Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 5ನೇ ಬಾರಿ ಮುಖಾಮುಖಿಯಾಗುತ್ತಿರುವ...

5ನೇ ಬಾರಿ ಮುಖಾಮುಖಿಯಾಗುತ್ತಿರುವ ಯಡಿಯೂರಪ್ಪ - ಬಂಗಾರಪ್ಪ ಕುಟುಂಬದಲ್ಲಿ ಜಯ ಯಾರಿಗೆ ?

ವರದಿ: ಬಿ.ರೇಣುಕೇಶ್ವರದಿ: ಬಿ.ರೇಣುಕೇಶ್24 March 2019 10:34 PM IST
share
5ನೇ ಬಾರಿ ಮುಖಾಮುಖಿಯಾಗುತ್ತಿರುವ ಯಡಿಯೂರಪ್ಪ - ಬಂಗಾರಪ್ಪ ಕುಟುಂಬದಲ್ಲಿ ಜಯ ಯಾರಿಗೆ ?

ಶಿವಮೊಗ್ಗ, ಮಾ. 24: ಪ್ರಸ್ತುತ ಕುಟುಂಬ ರಾಜಕಾರಣ ಹಾಗೂ ಪ್ರಾಬಲ್ಯದ ಬಗ್ಗೆ, ರಾಜ್ಯದಲ್ಲಿ ಗಹನವಾದ ಚರ್ಚೆಗಳಾಗುತ್ತಿವೆ. ಶಿವಮೊಗ್ಗ ಜಿಲ್ಲೆ ಕೂಡ ಕುಟುಂಬ ರಾಜಕಾರಣದಿಂದ ಹೊರತಾಗಿಲ್ಲ. ಅದರಲ್ಲಿಯೂ ಬಿ.ಎಸ್.ಯಡಿಯೂರಪ್ಪ ಹಾಗೂ ಎಸ್.ಬಂಗಾರಪ್ಪ ಕುಟುಂಬಗಳು, ಕಳೆದ ಹಲವು ದಶಕಗಳಿಂದ ಜಿಲ್ಲೆಯಲ್ಲಿ ಪ್ರಾಬಲ್ಯ ಮೆರೆಯುವುದರ ಜೊತೆಗೆ, ಮಹತ್ವದ ಪಾತ್ರ ವಹಿಸುತ್ತಿವೆ.

ಕಳೆದ ಒಂದು ದಶಕಕ್ಕೂ ಹೆಚ್ಚಿನ ಅವದಿಯಲ್ಲಿ, ಈ ಎರಡು ಕುಟುಂಬಗಳ ಸದಸ್ಯರು ಮೂರು ಲೋಕಸಭೆ ಹಾಗೂ ಒಂದು ವಿಧಾನಸಭೆ ಚುನಾವಣೆಯಲ್ಲಿ ಪರಸ್ಪರ ಮುಖಾಮುಖಿಯಾಗಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ನಡೆದ ಲೋಕಸಭೆ ಉಪ ಚುನಾವಣೆ ಸೇರಿದಂತೆ, ಎಲ್ಲ ಚುನಾವಣೆಗಳಲ್ಲಿಯೂ ಬಿ.ಎಸ್.ಯಡಿಯೂರಪ್ಪ ಕುಟುಂಬವೇ ಮೇಲುಗೈ ಸಾಧಿಸಿದೆ.

ಪ್ರಸ್ತುತ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿಯೂ ಈ ಎರಡು ಕುಟುಂಬಗಳು ಎದುರಾಳಿಯಾಗಿವೆ. ನೇರ ಹಣಾಹಣಿಗೆ ವೇದಿಕೆ ನಿರ್ಮಾಣವಾಗಿದೆ. ಇದರಿಂದ ಶಿವಮೊಗ್ಗ ಕ್ಷೇತ್ರ ರಾಜ್ಯದ 'ಹೈವೋಲ್ಟೇಜ್' ಕಣಗಳಲ್ಲೊಂದಾಗಿದೆ. ಈ ಬಾರಿ ಜಯ ಯಾವ ಕುಟುಂಬದ ಪಾಲಾಗಲಿದೆ ಎಂಬುವುದು ಇನ್ನಷ್ಟೆ ಸ್ಪಷ್ಟವಾಗಬೇಕಾಗಿದೆ.

ಅಪ್ಪಂದಿರ ಅಖಾಡ: ಮೊದಲ ಬಾರಿಗೆ 2008 ರ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ-ಬಂಗಾರಪ್ಪ ಕುಟುಂಬ ಎದುರಾಳಿಯಾಗಿದ್ದವು. ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದ ಬಿಎಸ್‍ವೈ ಎದುರು, ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಎಸ್.ಬಂಗಾರಪ್ಪ ಸ್ಪರ್ದಿಸಿದ್ದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಬಂಗಾರಪ್ಪಗೆ ಬೆಂಬಲಿಸಿದ್ದವು. ಬಿ.ಎಸ್.ಯಡಿಯೂರಪ್ಪರವರು 83,491 ಮತ ಪಡೆದು, 45,927 ಮತಗಳ ಅಂತರದಲ್ಲಿ ಜಯ ಸಂಪಾದಿಸಿದ್ದರು. ಆದರೆ ಭಾರೀ ಕುತೂಹಲ ಕೆರಳಿಸಿದ್ದ, ಬಂಗಾರಪ್ಪರವರು ಕೇವಲ 37,564 ಮತ ಪಡೆದು ಹೀನಾಯ ಸೋಲನುಭವಿಸಿದ್ದರು.

