Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮತದಾನ ಕೇಂದ್ರದಲ್ಲಿ ಅನುಚಿತ ವರ್ತನೆ...

ಮತದಾನ ಕೇಂದ್ರದಲ್ಲಿ ಅನುಚಿತ ವರ್ತನೆ ಅಪರಾಧ: ಡಿಸಿ ಸಸಿಕಾಂತ್

ವಾರ್ತಾಭಾರತಿವಾರ್ತಾಭಾರತಿ29 March 2019 10:47 PM IST
share
ಮತದಾನ ಕೇಂದ್ರದಲ್ಲಿ ಅನುಚಿತ ವರ್ತನೆ ಅಪರಾಧ: ಡಿಸಿ ಸಸಿಕಾಂತ್

ಮಂಗಳೂರು, ಮಾ. 29: ಮತದಾನ ಕೇಂದ್ರಗಳಲ್ಲಿ ಅಥವಾ ಅವುಗಳ ಸಮೀಪದಲ್ಲಿ ಅನುಚಿತವಾಗಿ ನಡೆದುಕೊಳ್ಳುವುದು ಅಪರಾಧವಾಗಿದ್ದು, ಅಂತಹ ಘಟನೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಚ್ಚರಿಕೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಚುನಾವಣಾ ವಿಚಾರಕ್ಕೆ ಸಂಬಂಧಿಸಿದಂತೆ ವರ್ಗಗಳ ನಡುವೆ ಹಗೆತನ ಬೆಳೆಸುವುದು, ಪ್ರಚೋದಿಸುವಂತಿಲ್ಲ. ಕಿರುಹೊತ್ತಿಗೆಗಳು, ಭಿತ್ತಿಪತ್ರಗಳು ಮುಂತಾದವುಗಳ ಮುದ್ರಣದ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದರು.

ಮತದಾನ ಕೇಂದ್ರಗಳಲ್ಲಿ ಅಥವಾ ಅವುಗಳ ಸಮೀಪದಲ್ಲಿ ಮತ ಕೋರಿಕೆಯನ್ನು ನಿಷೇಧಿಸಲಾಗಿದೆ. ಚುನಾವಣೆಯಲ್ಲಿ ವಾಹನಗಳನ್ನು ಕಾನೂನು ಬಾಹಿರವಾಗಿ ಬಾಡಿಗೆ ತೆಗೆದುಕೊಳ್ಳುವುದಕ್ಕೆ ಅಥವಾ ದೊರಕಿಸಿಕೊಡುವುದಕ್ಕೆ ದಂಡ ವಿಧಿಸಲಾಗುವುದು. ಮತದಾನ ಕೇಂದ್ರದ ಸಮೀಪದ ಆಯುಧವನ್ನು ತೆಗೆದುಕೊಂಡುವುದು ಹೋಗುವುದು ಚುನಾವಣಾ ಅಪರಾಧವಾಗಿದೆ ಎಂದು ಮಾಹಿತಿ ನೀಡಿದರು.

ಯಾವುದೇ ಕಾರಣಕ್ಕೂ ಮತದಾನ ಕೇಂದ್ರದಿಂದ ಮತಪತ್ರಗಳನ್ನು ಸ್ಥಳಾಂತರಿಸುವಂತಿಲ್ಲ. ಜತೆಗೆ ಮತಪೆಟ್ಟಿಗೆ, ಮತಪತ್ರ, ದಸ್ತಾವೇಜುಗಳು, ಬ್ಯಾಲೆಟ್ ಪೇಪರ್‌ಗಳನ್ನು ಅನಧಿಕೃತವಾಗಿ ನಾಶಗೊಳಿಸಿದ್ದೇ ಆದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಚುನಾವಣೆ ವೇಳೆ ಲಂಚ ನೀಡುವುದು, ಇನ್ನೊಬ್ಬನಂತೆ ನಟಿಸುವುದು, ಸುಳ್ಳು ಹೇಳಿಕೆ ನೀಡುವುದು, ಚುನಾವಣೆಗೆ ಸಂಬಂಧಿಸಿದ ಲೆಕ್ಕಗಳನ್ನು ಇಡದೇ ಎಥೇಚ್ಛವಾಗಿ ಖರ್ಚು ಮಾಡುವುದು ಭಾರತೀಯ ದಂಡ ಸಂಹಿತೆ ಪ್ರಕಾರ ಅಪರಾಧವಾಗಿರುತ್ತದೆ ಎಂದರು.

