Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಎ.1ರಂದು ವಿಜಯಾ ಬ್ಯಾಂಕ್ ವಿಲೀನ'...

'ಎ.1ರಂದು ವಿಜಯಾ ಬ್ಯಾಂಕ್ ವಿಲೀನ' ಕರಾವಳಿ ಪಾಲಿಗೆ ಕರಿ ದಿನ: ಮುನೀರ್ ಕಾಟಿಪಳ್ಳ

ವಾರ್ತಾಭಾರತಿವಾರ್ತಾಭಾರತಿ29 March 2019 10:39 PM IST
share

ಮಂಗಳೂರು: ಕರಾವಳಿಯ ಜನತೆಯ ಒಕ್ಕೊರಲ ಪ್ರತಿಭಟನೆ, ಆಗ್ರಹದ ಹೊರತಾಗಿಯೂ ಕೇಂದ್ರ ಸರಕಾರ ಎ. 1 ರಿಂದ ವಿಜಯಾ ಬ್ಯಾಂಕ್ ಅಸ್ಥಿತ್ವವನ್ನು ಅಧಿಕೃತವಾಗಿ ರದ್ದುಗೊಳಿಸಿ, ಬ್ಯಾಂಕ್ ಅಫ್ ಬರೋಡಾದ ಭಾಗವಾಗಿ ಘೋಷಿಸಿರುವುದು ಅತ್ಯಂತ ಖಂಡನೀಯ. ಆ ಮೂಲಕ ಕೇಂದ್ರದ ಮೋದಿ ಸರಕಾರ ತುಳುನಾಡಿನ ಜನರ ಭಾವನೆ, ಬೇಡಿಕೆಯನ್ನು ಪೂರ್ಣವಾಗಿ ಕಡೆಗಣಿಸಿದೆ. ಈ ಆಘಾತಕಾರಿ ಬೆಳವಣಿಗೆಗೆ ವಿಲೀನ ತಡೆಯಲು ಯತ್ನಿಸದ ಕರಾವಳಿ ಭಾಗದ ಬಿಜೆಪಿ‌ ಸಂಸದರು, ಶಾಸಕರ ವೈಫಲ್ಯವೇ ನೇರ ಕಾರಣ ಎಂದು ಡಿವೈಎಫ್ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

ಅತ್ತಾವರ ಎ ಬಿ ಶೆಟ್ಟಿ, ಮುಲ್ಕಿ ಸುಂದರ ರಾಮ ಶೆಟ್ಟರ ಅಪಾರ ಶ್ರಮದ ಫಲವಾಗಿ ವಿಜಯಾ ಬ್ಯಾಂಕ್ ಬೆಳೆದು ನಿಂತಿತ್ತು. ಕರಾವಳಿ ಭಾಗದ ಯುವ ಜನರಿಗೆ ಉದ್ಯೋಗ, ವ್ಯಾಪಾರಸ್ಥರಿಗೆ, ಉದ್ಯಮಿಗಳಿಗೆ ಬಂಡವಾಳ ನೀಡುತ್ತಾ ಕರಾವಳಿಯ ಆರ್ಥಿಕತೆಗೆ ವಿಜಯಾ ಬ್ಯಾಂಕ್ ಅಪಾರ ಕೊಡುಗೆ ನೀಡಿದೆ. ತನ್ನ ಬೆಳವಣಿಗೆ, ಜನೋಪಕಾರಿ ನಿಲುವುಗಳಿಂದ ತುಳುನಾಡಿನ ಅಸ್ಮಿತೆಯಾಗಿಯೂ ವಿಜಯಾ ಬ್ಯಾಂಕ್ ಕರಾವಳಿಗರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿತ್ತು. ಲಾಭದಲ್ಲಿ ನಡೆಯುತ್ತಿದ್ದ ವಿಜಯಾ ಬ್ಯಾಂಕನ್ನು ಗುಜರಾತ್ ಮೂಲದ ಬ್ಯಾಂಕ್ ಗಳೊಂದಿಗೆ ವಿಲೀನ ಮಾಡುವ ನಿರ್ಧಾರವನ್ನು ಕೇಂದ್ರದ ನರೇಂದ್ರ ಮೋದಿ ಸರಕಾರ ಪ್ರಕಟಿಸಿದಾಗ ಇಡೀ ಕರಾವಳಿ ಈ ಜನವಿರೋಧಿ ತೀರ್ಮಾನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿತ್ತು. ವಿಲೀನ ತೀರ್ಮಾನ ಹಿಂಪಡೆದು ಕರಾವಳಿಯ ಹೆಮ್ಮೆಯಾದ ವಿಜಯಾ ಬ್ಯಾಂಕ್ ಉಳಿಸುವಂತೆ ಸ್ಥಳೀಯ‌ ಸಂಸದರು, ಶಾಸಕರನ್ನು ಆಗ್ರಹಿಸಿತ್ತು. ಆ ಸಂದರ್ಭ ವಿಲೀನ‌ ತೀರ್ಮಾನ ಬದಲಾಗುವ ಭರವಸೆ ಜನತೆಯಲ್ಲಿ ಮೂಡಿತ್ತು. ಅದಕ್ಕೆ ಪೂರಕವಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಸದಾನಂದ ಗೌಡ ವಿಜಯಾ ಬ್ಯಾಂಕ್ ಉಳಿಸಲು ಯತ್ನಿಸುವುದಾಗಿ ಭರವಸೆ ನೀಡಿದ್ದರು. ಆದರೆ ಎಲ್ಲಾ ನಿರೀಕ್ಷೆಗಳನ್ನು ಮೀರಿ ಎಪ್ರಿಲ್ ಒಂದರಿಂದ ವಿಜಯಾ ಬ್ಯಾಂಕ್ ತನ್ನ ಅಸ್ಥಿತ್ವ ಕಳೆದುಕೊಳ್ಳುತ್ತಿದೆ. ಎಪ್ರಿಲ್ ಒಂದು ಸುಂದರ ರಾಮ ಶೆಟ್ಟರ ಕನಸು ಕಮರಿದ ಕರಾಳ ದಿನವಾಗಿ ಇತಿಹಾಸದಲ್ಲಿ ದಾಖಲಾಗಲಿದೆ. ಕರಾವಳಿಯ ಜನತೆಯೂ ಎಪ್ರಿಲ್ 1 ನ್ನು  ಕರಿ ದಿನವನ್ನಾಗಿ ಆಚರಿಸಿ ಕೇಂದ್ರದ ಮೋದಿ ಸರಕಾರ, ಸ್ಥಳೀಯ ಬಿಜೆಪಿ ಸಂಸದರಾದ ನಳಿನ್ ಕುಮಾರ್ ಕಟೀಲ್ , ಶೋಭಾ ಕರಂದ್ಲಾಜೆಯವರಿಗೆ ನಾಗರಿಕರ ಪ್ರಬಲ ಪ್ರತಿಭಟನೆ ದಾಖಲಿಸಬೇಕು ಎಂದು ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X