Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲಾ ಮಟ್ಟದ ಭರತಮುನಿ ಜಯಂತಿ...

ದ.ಕ.ಜಿಲ್ಲಾ ಮಟ್ಟದ ಭರತಮುನಿ ಜಯಂತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ24 March 2019 6:44 PM IST
share

ಮಂಗಳೂರು, ಮಾ.24: ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಭರತಮುನಿ ಜಯಂತಿ ಕಾರ್ಯಕ್ರಮ ನಗರದ ಕುದ್ಮುಲ್ ರಂಗರಾವ್ ಪುರಭವನಲ್ಲಿ ರವಿವಾರ ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಇಡ್ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಇಡ್ಯಾ ರಮಾನಂದ ಭಟ್ ನಾಟ್ಯ ಸಂಗೀತ ಕಲೆಗಳಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ದೇವ ದೇವತೆಗಳ ಕಾಲದಿಂದ ಆರಂಭಿಸಿ, ಕಲಿಯುಗದ ವಿಜ್ಞಾನ ಯುಗದಲ್ಲೂ ತನ್ನ ಮೂಲಕ್ಕೆ ಚ್ಯುತಿ ಬರದಂತೆ ಕಲೆಗೆ ಅನುಸಾರವಾಗಿ ಮೆರೆಯುತ್ತಿವೆ. ಭರತಮುನಿಯಿಂದ ಆರಂಭವಾದ ಶಾಸ್ತ್ರೀಯ ನಾಟ್ಯ ಎಲ್ಲ ಕಲೆಗಳಿಗೆ ಮೂಲ ಎಂದರು.

ಉಜಿರೆ ಎಸ್‌ಡಿಎಂ ಕಾಲೇಜಿನ ನಿವೃತ್ತ ಸಂಸ್ಕೃತ ಉಪನ್ಯಾಸಕ ಡಾ. ಮಹಾಬಲ ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಲಲಿತ ಕಲಾ ಕಾಲೇಜು ನೃತ್ಯ ವಿಭಾಗ ಪ್ರಾಧ್ಯಾಪಕ ಡಾ.ಕೆ.ಕುಮಾರ್ ನುಡಿನಮನ ಸಲ್ಲಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್. ಜಿ., ಸಂಸ್ಕಾರ ಭಾರತಿ ಅಧ್ಯಕ್ಷ ಪುರುಷೋತ್ತಮ ಕೆ. ಭಂಡಾರಿ, ನೃತ್ಯ ಗುರು ಉಳ್ಳಾಲ ಮೋಹನ ಕುಮಾರ್, ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ ಅಧ್ಯಕ್ಷ ಪಿ.ಕಮಲಾಕ್ಷ ಆಚಾರ್, ಉಪಾಧ್ಯಕ್ಷ ವಿದ್ವಾನ್ ಯು.ಕೆ. ಪ್ರವೀಣ್, ಕೋಶಾಧಿಕಾರಿ ಶ್ರೀಧರ ಹೊಳ್ಳ ಉಪಸ್ಥಿತರಿದ್ದರು. ಕಾರ್ಯದರ್ಶಿ ಚಂದ್ರಶೇಖರ ನಾವಡ ಸ್ವಾಗತಿಸಿದರು.

ಸನ್ಮಾನ-ಅಭಿನಂದನೆ: ನಾಟ್ಯರಾಣಿ ಶಾಂತಲಾ ಪ್ರಶಸ್ತಿ ಪುರಸ್ಕೃತ ನೃತ್ಯ ಕಲಾವಿದೆ, ಡಾ.ವಸುಂಧರಾ ದೊರೆಸ್ವಾಮಿ ಅವರನ್ನು ಸನ್ಮಾನಿಸಲಾಯಿತು. 2018ನೇ ಸಾಲಿನ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪುರಸ್ಕೃತ ಕೊಲ್ಯ ನಾಟ್ಯ ನಿಕೇತನ ನೃತ್ಯ ವಿದುಷಿ ರಾಜಶ್ರೀ ಉಳ್ಳಾಲ್ ಅವರನ್ನು ಅಭಿನಂದಿಸಲಾಯಿತು.

ಶಾಂತಲಾ ಪ್ರಶಸ್ತಿ ಪುರಸ್ಕೃತ ಬೆಂಗಳೂರಿನ ಪ್ರೊ.ಉಷಾದಾತಾರ್ ಬೆಂಗಳೂರು ಅವರಿಂದ ದೇವಾಲಯ ನೃತ್ಯ ಪ್ರದರ್ಶನ ಮತ್ತು ಉಪನ್ಯಾಸ ನಡೆಯಿತು. ನೃತ್ಯ ಕಲಾ ಗುರುಗಳಿಂದ ಶ್ರೀ ಸರಸ್ವತಿ-ಶ್ರೀ ಲಕ್ಷ್ಮೀ-ಶ್ರೀ ಪಾರ್ವತಿ ತ್ರಿಶಕ್ತಿ ನೃತ್ಯ ಪ್ರದರ್ಶನ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X