ಧರ್ಮ, ಮೂಲ ವಂಶ, ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದ ಮೇಲೆ ನಾಗರಿಕರ ಭಿನ್ನ ಭಿನ್ನ ವರ್ಗಗಳ ನಡುವೆ ದ್ವೇಷ ಭಾವನೆ ಬೆಳೆಸು ವಂತಹ ಹೇಳಿಕೆ, ಹಾವಭಾವ ತೋರುವಂತಿಲ್ಲ. ಅಭ್ಯರ್ಥಿಯ ವೈಯಕ್ತಿಕ ಚಾರಿತ್ರ ಹರಣ, ಆತನ ನಡವಳಿಕೆಯ ಸಂಬಂಧದಲ್ಲಿ ಸುಳ್ಳು ಹೇಳಿಕೆಗಳನ್ನು ಪ್ರಕಟಿಸುವುದು ಶಿಕ್ಷೆಗೆ ಆಹ್ವಾನ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪಕ್ಷದ ಚಿಹ್ನೆ ಇರುವ ಟಿ-ಶರ್ಟ್ ಬಳಕೆ ನಿಷೇಧ

ಯಾವುದೇ ಪಕ್ಷವನ್ನು ಪ್ರತಿನಿಧಿಸುವ ಚಿಹ್ನೆ, ಗುರುತು ಅಥವಾ ಬರಹಗಳಿರುವ ಟೀ-ಶರ್ಟ್‌ಗಳಲ್ಲಿ ಧರಿಸಿ ಮತದಾನ ಕೇಂದ್ರಕ್ಕೆ ಬರುವಂತಿಲ್ಲ. ಇದು ಪ್ರಚಾರವಲ್ಲ, ಆದರೆ ಆಮಿಷ ಒಡ್ಡುವುದಾಗಿದೆ. ಮತದಾನ ಕೇಂದ್ರದಲ್ಲಿ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಚುನಾವಣಾ ಅಧಿಕಾರಿಗಳನ್ನು ಅಥವಾ ಅವರು ನೇಮಿಸಿದ ಅಧಿಕಾರಿಗಳನ್ನು ಸಂಪರ್ಕಿಸಬೇಕು. ಚುನಾವಣಾಧಿಕಾರಿಗಳನ್ನು ಸಂಪರ್ಕಿಸಿದ 10 ನಿಮಿಷದಲ್ಲಿ ಅಧಿಕಾರಿಗಳು ಸ್ಥಳದಲ್ಲಿರುತ್ತಾರೆ. ಇದರ ಹೊರತಾಗಿ ಮತದಾನ ಕೇಂದ್ರದ ಒಳಗೆ ಅಥವಾ ಹೊರಗೆ ಯಾವುದೇ ರೀತಿಯ ಗಲಾಟೆ ಮಾಡಿದ್ದೇ ಆದಲ್ಲಿ ಕಾನೂನುನ್ನು ಕೈಗೆ ತೆಗೆದು ಕೊಂಡಂತಾಗುತ್ತದೆ. ಅಂತಹವರ ವಿರುದ್ಧ ಕೇಸು ದಾಖಲಿಸಿ, ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದರು.

ವೋಟರ್ಸ್ ಸ್ಲಿಪ್ ದಾಖಲೆ ಅಲ್ಲ

ಎ.18ರಂದು ನಡೆಯುವ ಚುನಾವಣೆಗೆ ಮತದಾರರಿಗೆ ನೀಡಿರುವ ಭಾವಚಿತ್ರ ಇರುವ ಗುರುತಿನ ಚೀಟಿ ಹಾಜರಿಪಡಿಸಿ, ಮತದಾನ ಮಾಡಬೇಕಿದೆ. ಇದನ್ನು ಕಳೆದುಕೊಂಡವರು ಆಯೋಗ ನಿಗದಿಪಡಿಸಿರುವ 11ರಲ್ಲಿ ಯಾವುದಾದರೂ ಒಂದು ದಾಖಲೆ ಹಾಜರುಪಡಿಸಿ ಮತದಾನ ಮಾಡಬಹುದು. ಚುನಾವಣೆಗೆ ಮುನ್ನ ವಿತರಿಸುವ ವೋಟರ್ಸ್ ಸ್ಲಿಪ್ ಮತದಾನ ಮಾಡಲು ಅಗತ್ಯ ದಾಖಲೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X