Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶ್ರೀನಿವಾಸ ಕಾಲೇಜಿನಲ್ಲಿ ಯುವ ಮತದಾರರ...

ಶ್ರೀನಿವಾಸ ಕಾಲೇಜಿನಲ್ಲಿ ಯುವ ಮತದಾರರ ಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ28 March 2019 6:39 PM IST
share
ಶ್ರೀನಿವಾಸ ಕಾಲೇಜಿನಲ್ಲಿ ಯುವ ಮತದಾರರ ಜಾಗೃತಿ ಕಾರ್ಯಕ್ರಮ

ಮಂಗಳೂರು, ಮಾ.28: ರಾಜಕೀಯಕ್ಕೂ ನಮಗೂ ಸಂಬಂಧವಿಲ್ಲ ಎಂದು ಯಾರೂ ಮತದಾನದ ಪ್ರಕ್ರಿಯೆಯಿಂದ ದೂರ ಉಳಿಯಬಾರದು. ಉತ್ತಮ ಸರಕಾರದ ನಿರ್ಮಾಣದಲ್ಲಿ ಪ್ರಜೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ತಪ್ಪದೆ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಕರೆ ನೀಡಿದರು.

ಶ್ರೀನಿವಾಸ ವಿಶ್ವವಿದ್ಯಾನಿಲಯ ಮಂಗಳೂರು, ದ.ಕ.ಜಿಲ್ಲಾಡಳಿತ, ದ.ಕ. ಜಿಲ್ಲಾ ಸ್ವೀಪ್ ಸಮಿತಿ, ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಗುರುವರ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ಕಾಲೇಜ್‌ನಲ್ಲಿ ನಡೆದ ಯುವ ಮತದಾರರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಅಭಿವೃದ್ಧಿಗೆ ಯುವ ಸಮೂಹದ ಮತದಾನ ಮುಖ್ಯವಾಗಿದೆ. ಹಾಗಾಗಿ ಪ್ರತಿಯೊಬ್ಬರೂ ತಪ್ಪದೆ ಮತದಾನ ಮಾಡಬೇಕು ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಜತೆಗೂಡಿ ಆಚರಿಸಬೇಕು. 18 ವರ್ಷ ಮೇಲ್ಪಟ್ಟಿದ್ದು, ಮತದಾನಕ್ಕೆ ನೋಂದಣಿ ಮಾಡದೆ ಇದ್ದಲ್ಲಿ ತಕ್ಷಣ ನೋಂದಣಿ ಮಾಡಬೇಕು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಹಕ್ಕು ಚಲಾಯಿಸುವಲ್ಲಿ ಯಾರೂ ಹಿಂದೆ ಸರಿಯಬಾರದು. ಮತದಾನದ ಜಾಗೃತಿ ಎಲ್ಲೆಡೆ ಆಗಬೇಕು. ಚುನಾವಣಾ ಆಯೋಗವು ಇಂದು ಅತ್ಯಂತ ಶಿಸ್ತುಬದ್ಧವಾಗಿ ಚುನಾವಣೆಯನ್ನು ನಡೆಸುತ್ತಿದ್ದು, ಮತದಾನ ಜಾಗೃತಿಗೂ ಆದ್ಯತೆ ನೀಡುತ್ತಿದೆ ಎಂದು ಸಸಿಕಾಂತ್ ಸೆಂಥಿಲ್ ಹೇಳಿದರು.

ದ.ಕ.ಜಿಪಂ ಸಿಇಒ ಡಾ.ಸೆಲ್ವಮಣಿ ಮಾತನಾಡಿ, ಮತದಾನ ಮಾಡುವುದು ಎಲ್ಲರ ಹಕ್ಕಾಗಿದೆ. ಅದನ್ನು ಯಾವ ಕಾರಣಕ್ಕೂ ವ್ಯರ್ಥಗೊಳಿಸಬಾರದು. ಪ್ರಾಪ್ತರಾದ ಯುವಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ಈಗಾಗಲೇ ನೋಂದಣಿ ಮಾಡಿಕೊಂಡವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೆ ಎಂಬುದನ್ನು ಪರೀಕ್ಷಿಸಿಕೊಳ್ಳಬೇಕು ಎಂದರು.

ಚುನಾವಣೆಯ ಬಗ್ಗೆ ಯಾವುದೇ ಸಂಶಯಗಳಿದ್ದಲ್ಲಿ 1950 ಸಹಾಯವಾಣಿಗೆ ಕರೆ ಮಾಡಬಹುದು. ಸ್ಥಳೀಯ ಬೂತ್ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಎನ್‌ಎಸ್‌ವಿಪಿ ಹಾಗೂ ಚುನಾವಣಾ ವೆಬ್‌ಸೈಟ್ ಅಥವಾ ಚುನಾವಣಾ ಆ್ಯಪ್ ಮೂಲಕ ಹೆಚ್ಚಿನ ಮಾಹಿಗಳನ್ನು ಪಡೆದುಕೊಳ್ಳಬಹುದು ಎಂದು ಡಾ. ಸೆಲ್ವಮಣಿ ತಿಳಿಸಿದರು.

ಶೀನಿವಾಸ ವಿಶ್ವವಿದ್ಯಾನಿಲಯದ ಕುಲಪತಿ ಎ.ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಿದ್ದರು. ಶ್ರೀನಿವಾಸ್ ವಿವಿಯ ಸಹ ಕುಲಪತಿ ಶ್ರೀನಿವಾಸ್ ರಾವ್, ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮನಪಾ ಪ್ರಭಾರ ಆಯುಕ್ತ ಬಿ.ಎಸ್. ನಾರಾಯಣಪ್ಪಉಪಸ್ಥಿತರಿದ್ದರು. ಶ್ರೀನಿವಾಸ ವಿವಿ ಉಪ ಕುಲಪತಿ ಪಿ.ಎಸ್.ಐತಾಳ್ ಸ್ವಾಗತಿಸಿದರು.

ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ

ವಿದ್ಯಾರ್ಥಿಗಳಿಗಾಗಿ ಮತಗಟ್ಟೆ, ಮತದಾನ ಯಂತ್ರ ಹಾಗೂ ವಿವಿ ಪ್ಯಾಟ್ ಬಗ್ಗೆ ಪ್ರಾತ್ಯಕ್ಷಿಕೆಯು ನಡೆಯಿತು. ಚುನಾವಣಾ ಅಧಿಕಾರಿಗಳು ಮತದಾನ ಮಾಡುವ ಹಾಗೂ ವಿವಿ ಪ್ಯಾಟ್ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X