ಪುತ್ರನ ಸ್ಪರ್ಧೆ: 2009ರ ಲೋಕಸಭೆ ಚುನಾವಣೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್.ಬಂಗಾರಪ್ಪ ಕಣಕ್ಕಿಳಿದಿದ್ದರು. ಆ ವೇಳೆ ಸಿಎಂ ಆಗಿದ್ದ ಬಿಎಸ್ ವೈ ರವರು, ತಮ್ಮ ಪುತ್ರ ಬಿ.ವೈ.ರಾಘವೇಂದ್ರರನ್ನು ಬಿಜೆಪಿಯಿಂದ ಕಣಕ್ಕಿಳಿಸಿದ್ದರು. ಬಿ.ವೈ.ರಾಘವೇಂದ್ರರವರು 4,82,783 ಮತ ಪಡೆದು, 52,893 ಮತಗಳ ಅಂತರದಲ್ಲಿ ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಿದ್ದರು. ಎಸ್.ಬಂಗಾರಪ್ಪರವರು 4,29,890 ಮತ ಪಡೆದು, ಪ್ರಬಲ ಸ್ಪರ್ಧೆ ನೀಡಿದ್ದರು.

ಪುತ್ರಿಯ ಸವಾಲು: ಬದಲಾದ ರಾಜಕೀಯ ಬೆಳವಣಿಗೆಯಲ್ಲಿ, 2014 ರ ಲೋಕಸಭೆ ಚುನಾವಣೆಯಲ್ಲಿ ಬಿಎಸ್ ವೈ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ನಡುವೆ, ಬಂಗಾರಪ್ಪರ ಪುತ್ರಿ ಹಾಗೂ ಚಿತ್ರನಟ ಶಿವರಾಜ್‍ಕುಮಾರ್ ರವರ ಪತ್ನಿ, ಗೀತಾ ಶಿವರಾಜ್‍ಕುಮಾರ್ ರವರು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಕಾಂಗ್ರೆಸ್ ಪಕ್ಷದಿಂದ ಮಂಜುನಾಥ ಭಂಡಾರಿ ಸ್ಪರ್ಧಿಸಿದ್ದರು.

ನರೇಂದ್ರ ಮೋದಿ ಅಲೆಯಲ್ಲಿ, ಶಿವಮೊಗ್ಗ ಕ್ಷೇತ್ರದಲ್ಲಿ ಜೆಡಿಎಸ್ ಅಕ್ಷರಶಃ ಧೂಳೀಪಟವಾಗಿತ್ತು. ಬಿಎಸ್ ವೈ ರವರು 6,06,216 ಮತ ಪಡೆದು 3,63,305 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರು. 2 ನೇ ಸ್ಥಾನ ಪಡೆದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿಯವರು 2,42,911 ಹಾಗೂ ಗೀತಾ ಶಿವರಾಜ್‍ಕುಮಾರ್ ರವರು 2,40,636 ಮತ ಪಡೆದಿದ್ದರು.

ಪುತ್ರರ ಮುಖಾಮುಖಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಂಸದ ಬಿಎಸ್ ವೈ ರವರು ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಈ ಕಾರಣದಿಂದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗ ಕಳೆದ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಚುನಾವಣೆ ನಡೆಸಿತ್ತು. ಬಿಜೆಪಿಯಿಂದ ಬಿಎಸ್ ವೈ ಪುತ್ರ ಬಿವೈಆರ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಬಂಗಾರಪ್ಪ ಪುತ್ರ ಮಧು ಕಣಕ್ಕಿಳಿದಿದ್ದರು.

ಜಿದ್ದಾಜಿದ್ದಿನ ಅಖಾಡಕ್ಕೆ ಸಾಕ್ಷಿಯಾಗಿದ್ದ ಈ ಉಪ ಚುನಾವಣೆಯಲ್ಲಿ, ಮತ್ತೆ ಬಿಎಸ್.ವೈ ಕುಟುಂಬ ಪ್ರಾಬಲ್ಯ ಮೆರೆದಿತ್ತು. ಬಿವೈಆರ್ 5,43,306 ಮತ ಪಡೆದು, 52,148 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರು. ಮಧು ಬಂಗಾರಪ್ಪರವರು 4,91,158 ಮತ ಗಳಿಸಿದ್ದರು.

ಮತ್ತೆ ಪುತ್ರರು: ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿಯೂ, ಬಿಎಸ್ವೈ ಹಾಗೂ ಬಂಗಾರಪ್ಪ ಪುತ್ರರು ಮತ್ತೆ ಕಣಕ್ಕಿಳಿದಿದ್ದಾರೆ. ಇಬ್ಬರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಜಯ ಯಾರ ಪಾಲಾಗಲಿದೆ ಎಂಬುವುದನ್ನು ಇನ್ನಷ್ಟೆ ಕಾದು ನೋಡಬೇಕಾಗಿದೆ.

share
ವರದಿ: ಬಿ.ರೇಣುಕೇಶ್
ವರದಿ: ಬಿ.ರೇಣುಕೇಶ್
Next Story
X