ತುಮಕೂರು ಲೋಕಸಭಾ ಕ್ಷೇತ್ರ: 19 ಅಭ್ಯರ್ಥಿಗಳ ನಾಮಪತ್ರ ಸಿಂಧು
ತುಮಕೂರು, ಮಾ.27: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬುಧವಾರ ನಡೆದ ನಾಮಪತ್ರ ಪರಿಶೀಲನೆಯಲ್ಲಿ 19 ಅಭ್ಯರ್ಥಿಗಳ ನಾಮಪತ್ರ ಸಿಂಧುವಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಜನತಾದಳ(ಜಾತ್ಯತೀತ) ಅಭ್ಯರ್ಥಿ ಹೆಚ್.ಡಿ.ದೇವೇಗೌಡ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಜಿ.ಎಸ್.ಬಸವರಾಜು, ಭಾರತ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಎನ್.ಶಿವಣ್ಣ, ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಕೆ.ಸಿ.ಹನುಮಂತರಾಯ, ಉತ್ತಮ ಪ್ರಜಾಕೀಯ ಪಾರ್ಟಿಯ ಅಭ್ಯರ್ಥಿ ಎಂ.ಆರ್.ಛಾಯಾಮೋಹನ್, ಅಂಬೇಡ್ಕರ್ ಸಮಾಜ್ ಪಾರ್ಟಿ ಅಭ್ಯರ್ಥಿ ಸಿ.ಪಿ.ಮಹಾಲಕ್ಷ್ಮಿ, ಪಕ್ಷೇತರ ಅಭ್ಯರ್ಥಿಗಳಾದ ಹೆಚ್.ಎಂ. ಉದಯಶಂಕರ್, ತುರುವೇಕೆರೆ ತಾಲೂಕು ಕಪನಿಗೌಡ, ಟಿ.ಎನ್.ಕುಮಾರಸ್ವಾಮಿ,ಹೆಚ್.ಎನ್.ನಾಗಾರ್ಜುನ, ಜಿ.ನಾ ಗೇಂದ್ರ, ಪ್ರಕಾಶ್ ಆರ್.ಎ.ಜೈನ್, ಬಿ.ಎಸ್.ಮಲ್ಲಿಕಾರ್ಜುನ್, ಎಸ್.ಪಿ.ಮುದ್ದಹನುಮೇಗೌಡ, ಕೆ.ಎನ್.ರಾಜಣ್ಣ, ಡಿ.ಶರದಿ ಶಯನ, ಕೆ.ವಿ.ಶ್ರೀನಿವಾಸ್ ಕಲ್ಕೆರೆ, ಜೆ.ಕೆ.ಸಮಿ, ಸಿದ್ದರಾಮೇಗೌಡ ಸೇರಿದಂತೆ 19 ಅಭ್ಯರ್ಥಿಗಳ ನಾಮಪತ್ರಗಳು ಸಿಂಧುವಾಗಿವೆ ಎಂದು ಅವರು ತಿಳಿಸಿದ್ದಾರೆ.





