Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆ: ನಿಟ್ಟೆ ವಾಕ್ - ಶ್ರವಣ...

ದೇರಳಕಟ್ಟೆ: ನಿಟ್ಟೆ ವಾಕ್ - ಶ್ರವಣ ಕಾಲೇಜು ಒಂಬತ್ತನೇ ಪದವಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ24 March 2019 8:35 PM IST
share
ದೇರಳಕಟ್ಟೆ: ನಿಟ್ಟೆ ವಾಕ್ - ಶ್ರವಣ ಕಾಲೇಜು ಒಂಬತ್ತನೇ ಪದವಿ ಪ್ರದಾನ ಸಮಾರಂಭ

ಉಳ್ಳಾಲ: ಪದವೀಧರು ಉನ್ನತ ಶಿಕ್ಷಣದಲ್ಲಿ ಹಾಗೆಯೇ ವೃತ್ತಿ ಬದುಕಿನಲ್ಲಿ ಶಿಸ್ತು ಹಾಗೂ ಮಾನವೀಯ ಮೌಲ್ಯಗಳನ್ನು ಕಾಪಾಡುತ್ತಾ ಪೋಷಕರು, ಶಿಕ್ಷಣ ನೀಡಿದ ಗುರುಗಳು ಹಾಗೂ ಶಿಕ್ಷಣ ಪಡೆದ ವಿದ್ಯಾಸಂಸ್ಥೆಯ ಹೆಸರು ಪಸರಿಸುವ ಕಾರ್ಯ ಮಾಡಬೇಕು  ಎಂದು ಮಂಗಳೂರು ವಿವಿಯ ಕುಲಸಚಿವ ಪ್ರೊ.ಎ.ಎಂ. ಖಾನ್ ಹೇಳಿದರು.

ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಡಿಟೋರಿಯಂನಲ್ಲಿ ಶನಿವಾರ ನಡೆದ ನಿಟ್ಟೆ ಪರಿಗಣಿಸಲಾಗಿರುವ ವಿವಿಯ ಅಧೀನದ ನಿಟ್ಟೆ ವಾಕ್ ಮತ್ತು ಶ್ರವಣ ಕಾಲೇಜಿನ ಒಂಬತ್ತನೇ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ವಾಕ್ ಮತ್ತು ಶ್ರವಣ ಸಂಬಂಧಿ ಶಿಕ್ಷಣ ಪಡೆಯುವುದರಿಂದ ಅಶಕ್ತರ ಸೇವೆ ಮಾಡುವಂತಹ ಅವಕಾಶ ಲಭಿಸುತ್ತದೆ. ಹಾಗೆಯೇ ಪದವೀಧರರು ತಾವು ಗೈದ ಪ್ರತಿಜ್ಞೆಗೆ ಬದ್ಧವಾಗಿ ಬದುಕಬೇಕು. ಡಾ. ಎ.ಪಿ.ಜೆ. ಕಲಾಂ, ವಿವೇಕಾನಂದ ಅವರಂತೆ ಒಂದು ಶಾಶ್ವತವಾದ ವ್ಯಕ್ತಿತ್ವ ಉಳಿಸಿಕೊಳ್ಳುವತ್ತ ಕಠಿಣ ಶ್ರಮ ವಹಿಸಿ ಉದ್ದೇಶಿತ ಗುರಿ ತಲುಪಬೇಕು. ಯಾವುದೇ ಸೇವೆಯನ್ನು ಮನಪೂರ್ವಕವಾಗಿ ಮಾಡಬೇಕು. ಭಾರತದ ದೊಡ್ಡ ಶಕ್ತಿ ಯುವ ಜನತೆಯಾಗಿದ್ದು ಪ್ರತಿ ಹಂತದಲ್ಲೂ ಲಕ್ಷ್ಯ ಮುಟ್ಟುವ ತನಕ ಪ್ರಯತ್ನಿಸಬೇಕು ಎಂದರು.

ಯುವಜನತೆ ತಮಗೆ ಸಿಕ್ಕ ಅಮೂಲ್ಯವಾದ ಸಮಯವನ್ನು ಯಾವುದೇ ಕಾರಣಕ್ಕೂ ಪೋಲಾಗದಂತೆ ನೋಡಬೇಕು. ಮೊಬೈಲ್,  ಅಂತರ್ಜಾಲದ ಬಳಕೆ ನಮ್ಮ ಹಾಗೂ ಸಮಾಜದ ಏಳಿಗೆಗೆ ಪೂರಕವಾಗಿರಬೇಕು. ಉತ್ತಮ ಭವಿಷ್ಯ ನಿರ್ಮಾಣ ದೃಷ್ಟಿಯಿಂದ ಪದವಿ ಪಡೆಯುವುದೊಂದೇ ಜ್ಞಾನಕ್ಕೆ ಸೀಮಿತವಾ ಗಬಾರದು. ಪ್ರತಿ ಶಿಕ್ಷಣವೂ ನಮ್ಮ ಜ್ಞಾನ ಹಾಗೂ ಕೌಶಲ್ಯದ ವೃದ್ಧಿಗೆ ಪೂರಕವಾಗಬೇಕು. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮನ್ನು ನಾವು ಇತರರ ಜೊತೆ ಹೋಲಿಸಿ ನೋಡಲೇಬಾರದು ಎಂದು ನುಡಿದರು.

