Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುವರ್ಣ ತ್ರಿಭುಜ ಬೋಟು ನಾಪತ್ತೆ ಹಿಂದೆ...

ಸುವರ್ಣ ತ್ರಿಭುಜ ಬೋಟು ನಾಪತ್ತೆ ಹಿಂದೆ ನೌಕಾಪಡೆಯ ಕೈವಾಡದ ಬಗ್ಗೆ ಸಂಶಯ: ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ

ವಾರ್ತಾಭಾರತಿವಾರ್ತಾಭಾರತಿ24 March 2019 8:18 PM IST
share
ಸುವರ್ಣ ತ್ರಿಭುಜ ಬೋಟು ನಾಪತ್ತೆ ಹಿಂದೆ ನೌಕಾಪಡೆಯ ಕೈವಾಡದ ಬಗ್ಗೆ ಸಂಶಯ: ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ

ಉಡುಪಿ, ಮಾ. 24: ಸುವರ್ಣ ತ್ರಿಭುಜ ಬೋಟು ನಾಪತ್ತೆ ಹಿಂದೆ ನೌಕಾಪಡೆಯ ಕೈವಾಡ ಇರುವ ಬಗ್ಗೆ ಸಂಶಯ ಮೂಡುತ್ತದೆ. ಮೀನುಗಾರರ ಬೋಟಿಗೆ ನೌಕಾಪಡೆಯ ಹಡಗು ಅಪಘಾತ ಎಸಗಿ ಹಿಟ್ ಆ್ಯಂಡ್ ರನ್ ಮಾಡಿದೆ. ಅದರ ನಂತರ ನೌಕಾಪಡೆ ಹುಡುಕುವ ನಾಟಕ ಮಾಡಿದೆ. ಈ ಕುಕೃತ್ಯ ಎಸಗಿರುವ ನೌಕಾಪಡೆ, ಅದನ್ನು ಚುನಾವಣೆಯವರೆಗೆ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ ಮಾಡಿದ್ದಾರೆ.

ಉಡುಪಿ ಕಾಂಗ್ರೆಸ್ ಭವನದಲ್ಲಿ ರವಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀನುಗಾರರು ನಾಪತ್ತೆಯಾಗಿ ಮೂರು ತಿಂಗಳಾ ದರೂ ಇನ್ನೂ ಸುಳಿವು ಸಿಕ್ಕಿಲ್ಲ. ನೌಕಾಪಡೆಗೆ ಬೋಟು ಸಹಿತ ಮೀನುಗಾರರನ್ನು ಪತ್ತೆ ಮಾಡಲು ಈವರೆಗೆ ಸಾಧ್ಯವಾಗಿಲ್ಲ. ಈ ಪ್ರಕರಣದಲ್ಲಿ ಸಂಪೂರ್ಣ ವೈಫಲ್ಯ ಕಂಡಿರುವ ಕೇಂದ್ರ ಸರಕಾರ, ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಮೀನುಗಾರರಿಗೆ ದ್ರೋಹ ಎಸಗಿದ್ದಾರೆ ಎಂದು ಟೀಕಿಸಿದರು.

ಕಳೆದ ಐದು ವರ್ಷಗಳಲ್ಲಿ ಕೇಂದ್ರ ಸರಕಾರ ಮೀನುಗಾರಿಗಾಗಿ ಯಾವುದೇ ವಿಶೇಷ ಯೋಜನೆಯನ್ನು ಹಮ್ಮಿಕೊಂಡಿಲ್ಲ. ಕೇಂದ್ರ ಸರಕಾರ ಚಿಕ್ಕಾಸು ಡಿಸೇಲ್ ಸಬ್ಸಿಡಿ ಹಾಗೂ ಒಂದು ಲೀಟರ್ ಸೀಮೆಎಣ್ಣೆಯನ್ನು ಮೀನುಗಾರರು ನೀಡಿಲ್ಲ. ಈ ಬಗ್ಗೆ ಕರಾವಳಿಯ ಸಂಸದರು ಮೀನುಗಾರರಿಗೆ ನ್ಯಾಯ ಒದಗಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಮೀನುಗಾರರ ಯೋಜನೆಗಳಿಗೆ ನೀಡುವ ಅನು ದಾನವನ್ನು ಮೋದಿ ಸರಕಾರ ಕಡಿತ ಮಾಡಿದೆ ಎಂದು ಅವರು ದೂರಿದರು.

