ಅಕ್ರಮ ಮದ್ಯ ಸಂಗ್ರಹಿಸಿಟ್ಟಿದ್ದ ಮನೆಗೆ ದಾಳಿ: 4 ಲಕ್ಷ ರೂ. ಮೌಲ್ಯದ ವಸ್ತು ಜಪ್ತಿ
ವಿಜಯಪುರ,ಮಾ.22: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ಮನೆಗೆ ದಾಳಿ ಮಾಡಿದ ಅಬಕಾರಿ ಪೊಲೀಸರು 4 ಲಕ್ಷ ರೂ. ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ್ ಗ್ರಾಮದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ಪೊಲೀಸರು ಜಪ್ತಿ ಮಾಡಿದ್ದು, ಮನೆ ಯಜಮಾನ ನಾಗಪ್ಪ ವಡ್ಡರ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.
ವಿಜಯಪುರ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story