Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ, ಮೋದಿ...

ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ, ಮೋದಿ ಪ್ರಧಾನಿಯಾಗುವುದಿಲ್ಲ-ಸಚಿವ ಖಾದರ್

ವಾರ್ತಾಭಾರತಿವಾರ್ತಾಭಾರತಿ27 March 2019 11:03 PM IST
share
ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ, ಮೋದಿ ಪ್ರಧಾನಿಯಾಗುವುದಿಲ್ಲ-ಸಚಿವ ಖಾದರ್

ಪುತ್ತೂರು: ಅಭಿವೃದ್ಧಿಯ ವಿಚಾರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಂಪೂರ್ಣವಾಗಿ ವಿಫಲತೆಯನ್ನು ಕಂಡಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ, ನರೇಂದ್ರ ಮೋದಿ ಪ್ರಧಾನಿಯಾಗುವುದಿಲ್ಲ ಎಂದು ರಾಜ್ಯ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.

ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಮೋದಿ ಸರ್ಕಾರದಲ್ಲಿ ಸುಪ್ರಿಂ ಕೋರ್ಟ್‍ನ ನ್ಯಾಯಾಧೀಶರು ತನಗೆ ದಮ್ಮು ಕಟ್ಟುವ ಪರಿಸ್ಥಿತಿಯಿದೆ ಎಂದಿರುವುದು, ಆರ್‍ಬಿಐ ಗವರ್ನರ್ ರಾಜೀನಾಮೆ ನೀಡಿರುವುದು, ಸಿಬಿಐ ಅಧಿಕಾರಿ ರಾಜೀನಾಮೆ, ನೋಟು ಅಮಾನ್ಯತೆ, ರಫೇಲ್ ಒಪ್ಪಂದ ಪ್ರಕರಣಗಳು ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ರಫೇಲ್ ದಾಖಲಾತಿ ಕಳವಾಗಿದೆ ಎಂದು ಹೇಳಿಕೆ ನೀಡಿ ದೇಶವೇ ತಲೆ ತಗ್ಗಿಸುವಂತೆ ಮೋದಿ ಮಾಡಿದ್ದಾರೆ ಎಂದರು.

ಪಾಕಿಸ್ಥಾನಕ್ಕೆ ಹೋಗಿ ಚಹಾ ಕುಡಿಯುವ ಪ್ರಧಾನಿ ಮೋದಿಯವರು ಅವರು ನಡೆಸಿದ ಮಾರಣ ಹೋಮಕ್ಕೆ ಬಲಿಯಾದ ದೇಶದ ಸೈನಿಕರ ಮನೆಗೆ ಭೇಟಿ ಕೊಟ್ಟು ಸಾಂತ್ವನ ನೀಡುವ ಕೆಲಸ ಮಾಡಿಲ್ಲ. ನೋಟು ಅಮಾನ್ಯದಿಂದಾಗಿ 150ಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ಅವರ ಬಗ್ಗೆ ವಿಚಾರಿಸಿಲ್ಲ. ಮರಣದ ಬಗ್ಗೆ ವರದಿ ಕೇಳಿಲ್ಲ ಇಂತಹ ಮಾನವೀಯತೆ ಇಲ್ಲದ ಸರ್ಕಾರಕ್ಕೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ.

ಪಠಾಣ್‍ಕೋಟ್ ತನಿಖೆಗೆ ಪಾಕಿಸ್ಥಾನದ ಐಎಸ್‍ಐ ತಂಡಕ್ಕೆ ಅವಕಾಶ ನೀಡಿರುವುದು ಕೇಂದ್ರದ ಮೂರ್ಖತನದ ರಾಜತಾಂತ್ರಿಕತೆಯಾಗಿದೆ. ಕೇಂದ್ರ ಸರ್ಕಾರದಿಂದ ಬಡವರ ಹೊಟ್ಟೆ ತುಂಬಿಸುವ ಯಾವುದೇ ಯೋಜನೆ ಜಾರಿಯಾಗಿಲ್ಲ ಎಂದು ಆರೋಪಿಸಿದರು.