ನಿಟ್ಟೆ ಪರಿಗಣಿಸಲಾಗಿರುವ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಪದವೀಧರರಲ್ಲಿ ಸಾಧನೆಯ ತುಡಿತ ಸದಾ ಇರಬೇಕು. ಏನಾದರೂ ಉನ್ನತವಾದುದನ್ನು ಸಾಧಿಸಬೇಕು. ಉನ್ನತ ಶಿಕ್ಷಣ, ವೃತ್ತಿ ಬದುಕಿನಲ್ಲಿ ಮುನ್ನಡೆಯುವಾಗ ಯಶಸ್ಸಿಗಾಗಿ ಶ್ರಮಿಸಬೇಕು. ಆ ಮೂಲಕ ಜ್ಞಾನವಂತ, ಗುಣವಂತರಾಗಿ ಗುರುತಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕಾರಿಸಲಾಯಿತು. ಶರೆಲ್ ಲೋಪೆಸ್ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಆಗಿ ಹೊರ ಹೊಮ್ಮಿದರು.

ವಾಕ್ ಮತ್ತು ಶ್ರವಣ ಪರೀಕ್ಷೆಯಲ್ಲಿ 2015-19ರ ಸಾಲಿನಲ್ಲಿ ಮಂಗಳೂರು ವಿವಿಯ ಪ್ರಥಮ ರ್ಯಾಂಕ್ ವಿಜೇತ ಸಹನಾ ಹಾಗೂ ದ್ವಿತೀಯ ರ್ಯಾಂಕ್ ಪಡೆದ ಸ್ಪೂರ್ತಿ ಜಿ.ಎನ್. ಅವರಿಗೆ ನಗದು ಬಹುಮಾನ, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಲಾಯಿತು. ಶರೆಲ್ ಲೋಪೆಸ್ ತನ್ನ ಕಾಲೇಜು ಜೀವನ ಅನಿಸಿಕೆ ಹಂಚಿಕೊಂಡರು.

ನಿಟ್ಟೆ ವಾಕ್ ಮತ್ತು ಶ್ರವಣ ಕಾಲೇಜು ನಿರ್ದೇಶಕ ಪ್ರೊ. ಟಿ. ದತ್ತಾತ್ರೇಯ ಸ್ವಾಗತಿಸಿದರು. ಕಾಲೇಜು ಪ್ರಿನ್ಸಿಪಾಲ್ ಶ್ವೇತಾ ಪದವಿ ಪ್ರದಾನ ಪ್ರತಿಜ್ಞಾ ವಿಧಿ ಬೋಧಿಸಿದರು. ಎಸೋಸಿಯೇಟ್ ಪ್ರೊ. ದೀಪ್ತಿ ಕೆ.ಜೆ ಪದವೀಧರರ ಹೆಸರು ವಾಚಿಸಿದರು. ಉಪನ್ಯಾಸಕಿ ಅಖಿಲಾ ರಾಹುಲ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಅರ್ಚನಾ ರೈ ವಂದಿಸಿದರು.

ಸಮಾರಂಭದಲ್ಲಿ ವಿದ್ಯಾರ್ಥಿಗಳಾದ ಅಲಿನಾ ಥೋಮಸ್, ಅಮೀನಾ ಅಸ್ಮಿ ಎ.ಎಸ್, ಅನು ಜೋಸ್ , ಅನುಮೋಲ್ ಕೆ., ಆರ್ಯ ವಿಜಯ್, ಡಾಲಿಯಾ ಥೋಮಸ್, ದ್ರಿಪತ್ ವಿ.ಎಸ್, ಹಿಮಾ ಪಿ. ವೇಣು, ಜೆನಿಮೋಲ್ ಥೋಮಸ್, ಲೇಕ್ಷಣಾ ಉಮೇಶ್, ಮಮತಾ ಎಲ್ಮಾ ಸಕಾರಿಯಾ, ಮನುಶ್ರೀ ಮನ್ಮದನ್, ಮರಿಯಾ ಶಾಜು, ಮೇಘಾ ಸಾರಾ ಥೋಮಸ್, ಮೌಸಿರಾ ಪಿ., ನಮಿತಾ ಜೇಮ್ಸ್, ನೀಮಾ ಎನ್, ರಿಂಕು ಜೋನ್, ಶಹನಾ, ಶರೆಲ್ ಲೋಪೆಸ್, ಶಮಿಮೋಲ್ ಥೋಮಸ್, ಶಿಲ್ಪಾ ಪಿ.ಪಿ, ಸೋನಿಯಾ ಥೋಮಸ್, ಸ್ಪೂರ್ತಿ ಜಿ.ಎನ್, ಶ್ರೀಲಕ್ಷ್ಮಿ ಎ.ಎಸ್, ಸ್ಟೆಪಿ ರೇಸೆಲ್ ಫಿಲಿಪ್ ಪದವಿ ಸರ್ಟಿಫಿಕೇಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X