ಚಾಮರಾಜನಗರ ಲೋಕಸಭಾ ಕ್ಷೇತ್ರ: 12 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಚಾಮರಾಜನಗರ, ಮಾ.27: ಚಾಮರಾಜನಗರ ಲೋಕಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯ ಇಂದು ನಡೆದಿದ್ದು, ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗಿದೆ. ಒಟ್ಟು 13 ಅಭ್ಯರ್ಥಿಗಳ ಪೈಕಿ 12 ಅಭ್ಯಥಿಗಳ ನಾಮಪತ್ರ ಕ್ರಮಬದ್ಧವಾಗಿದೆ.
ಭಾರತೀಯ ಬಹುಜನ ಕ್ರಾಂತಿದಳ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದ ಎಸ್. ಗೋವಿಂದನಾಯಕ್ ಅವರ ನಾಮಪತ್ರ ತಿರಸ್ಕೃತವಾಗಿದೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರು ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರಗಳ ಪರಿಶೀಲನೆ ನಡೆಸಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ ಕಪ ಕೊಲೈ ಅವರ ಸಮ್ಮುಖದಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಿತು.
ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಗಳ ಪರ ಪ್ರತಿನಿಧಿಗಳ ಸಮ್ಮುಖದಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯವು ನೆರವೇರಿತು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್ ಉಪಸ್ಥಿತರಿದ್ದರು.
ಅಂತಿಮವಾಗಿ 12 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದ್ದು, ಅವರ ವಿವರ ಇಂತಿದೆ.
ಆರ್. ಧ್ರುವನಾರಾಯಣ (ಕಾಂಗ್ರೆಸ್), ಡಾ. ಶಿವಕುಮಾರ (ಬಹುಜನ ಸಮಾಜ ಪಾರ್ಟಿ), ವಿ. ಶ್ರೀನಿವಾಸ ಪ್ರಸಾದ್ (ಭಾರತೀಯ ಜನತಾ ಪಾರ್ಟಿ), ಎಂ. ನಾಗರಾಜು (ಉತ್ತಮ ಪ್ರಜಾಕೀಯ ಪಾರ್ಟಿ), ಪ್ರಸನ್ನಕುಮಾರ್ ಬಿ. (ಕರ್ನಾಟಕ ಪ್ರಜಾ ಪಾರ್ಟಿ (ರೈತಪರ್ವ), ಸುಬ್ಬಯ್ಯ (ಇಂಡಿಯನ್ ನ್ಯೂ ಕಾಂಗ್ರೆಸ್ ಪಾರ್ಟಿ), ಆನಂದ. ಜಿ. (ಪಕ್ಷೇತರ), ಎನ್.ಅಂಬರೀಷ್ (ಪಕ್ಷೇತರ), ಎಂ.ಪ್ರದೀಪ್‍ಕುಮಾರ್ (ಪಕ್ಷೇತರ), ಜಿ.ಡಿ.ರಾಜಗೋಪಾಲ್ (ಪಕ್ಷೇತರ), ಎಸ್.ಎಂ. ಲಿಂಗಯ್ಯ (ಪಕ್ಷೇತರ), ಎಂ. ಹೊನ್ನೂರಯ್ಯ(ಪಕ್ಷೇತರ).







