Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಅಂಬೇಡ್ಕರ್ ಬದುಕು ಸಾಧನೆಗಳನ್ನು...

ಅಂಬೇಡ್ಕರ್ ಬದುಕು ಸಾಧನೆಗಳನ್ನು ತೆರೆದಿಡುವ ‘ವಿಮೋಚಕನ ಹೆಜ್ಜೆಗಳು’

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ23 March 2019 12:11 AM IST
share
ಅಂಬೇಡ್ಕರ್ ಬದುಕು ಸಾಧನೆಗಳನ್ನು ತೆರೆದಿಡುವ ‘ವಿಮೋಚಕನ ಹೆಜ್ಜೆಗಳು’

‘ವಿಮೋಚಕನ ಹೆಜ್ಜೆಗಳು’ ಡಾ. ಎಚ್. ಎಸ್. ಅನುಪಮಾ ಅವರು ಬರೆದಿರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ಬದುಕು ಸಾಧನೆಗಳ ಕತೆ. ಗಾಂಧಿಯ ಬದುಕಿನ ಮೇಲೆ ಬೆಳಕು ಚೆಲ್ಲಿದಷ್ಟು, ಅಂಬೇಡ್ಕರ್ ಬದುಕಿನ ಮೇಲೆ ಬರಹಗಳು ಬೆಳಕು ಚೆಲ್ಲಿದ್ದು ತೀರಾ ಕಡಿಮೆ. ಅಂಬೇಡ್ಕರ್ ಅವರು ಎರಡು ಬಗೆಯ ಸ್ವಾತಂತ್ರ ಹೋರಾಟದಲ್ಲಿ ಗುರುತಿಸಿಕೊಂಡರು. ಒಂದು, ಬ್ರಿಟಿಷರ ವಿರುದ್ಧ ಭಾರತೀಯರ ಬಿಡುಗಡೆಗಾಗಿ ಹೋರಾಡಿದ್ದಾದರೆ, ಇನ್ನೊಂದು, ಭಾರತೀಯರೆನಿಸಿಕೊಂಡ ಮೇಲ್ಜಾತಿಯಿಂದ ಕೆಳಜಾತಿಗಳ ಬಿಡುಗಡೆಗೆ ನಡೆಸಿದ ಹೋರಾಟ. ಅವರ ಹೋರಾಟಗಳ ಒಳ ಸಂಘರ್ಷಗಳನ್ನು ಈ ಕೃತಿ ಪರಿಣಾಮಕಾರಿಯಾಗಿ ಕಟ್ಟಿಕೊಡುತ್ತದೆ.

ಕೃತಿಯಲ್ಲಿ ಒಟ್ಟು 42 ಅಧ್ಯಾಯಗಳಿವೆ. ದೇಶದ ಜಾತಿ ರಾಜಕೀಯಗಳನ್ನು ವಿಮರ್ಶಿಸುತ್ತಾ, ಅದರ ವಿರುದ್ಧ ಅಂಬೇಡ್ಕರ್ ಹಂತ ಹಂತವಾಗಿ ಹೇಗೆ ಜನರನ್ನು ಸಂಘಟಿತಗೊಳಿಸಿದ್ದರು ಎನ್ನುವ ಕುರಿತ ರೋಚಕ ವಿವರಗಳು ಇದರಲ್ಲಿವೆ. ಅವರ ಬಾಲ್ಯ, ಶಿಕ್ಷಣ, ಅಧ್ಯಯನ ಇವೆಲ್ಲವುಗಳನ್ನು ಆರಂಭದಲ್ಲಿ ಕಟ್ಟಿಕೊಂಡರೆ, ಮಹಾಡ್ ಕೆರೆಯ ನೀರು ಕುಡಿದದ್ದು, ಮನುಸ್ಮತಿ ದಹನ, ಗಾಂಧಿ ಅಂಬೇಡ್ಕರ್ ನಡುವಿನ ತಿಕ್ಕಾಟ, ಪೂನಾ ಒಪ್ಪಂದ, ಹರಿಜನ ಪದ ಬಳಕೆಯ ವಿರುದ್ಧ ಹೋರಾಟ, ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರ, ಚುನಾವಣೆ, ಸ್ವತಂತ್ರ ಕಾರ್ಮಿಕ ಪಕ್ಷ ಸ್ಥಾಪನೆ, ಪತ್ರಿಕಾ ಹೋರಾಟ, ಸಂವಿಧಾನ ರಚನೆಯ ಹಿನ್ನೆಲೆ, ಮುನ್ನೆಲೆ, ಸಂಸಾರಿಗರಾಗಿ ಅಂಬೇಡ್ಕರ್ ...ಹೀಗೆ ಅಂಬೇಡ್ಕರ್ ಸಾಗಿದ ದಾರಿಯನ್ನು ಈ ಕೃತಿ ಅವಲೋಕಿಸುತ್ತದೆ. ಹಾಗೆಯೇ ಅಂಬೇಡ್ಕರ್ ಹೋರಾಟದಲ್ಲಿ ಕೈಜೋಡಿಸಿದ ಸಹಯಾನಿಗಳ ಬಗ್ಗೆಯೂ ವಿವರಗಳನ್ನು ನೀಡುತ್ತದೆ. ಅಂಬೇಡ್ಕರ್‌ರ ಆನಂತರ ಹೇಗೆ ಅಂಬೇಡ್ಕರ್ ಚಿಂತನೆಗಳನ್ನು ತಿರುಚಲು ಸಂಘಪರಿವಾರ ಹವಣಿಸುತ್ತಿದೆ, ಅಂಬೇಡ್ಕರ್ ಚಿಂತನೆಗಳನ್ನು ರಾಜಕೀಯ ಶಕ್ತಿಗಳು ಹೇಗೆ ಮೂಲೆಗುಂಪು ಮಾಡಿದವು ಎನ್ನುವುದನ್ನು ಲೇಖಕಿ ಕೊನೆಯಲ್ಲಿ ಚರ್ಚಿಸುತ್ತಾರೆ.

ಅಂಬೇಡ್ಕರ್ ಕೇವಲ ಸಂಕೇತವಾಗಬಾರದು, ಜಾಗೃತ ಪ್ರಜ್ಞೆಯಾಗಿ ಮನಸ್ಸುಗಳಲ್ಲಿ ಇಳಿಯಬೇಕು, ಹೋರಾಟ ಅಂಬೇಡ್ಕರ್ ಕಾಲಕ್ಕೇ ಮುಗಿದು ಹೋಗಲಿಲ್ಲ. ಅದು ನಿರಂತರ ಮುಂದುವರಿಯಬೇಕು ಎನ್ನುವ ಸದಾಶಯವನ್ನು ಕೃತಿ ತೆರೆದಿಡುತ್ತದೆ.

 ಲಡಾಯಿ ಪ್ರಕಾಶನ ಗದಗ ಈ ಕೃತಿಯನ್ನು ಹೊರತಂದಿದೆ. 300 ಪುಟಗಳ ಈ ಕೃತಿಯ ಮುಖಬೆಲೆ 150 ರೂಪಾಯಿ. ಆಸಕ್ತರು 9480286844 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X