ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಓರ್ವನ ಬಂಧನ, 2.5 ಲಕ್ಷ ನಗದು ಜಪ್ತಿ

ಬೆಂಗಳೂರು, ಮಾ.30: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಓರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 2.5 ಲಕ್ಷ ರೂ. ನಗದು, 18 ಮೊಬೈಲ್ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದ್ಟಾರೆ.
ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಉಸ್ಮಾನ್ ಗನಿ(32) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ಲೊಟ್ಟೆಗೊಲ್ಲಹಳ್ಳಿಯ ಜಲಗೇರಮ್ಮ ದೇವಸ್ಥಾನ ಸಮೀಪದ ಮನೆಯೊಂದರಲ್ಲಿ ಮಾ.28ರಂದು ನಡೆದ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯುತ್ತಿರುವ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ತಂಡಗಳ ಸೋಲು ಮತ್ತು ಗೆಲುವಿನ ಬಗ್ಗೆ ಸಾರ್ವಜನಿಕರಿಂದ ಮೊಬೈಲ್ ಆಪ್ ಮೂಲಕ ಹಣ ಪಣವಾಗಿ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸುತ್ತಾ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಯಿಂದ 2.5 ಲಕ್ಷ ರೂ.ನಗದು, 18 ಮೊಬೈಲ್, ಕ್ರಿಕೆಟ್ ಬೆಟ್ಟಿಂಗ್ ವಿವರ ಬರೆದಿರುವ 93 ಚೀಟಿಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.