ಬ್ಯಾಂಕ್ ಸಾಲ ವಂಚನೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಪ್ರಮೋದ್ ಮಧ್ವ ರಾಜ್, ಟಿ.ಜೆ. ಅಬ್ರಾಹಂ ಬ್ಲಾಕ್‌ಮೇಲ್ ಮಾಡುವ ವ್ಯಕ್ತಿ. ನಾವು ಯಾರಿಗೂ ವಂಚನೆ ಮಾಡಿದವರಲ್ಲ. ಇದು ಸಂಪೂರ್ಣ ಸುಳ್ಳು ಆರೋಪ. ಕೇವಲ ಬ್ಲಾಕ್ ಮೇಲ್ ಮಾಡಲು, ಹಣ ಕೇಳಲು ಅಬ್ರಾಹಂ ಈ ರೀತಿ ಮಾಡುತ್ತಿದ್ದಾರೆ. ಅಬ್ರಾಹಂರನ್ನು ಜೈಲಿಗೆ ಹಾಕುವ ಉದ್ದೇಶದಿಂದ ಕ್ರಿಮಿನಲ್ ಕೇಸು ದಾಖಲಿಸಿದ್ದೇನೆ. ಅಗತ್ಯ ಬಿದ್ದರೆ 10 ಕೋಟಿ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸ ಲಾಗುವುದು ಎಂದರು.

ಅಬ್ರಾಹಂ ಕೇವಲ ಚುನಾವಣೆ ಸಂದರ್ಭದಲ್ಲಿ ಬಂದು ನನ್ನ ವಿರುದ್ಧ ಆರೋಪ ಮಾಡುತ್ತಿರುವುದರ ಹಿಂದೆ ಬಿಜೆಪಿಯವರ ಕೈವಾಡ ಇದೆ. ಇದು ಚುನಾವಣೆ ಸಂದರ್ಭ ಆಗಿರುವುದರಿಂದ ಬಿಜೆಪಿ ಅಭ್ಯರ್ಥಿಯ ಕಡೆಯವರೇ ಈ ರೀತಿ ಮಾಡಿಸಿರಬೇಕು. ನನ್ನ ವಿರುದ್ಧ ಯಾವುದೇ ಆರೋಪ ಮಾಡಲು ಇಲ್ಲದಕ್ಕೆ ಇಂತಹ ಸುಳ್ಳು ಗಳನ್ನು ಸೃಷ್ಟಿ ಮಾಡುತ್ತಿದ್ದಾರೆ ಎಂದು ಪ್ರಮೋದ್ ಮಧ್ವ ರಾಜ್ ದೂರಿದರು.

ಟಿಕೆಟ್ ಆಕಾಂಕ್ಷಿಯಾಗಿದ್ದ ಎಐಸಿಸಿ ಸದಸ್ಯ ಅಮೃತ್ ಶೆಣೈ ಅವರಿಗೆ ಬೇಸರ ಇದೆ. ಅದನ್ನು ನಾವು ಮಾತುಕತೆ ಮೂಲಕ ಬಗೆಹರಿಸುತ್ತೇವೆ. ಕಾಂಗ್ರೆಸ್ ಪಕ್ಷದಲ್ಲಿ ನನ್ನ ಸಹಿತ ಹಲವು ಮಂದಿ ಆಕಾಂಕ್ಷಿಯಾಗಿದ್ದರು ಎಂದು ಪ್ರಮೋದ್ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ.ಬಾವಾ, ಎಂ.ಎ.ಗಫೂರ್, ಮಾಜಿ ಶಾಸಕ ಯು.ಆರ್. ಸಭಾಪತಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಭರತ್ ಮುಂದೋಡಿ, ಮುರಳಿ ಶೆಟ್ಟಿ, ವಿಶ್ವಾಸ್ ಅಮೀನ್, ಪ್ರಖ್ಯಾತ್ ಶೆಟ್ಟಿ, ಸತೀಶ್ ಅಮೀನ್ ಪಡುಕೆರೆ, ಯತೀಶ್ ಕರ್ಕೇರ, ಸ್ವಪ್ನಾ ಶ್ರೀನಿವಾಸ್, ಕೀರ್ತಿ ಶೆಟ್ಟಿ ಉಪಸ್ಥಿತರಿದ್ದರು.

