Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾವಲುಗಾರನ ಕೊಲೆ ಪ್ರಕರಣ: ಗುಂಡಿಕ್ಕಿ...

ಕಾವಲುಗಾರನ ಕೊಲೆ ಪ್ರಕರಣ: ಗುಂಡಿಕ್ಕಿ ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ30 March 2019 9:16 PM IST
share
ಕಾವಲುಗಾರನ ಕೊಲೆ ಪ್ರಕರಣ: ಗುಂಡಿಕ್ಕಿ ಆರೋಪಿಯ ಬಂಧನ

ಬೆಂಗಳೂರು, ಮಾ.30: ಬ್ಯಾಂಕಿನ ಎಟಿಎಂ ಕಾವಲುಗಾರನ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಿಸ್ತೂಲಿನಿಂದ ಗುಂಡು ಹಾರಿಸಿ ಇಲ್ಲಿನ ಕುಮಾರಸ್ವಾಮಿ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬನ್ನೇರುಘಟ್ಟ ರಸ್ತೆಯ ಸಿ.ಕೆ.ಪಾಳ್ಯ ನಿವಾಸಿ ರಾಜೇಂದ್ರ(28) ಗುಂಡೇಟಿನಿಂದ ಗಾಯಗೊಂಡಿರುವ ಕೊಲೆ ಆರೋಪಿ ಎಂದು ತಿಳಿದುಬಂದಿದೆ.

ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾ.24ರ ಬೆಳಗಿನ ಜಾವ ಕರ್ನಾಟಕ ಬ್ಯಾಂಕ್ ಎಟಿಎಂ ಕಾವಲುಗಾರ ಲಿಂಗಪ್ಪಎಂಬಾತನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದ. ಈತ ಮಾದಕ ವ್ಯಸನಿಯಾಗಿದ್ದು, ಹಣಕ್ಕಾಗಿ ಕೊಲೆಮಾಡಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಕೊಲೆ ಮಾಡಿದ ನಂತರ ರಾಜೇಂದ್ರ ಗಾಂಜಾಕ್ಕಾಗಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ. ಈ ಸಂಬಂಧ ಸುಬ್ರಹ್ಮಣ್ಯಪುರ ಉಪವಿಭಾಗದ ಎಸಿಪಿ ಮಹದೇವ ಅವರ ಮಾರ್ಗದರ್ಶನದಲ್ಲಿ ಕುಮಾರಸ್ವಾಮಿ ಲೇಔಟ್ ಠಾಣೆ ಇನ್ಸ್‌ಪೆಕ್ಟರ್ ಹಜರೀಶ್ ಕಿಲ್ಲಾದರ್, ತಲಘಟ್ಟಪುರ ಠಾಣೆಯ ಪಿಎಸ್ಸೈ ಶಿವಕುಮಾರ್, ಕೋಣನಕುಂಟೆ ಠಾಣೆಯ ಪಿಎಸ್ಸೈ ಶ್ರೀನಿವಾಸ್ ಪ್ರಸಾದ್ ಅವರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.

ಕೋಣನಕುಂಟೆ ಡಬಲ್ ರಸ್ತೆ ಬಳಿ ಆರೋಪಿ ರಾಜೇಂದ್ರ ಇರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು, ಶನಿವಾರ ಮುಂಜಾನೆ 4:30ರ ಸುಮಾರಿಗೆ ಅಲ್ಲಿಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರ ಮೇಲೆ ಕಲ್ಲಿನಿಂದ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ರಾಜೇಂದ್ರನನ್ನು ಶರಣಾಗುವಂತೆ ಇನ್ಸ್‌ಪೆಕ್ಟರ್ ಹಜರೀಶ್ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದರು.

ಆದರೂ ಆರೋಪಿ ಪೊಲೀಸರ ಮೇಲೆ ಕಲ್ಲಿನ ದಾಳಿ ಮುಂದುವರೆಸಿದಾಗ ಆತ್ಮರಕ್ಷಣೆಗಾಗಿ ಹಜರೀಶ್ ಹಾರಿಸಿದ ಎರಡು ಗುಂಡುಗಳು ರಾಜೇಂದ್ರನ ಕಾಲುಗಳಿಗೆ ತಗುಲಿ ಕುಸಿದು ಬಿದ್ದ. ತಕ್ಷಣ ಸುತ್ತುವರಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X