ಆಪ್ತರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ : ಮುದ್ದಹನುಮೇಗೌಡ
ಲೋಕಸಭಾ ಚುನಾವಣೆ

ಬೆಂಗಳೂರು, ಮಾ.29: ನನ್ನನ್ನು ಬೆಳೆಸಿದ ನಾಯಕರ, ಪಕ್ಷದ ಕಾರ್ಯಕರ್ತರ ಮತ್ತು ಅಭಿಮಾನಿಗಳ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಕೊಳ್ಳಲಾಗುವುದು ಎಂದು ಸಂಸದ ಮುದ್ದಹನುಮೇಗೌಡ ತಿಳಿಸಿದ್ದಾರೆ.
ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಮುದ್ದಹನುಮೇಗೌಡ ಅವರು ತುಮಕೂರು ಕ್ಷೇತ್ರಕ್ಕೆ ತೆರಳಿ ಸಂಜೆ 3 ಗಂಟೆಯ ಒಳಗಾಗಿ ಅಂತಿಮ ನಾಮಪತ್ರ ಹಿಂಪಡೆಯುವ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತಮ್ಮ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ ಬಳಿಕ ಮುದ್ದಹನುಮೇಗೌಡ ಹೇಳಿಕೆ ನೀಡಿದ್ದಾರೆ.
Next Story





