'ಆ್ಯಂಬಿಡೆಂಟ್' ವಂಚನೆ ಪ್ರಕರಣ: ಸಿಬಿಐಗೆ ಮನವಿ ಸಲ್ಲಿಸಲು ಅರ್ಜಿದಾರರಿಗೆ ಹೈಕೋರ್ಟ್ ಆದೇಶ
ಬೆಂಗಳೂರು, ಮಾ.28: ಮೈಸೂರಿನಲ್ಲಿ ಹೂಡಿಕೆದಾರ ಆ್ಯಂಬಿಡೆಂಟ್ ಕಂಪೆನಿ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಸಿಬಿಐಗೆ ಮನವಿ ಸಲ್ಲಿಸಲು ಅರ್ಜಿದಾರರಿಗೆ ಆದೇಶಿಸಿದೆ.
ಈ ಸಂಬಂಧ ನಫೀಸ್ ಪಾಷಾ ಸೇರಿ 20 ಜನ ಹೂಡಿಕೆದಾರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಅಲೋಕ ಆರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲ ಎಸ್.ಅಮೃತ್ ಚೌದ್ರಿ ಅವರು, ಆ್ಯಂಬಿಡೆಂಟ್ ಕಂಪೆನಿ ವಂಚನೆ ಪ್ರಕರಣದ ತನಿಖೆಯನ್ನು ಸದ್ಯ ಸಿಸಿಬಿ ಕೈಗೆತ್ತಿಕೊಂಡಿದ್ದರೂ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿದೆ. ಹೀಗಾಗಿ, ಆ್ಯಂಬಿಡೆಂಟ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿದಾರರಿಗೆ ಸಿಬಿಐಗೆ ಮನವಿ ಸಲ್ಲಿಸಲು ಸೂಚಿಸಿ ಅರ್ಜಿಯನ್ನು ಇತ್ಯರ್ಥಗೊಳಿಸಿತು

Next Story





