬ್ದಾರಿಯನ್ನು ಭರಿಸಲು ಸೂಚಿಸಿರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಮಾಹಿತಿ ನೀಡಿತಿದ್ದಾರೆ.

ಈ ವಿಚಾರವಾಗಿ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳ ಪೋಷಕರಿಂದ ಯಾವುದೇ ದೂರು ಬಂದಿಲ್ಲ. ಘಟನೆಯ ಬಗ್ಗೆ ಮಾಹಿತಿ ತಿಳಿದ ಬಳಿಕ ಶಾಲೆಗೆ ತೆರಳಿ ಮಾಹಿತಿ ಸಂಗ್ರಹಿಸಲಾಗಿದೆ. ಈ ಬಗ್ಗೆ ಶಾಲೆಯ ಆಡಳಿತ ಮಂಡಳಿ ಮತ್ತು ಪೋಷಕರೊಂದಿಗೆ ಮಾತುಕತೆ ನಡೆಸಲಾಗಿದೆ. ಶಾಲೆಯ ಆಡಳಿತ ವಿದ್ಯಾರ್ಥಿಗಳ ಬಗ್ಗೆ ತಪ್ಪು ನಿರ್ಧಾರ ಕೈಗೊಂಡಿದೆ. ಇದಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದು, ಒಂದು ದಿನದೊಳಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಲಾಗಿದೆ. 
-ಶಿವಪ್ರಕಾಶ್ ಎನ್., ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ, 

ನಾಲ್ವರು ವಿದ್ಯಾರ್ಥಿಗಳು ಕಲಿಕೆಯಲ್ಲಿ ತೀರಾ ಹಿಂದುಳಿದಿದ್ದು, ಈ ಬಾರಿ ಎಸೆಸೆಲ್ಸಿ ಪರೀಕ್ಷೆಗೆ ನೋದಣಿ ಮಾಡಿರಲಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಕಲಿಕಾ ಹಿತದೃಷ್ಠಿಯಿಂದ ಹಾಗೂ ಪೋಷಕರ ಸಹಮತದೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. 
ಸಿ.ಶಾಲಿನಿ, ಶಾಲಾ ಮುಖ್ಯ ಶಿಕ್ಷಕಿ, 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X