Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2 ವಾರಗಳ ನಂತರ ಚಾಲೂ ಆದ ಬಿಜೆಪಿ ವೆಬ್...

2 ವಾರಗಳ ನಂತರ ಚಾಲೂ ಆದ ಬಿಜೆಪಿ ವೆಬ್ ಸೈಟ್

ವಾರ್ತಾಭಾರತಿವಾರ್ತಾಭಾರತಿ22 March 2019 9:53 PM IST
share
2 ವಾರಗಳ ನಂತರ ಚಾಲೂ ಆದ ಬಿಜೆಪಿ ವೆಬ್ ಸೈಟ್

ಹೊಸದಿಲ್ಲಿ, ಮಾ.22: ಹ್ಯಾಕ್ ಆದ ಎರಡು ವಾರಗಳಿಗೂ ಹೆಚ್ಚು ಸಮಯದ ನಂತರ ಶುಕ್ರವಾರದಂದು ಬಿಜೆಪಿ ಜಾಲತಾಣ ಮತ್ತೆ ಕಾರ್ಯಾಚರಿಸಲು ಆರಂಭಿಸಿದ್ದರೂ ಕೇವಲ ಒಂದು ಸ್ಥಿರ ಪುಟವನ್ನು ಮಾತ್ರ ಪ್ರದರ್ಶಿಸುತ್ತಿದೆ. ಈ ಪುಟದಲ್ಲಿ ಗುರುವಾರ ಬಿಡುಗಡೆಯಾದ ಪಕ್ಷದ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹಾಕಲಾಗಿದೆ.

ಮಾರ್ಚ್ 5ರಂದು ಬಿಜೆಪಿಯ ಜಾಲತಾಣವನ್ನು ಹ್ಯಾಕ್ ಮಾಡಲಾಗಿತ್ತು. ಜಾಲತಾಣದ ಒಳಹೊಕ್ಕಿದ್ದ ಹ್ಯಾಕರ್‌ಗಳು ಅದರಲ್ಲಿದ್ದ ವಿಷಯಗಳನ್ನು ಅಳಿಸಿ ಪ್ರಧಾನಿ ನರೇಂದ್ರ ಮೋದಿಯವರನ್ನು ಗೇಲಿ ಮಾಡುವ ಚಿತ್ರಗಳನ್ನು ಹಾಕಿದ್ದರು. ಪಕ್ಷವು ಮೊದಲು ಜಾಲತಾಣ ಹ್ಯಾಕ್ ಆಗಿರುವ ಬಗ್ಗೆ ನಿರಾಕರಿಸಿದರೂ ನಂತರ ಒಪ್ಪಿಕೊಂಡಿತ್ತು. ಪಕ್ಷದ ಜಾಲತಾಣ ಕೆಲವು ನಿಮಿಷಗಳಿಗೆ ಹ್ಯಾಕ್ ಆಗಿದ್ದರೂ ಅದನ್ನು ಕೂಡಲೇ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗಿತ್ತು ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಮಾರ್ಚ್ 12ರಂದು ತಿಳಿಸಿದ್ದರು.

 ಕಳೆದ ವಾರ ಆಂಗ್ಲ ಸುದ್ದಿವಾಹಿನಿಗೆ ಬಿಜೆಪಿ ಮೂಲಗಳು ನೀಡಿದ ಮಾಹಿತಿ ಪ್ರಕಾರ, ಸದ್ಯ ಜಾಲತಾಣ ಹ್ಯಾಕ್ ಆಗಿರುವುದರಿಂದ ಈ ಅವಕಾಶವನ್ನು ಜಾಲತಾಣವನ್ನು ಸಂಪೂರ್ಣವಾಗಿ ನವೀಕರಣಗೊಳಿಸಲು ಬಳಸಲು ಪಕ್ಷ ನಿರ್ಧರಿಸಿತ್ತು. ಹ್ಯಾಕ್ ಆದ ಜಾಲತಾಣವನ್ನು ಮರು ಯಥಾಸ್ಥಿತಿಗೆ ತರುವುದು ಕೆಲವೇ ಗಂಟೆಗಳ ವಿಷಯವಾಗಿದೆ. ಆದರೆ ಈ ಸಮಯವನ್ನು ನಾವು ಜಾಲತಾಣವನ್ನು ಸಂಪೂರ್ಣವಾಗಿ ಪುನರ್ ನಿರ್ಮಿಸಲು ಬಳಸಲು ನಾವು ನಿರ್ಧರಿಸಿದೆವು. ಈ ಬಗ್ಗೆ ಎರಡು ಮೂರು ತಿಂಗಳಿಂದ ಯೋಚಿಸುತ್ತಿದ್ದೆವು ಎಂದು ಮೂಲಗಳು ತಿಳಿಸಿವೆ.

ಸದ್ಯ ಬಿಜೆಪಿ ಜಾಲತಾಣದಲ್ಲಿ ಕೇವಲ ಒಂದು ಪುಟವಷ್ಟೇ ಕಾಣಿಸಿಕೊಂಡಿದ್ದು ಉಳಿದ ಯಾವ ಮಾಹಿತಿಯೂ ಇಲ್ಲದಿರುವುದು ಪಕ್ಷವು ಹಿಂದಿನ ಎಲ್ಲ ದತ್ತಾಂಶಗಳನ್ನು ಕಳೆದುಕೊಂಡಿರುವುದಕ್ಕೆ ಸಾಕ್ಷಿ ಎಂದು ಫ್ರೆಂಚ್ ಭದ್ರತಾ ಸಂಶೋಧಕ ಇಲಿಯಟ್ ಆಲ್ಡರ್ಸನ್ ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X