ಸಂಸದ ನಳಿನ್ ಕುಮಾರ್ ಕಟೀಲ್ 10 ವರ್ಷಗಳ ಅವಧಿಯಲ್ಲಿ ಜಿಲ್ಲೆಗೆ ಯಾವುದೇ ಕೊಡುಗೆ ನೀಡಿಲ್ಲ. ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಲೋಕಸಭೆಯಲ್ಲಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮಾತನಾಡಿಲ್ಲ. ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಸಂಬಂಧಿಸಿ, ಸಿಪಿಸಿಆರ್‍ಐ ಬೇರೆ ರಾಜ್ಯಕ್ಕೆ ವರ್ಗಾವಣೆ ಬಗ್ಗೆ ಮತ್ತು ಜಿಲ್ಲೆಯ ಹೆಮ್ಮಯ ಬ್ಯಾಂಕ್ ಎನಿಸಿದ್ದ ವಿಜಯಾ ಬ್ಯಾಂಕ್ ಮರ್ಜಿಯ ಬಗ್ಗೆ, ಬಿಎಸ್‍ಎನ್‍ಎಲ್ ಬಗ್ಗೆ ಚಕಾರವೆತ್ತಲಿಲ್ಲ. ಇಂತಹ ಸಂಸದರಿಂದ ಜಿಲ್ಲೆಯ ಜನತೆಗೆ ನಿರೀಕ್ಷೆಯಿಲ್ಲ. ಅದಕ್ಕಾಗಿ ಈ ಬಾರಿ ಯುವಕರಾಗಿದ್ದು ತನ್ನ ಧರ್ಮವನ್ನು ಆಚರಿಸುವುದರೊಂದಿಗೆ ಇತರ ಧರ್ಮವನ್ನು ಗೌರವಿಸುವ ಮಿಥುನ್ ರೈ ಅವರನ್ನು ಜಿಲ್ಲೆಯ ಮತದಾರರು ಬೆಂಬಲಿಸಲಿದ್ದಾರೆ ಎಂದರು.

ಮಾಜಿ ಸಚಿವ ಹಾಗೂ ಹಿರಿಯರಾದ ಜನಾರ್ಧನ ಪೂಜಾರಿಯವರು ಈ ಬಾರಿಯ ಲೋಕಸಭಾ ಚುನಾವಣೆಯ ಸಾರಥ್ಯವನ್ನು ವಹಿಸಿಕೊಂಡು ಮುನ್ನಡೆಸಲಿ ದ್ದಾರೆ ಎಂದ ಸಚಿವರು ಅವರ ನೇತೃತ್ವದಲ್ಲಿ ಮಿಥುನ್ ರೈ ಜಯಪಡೆಯಲಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ವಿಮಾನ ನಿಲ್ದಾಣ ಖಾಸಗೀಕರಣ ರದ್ದು ಪಡಿಸಲಾಗುವುದು. ಸಿಪಿಸಿಆರ್ ಮರಳಿ ರಾಜ್ಯದಲ್ಲಿ ಉಳಿಸಲಾಗುವುದು. ಹಳ್ಳಿ ಹಳ್ಳಿಗೆ ಬಿಎಸ್‍ಎನ್‍ಎಲ್ ಬ್ರಾಡ್ ಬಾಂಡ್ ಸೇವೆ ವಿಸ್ತರಿಸಲಾಗುವುದು, ಆಶಾ, ಅಂಗವನಾಡಿ ಕಾರ್ಯಕರ್ತೆಯರಿಗೆ ಹಾಗೂ ಎಎನ್‍ಎಂಗಳಿಗೆ ಸೇವಾ ಭದ್ರತೆ ನೀಡಲಾಗುವುದು. ವಿಜಯ ಬ್ಯಾಂಕ್ ಉಳಿಸಿಕೊಳ್ಳಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಪಕ್ಷದ ಚುನಾವಣಾ ಉಸ್ತುವಾರಿ ಸವಿತಾ ರಮೇಶ್, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಪತ್ತೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಹಾಗೂ ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X