ಕಲ್ಲು ಎತ್ತಿ ಹಾಕಿ ಭದ್ರತಾ ಸಿಬ್ಬಂದಿ ಹತ್ಯೆ

ಬೆಂಗಳೂರು, ಮಾ.24: ಕಲ್ಲು ಎತ್ತಿ ಹಾಕಿ ಭದ್ರತಾ ಸಿಬ್ಬಂದಿಯೊಬ್ಬನನ್ನು ಹತ್ಯೆ ಮಾಡಿರುವ ರ್ದುಘಟನೆ ಇಲ್ಲಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪದ್ಮನಾಭನಗರದ ಮುಖ್ಯರಸ್ತೆಯ ಕರ್ನಾಟಕ ಬ್ಯಾಂಕ್ ಮುಂಭಾಗ ಈ ಘಟನೆ ನಡೆದಿದ್ದು, ಬಾಗಲಕೋಟೆಯ ಲಿಂಗಪ್ಪ(62) ಎಂಬುವರು ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.
ಗೌಡಯ್ಯನ ಪಾಳ್ಯದಲ್ಲಿ ನೆಲೆಸಿದ್ದ ಮೃತ ಲಿಂಗಪ್ಪ, ಕಳೆದ ನಾಲ್ಕು ವರ್ಷಗಳಿಂದ ಬ್ಯಾಂಕಿನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಆದರೆ, ಶನಿವಾರ ರಾತ್ರಿ ಮಲಗಿದ್ದಾಗ ದುಷ್ಕರ್ಮಿಗಳು ಲಿಂಗಪ್ಪ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು, ದುಷ್ಕರ್ಮಿಗಳು ಬ್ಯಾಂಕ್, ಎಟಿಎಂಗೆ ಯಾವುದೇ ರೀತಿಯಲ್ಲಿ ಹಾನಿ ಮಾಡಿಲ್ಲ. ರವಿವಾರ ಮುಂಜಾನೆ ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಈ ಸಂಬಂಧ ಕುಮಾರಸ್ವಾಮಿ ಲೇಔಟ್‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.
Next Story





