Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾನೇನು ಮಾಡಿದರೂ ತಪ್ಪು, ಮಾಡದಿದ್ದರೂ...

ನಾನೇನು ಮಾಡಿದರೂ ತಪ್ಪು, ಮಾಡದಿದ್ದರೂ ತಪ್ಪು: ಬ್ಯಾಂಕ್‌ಗಳ ವಿರುದ್ಧ ಮಲ್ಯ ಟೀಕಾಪ್ರಹಾರ

ವಾರ್ತಾಭಾರತಿವಾರ್ತಾಭಾರತಿ28 March 2019 9:35 PM IST
share
ನಾನೇನು ಮಾಡಿದರೂ ತಪ್ಪು, ಮಾಡದಿದ್ದರೂ ತಪ್ಪು: ಬ್ಯಾಂಕ್‌ಗಳ ವಿರುದ್ಧ ಮಲ್ಯ ಟೀಕಾಪ್ರಹಾರ

ಹೊಸದಿಲ್ಲಿ,ಮಾ.28: ಯುನೈಟೆಡ್ ಬ್ರೆವರೀಸ್ ಹೋಲ್ಡಿಂಗ್ಸ್ ಲಿ.(ಯುಬಿಎಚ್‌ಎಲ್)ನಲ್ಲಿದ್ದ ತನ್ನ 74 ಶೇರುಗಳು 1,000 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಮಾರಾಟವಾದ ನಂತರ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ವಿರುದ್ಧ ದೇಶಭ್ರಷ್ಟ ಮದ್ಯದ ದೊರೆ ವಿಜಯ್ ಮಲ್ಯ ಹರಿಹಾಯ್ದಿದ್ದಾರೆ.

“ನಾನೊಬ್ಬ ಬ್ಯಾಂಕ್‌ಗಳ ಹಣವನ್ನು ಕದ್ದು ಓಡಿಹೋಗಿರುವ ಕಳ್ಳ ಎಂದು ಸಾಬೀತುಪಡಿಸಲು ಎಷ್ಟೆಲ್ಲ ಪ್ರಯತ್ನ ಮಾಡಲಾಗುತ್ತಿದೆ. ಹಿಂದೆ ಹಾಗೂ ಇತ್ತೀಚೆಗೆ ನಡೆದ ಮಾರಾಟದಲ್ಲೂ ಬ್ಯಾಂಕ್‌ಗಳು ನನ್ನ ವಿಷಯದಲ್ಲಿ ಸಾಕಷ್ಟು ಹಣವನ್ನು ಮರುಪಡೆದುಕೊಂಡಿದೆ. ಅದನ್ನು ನನ್ನ ಪರಿಹಾರ ಪ್ರಸ್ತಾವನೆಯಲ್ಲೂ ಸೇರಿಸಲಾಗಿದೆ. ಆದರೆ ನೀನೇನು ಮಾಡಿದರೂ ತಪ್ಪು, ಮಾಡದಿದ್ದರೂ ತಪ್ಪು ಎಂಬಂತೆ ನನ್ನನ್ನು ನಡೆಸಿಕೊಳ್ಳಲಾಗುತ್ತಿದೆ” ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.

ಯುಬಿಎಚ್‌ಎಲ್‌ನಲ್ಲಿ ಮಲ್ಯ ಹೊಂದಿದ್ದ 74,04,932 ಶೇರುಗಳನ್ನು ಬೆಂಗಳೂರು ಮೂಲದ ಸಾಲ ಮರುಗಳಿಕೆ ನ್ಯಾಯಾಧೀಕರಣ 1,008 ಕೋಟಿ ರೂ.ಗೆ ಮಾರಾಟ ಮಾಡಿದೆ ಎಂದು ಜಾರಿ ನಿರ್ದೇಶನಾಲಯ ಬುಧವಾರ ತಿಳಿಸಿತ್ತು.

ಯಸ್ ಬ್ಯಾಂಕ್‌ನಲ್ಲಿ ಪಡೆದ ಸಾಲವನ್ನು ಮರುಪಾವತಿಸದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಮಲ್ಯಾ ವಿರುದ್ಧ ದಾಖಲಿಸಿದ ಹಣ ವಂಚನೆ ಪ್ರಕರಣದ ಭಾಗವಾಗಿ ಜಪ್ತಿ ಮಾಡಲಾಗಿದ್ದ ಶೇರುಗಳನ್ನು ನ್ಯಾಯಾಧೀರಕಣಕ್ಕೆ ಒಪ್ಪಿಸುವಂತೆ ಕರ್ನಾಟಕ ಉಚ್ಚ ನ್ಯಾಯಾಲಯ ಬ್ಯಾಂಕ್‌ಗೆ ಸೂಚಿಸಿತ್ತು.

ಈ ಪ್ರಕರಣಲ್ಲಿ ಇದೇ ಮೊದಲ ಬಾರಿ ಶೇರುಗಳನ್ನು ಮಾರಾಟ ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಶೇರುಗಳನ್ನು ಮಾರಾಟ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಸ್ಥಗಿತಗೊಂಡಿರುವ ವೈಮಾನಿಕ ಸಂಸ್ಥೆಗೆ ಸಾಲ ನೀಡಿದ 17 ಬ್ಯಾಂಕ್‌ಗಳ ಸಮೂಹ ದಾಖಲಿಸಿದ ದೂರಿನ ಆಧಾರದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಮಲ್ಯಾ ವಿರುದ್ಧ ತನಿಖೆ ನಡೆಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X