ಶೋಭಾ ವರ್ಸಸ್ ಪ್ರಮೋದ್ ಸ್ಪರ್ಧೆ

ಈ ಚುನಾವಣೆ ಪ್ರಮೋದ್ ವರ್ಸಸ್ ಶೋಭಾವೇ ಹೊರತು ಮೋದಿ ವರ್ಸಸ್ ಪ್ರಮೋದ್ ಅಲ್ಲ. ಈ ಕ್ಷೇತ್ರದಲ್ಲಿ ಮೋದಿ ಚುನಾವಣೆ ನಿಲ್ಲುತ್ತಿಲ್ಲ. ಮೋದಿ ಹೆಸರಿನಲ್ಲಿ ಗೆದ್ದು ಬಂದ ಶೋಭಾ ಕಳೆದ ಐದು ವರ್ಷಗಳಿಂದ ಕ್ಷೇತ್ರ ದಲ್ಲಿ ಏನು ಕೆಲಸ ಮಾಡಿಲ್ಲ. ಕೆಲಸ ಮಾಡದಿದ್ದರೂ ಮತ್ತೆ ಮೋದಿ ಹೆಸರಿನಲ್ಲಿ ಗೆದ್ದು ಬರುತ್ತೇನೆ ಎಂಬ ಧೋರಣೆಯಲ್ಲಿ ಅವರು ಇದ್ದಾರೆ ಎಂದು ಪ್ರಮೋದ್ ಮಧ್ವರಾಜ್ ಹೇಳಿದರು.

ನಾನು ಕಾಂಗ್ರೆಸ್-ಜೆಡಿಎಸ್ ಜಂಟಿ ಅಭ್ಯರ್ಥಿಯಾಗಿ ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡುತ್ತಿದ್ದೇನೆ. ನಾಮಪತ್ರಕ್ಕೆ ಸಂಬಂಧಿಸಿ ಪಕ್ಷಗಳ ತಾಂತ್ರಿಕ ವಿಚಾರಗಳ ಬಗ್ಗೆ ನಾವು ಯೋಚನೆ ಮಾಡುವುದಿಲ್ಲ. ಅದರಿಂದ ಯಾರಿಗೂ ತೊಂದರೆನೂ ಇಲ್ಲ ಲಾಭನೂ ಇಲ್ಲ. ಅದನ್ನು ಜೆಡಿಎಸ್‌ನವರು ನೋಡಿಕೊಳ್ಳು ತ್ತಾರೆ ಎಂದು ಅವರು ತಿಳಿಸಿದರು.

ಮಾ. 25ರಂದು ಮಧ್ಯಾಹ್ನ ಒಂದು ಗಂಟೆಗೆ ಕಾಂಗ್ರೆಸ್ ಕಚೇರಿಯಿಂದ ಹೊರಟು ಮಧ್ಯಾಹ್ನ 2 ರಿಂದ 3ಗಂಟೆ ಮಧ್ಯಾವಧಿಯಲ್ಲಿ ನಾಮಪತ್ರ ಸಲ್ಲಿಸಲಾಗುವುದು. ಈ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಾಮಾಲ, ಶಿವಮೊಗ್ಗ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಮತ್ತು ಎರಡು ಜಿಲ್ಲೆಗಳ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ನಾಲ್ಕು ಜಿಲ್ಲಾಧ್ಯಕ್ಷರು ಕೂಡ ಹಾಜರಿರುತ್ತಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X