Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರಂಗೇರಿದ ಲೋಕಸಭಾ ಚುನಾವಣಾ ರಣಕಣ

ರಂಗೇರಿದ ಲೋಕಸಭಾ ಚುನಾವಣಾ ರಣಕಣ

ಆರೋಪ-ಪ್ರತ್ಯಾರೋಪ, ಅಧಿಕಾರ ದುರ್ಬಳಕೆ ದೂರು

-ಪ್ರಕಾಶ್ ರಾಮಜೋಗಿಹಳ್ಳಿ-ಪ್ರಕಾಶ್ ರಾಮಜೋಗಿಹಳ್ಳಿ30 March 2019 10:26 PM IST
share
ರಂಗೇರಿದ ಲೋಕಸಭಾ ಚುನಾವಣಾ ರಣಕಣ

ಬೆಂಗಳೂರು, ಮಾ. 30: ಬೇಸಿಗೆ ಬಿಸಿಲಿನ ಬೇಗೆ ಏರುತ್ತಿರುವಂತೆಯೆ ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ಏರುತ್ತಿದ್ದು ಪರಸ್ಪರ ಆರೋಪ-ಪ್ರತ್ಯಾರೋಪ, ಅಧಿಕಾರ ದುರ್ಬಳಕೆಯ ಸದ್ದು-ಸುದ್ದಿಗಳು ಹೆಚ್ಚಾಗಿವೆ.

ರಾಜ್ಯ-ದೇಶದ ಗಮನ ಸೆಳೆದಿರುವ ಮಂಡ್ಯ, ಹಾಸನ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾಧಿಕಾರಿಗಳು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೆ ಮಂಡ್ಯಕ್ಕೆ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಮಧ್ಯೆ ಹಾಸನ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷಾ ಅವರನ್ನು ವರ್ಗಾವಣೆ ಮಾಡಲಾಗಿದೆ.

ಮತ್ತೊಂದೆಡೆ ಐಟಿ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ದಾಳಿ ಮುಂದುವರಿಸಿದ್ದು, ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ದಾಳಿ ಮಾಡಿದ್ದು, ಬೆದರಿಸಲು ಈ ತಂತ್ರ ಹೆಣೆದಿದ್ದಾರೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಮುಖಂಡರು, ಗುತ್ತಿಗೆದಾರರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರೆ, ಇವರಿಗೆ ಅಸಮಾಧಾನವೇಕೆ ಎಂದು ಪ್ರಶ್ನಿಸಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಏಕೆ ತಲೆ ಕೆಡಿಸಿಕೊಳ್ಳುತ್ತಿದ್ದಾರೆಂದು ಲೇವಡಿ ಮಾಡಿದ್ದಾರೆ.

ಒತ್ತಡ ಆರೋಪ: ಇವಿಎಂನಲ್ಲಿ ಎ.ಸುಮಲತಾ ಎಂಬ ನನ್ನ ಹೆಸರು ಮೊದಲು ಬರಬೇಕಿತ್ತು. ಆದರೆ, ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಕ್ರಮಸಂಖ್ಯೆ 1ನ್ನು ನೀಡಿದ್ದು, ನನಗೆ ಕ್ರಮಸಂಖ್ಯೆ 20ನ್ನು ನೀಡಿದ್ದು, ಚುನಾವಣಾಧಿಕಾರಿಗಳ ಮೇಲೆ ಒತ್ತಡ ಹೇರಿ ನನ್ನ ಹೆಸರನ್ನು ಕೊನೆಯಲ್ಲಿ ಬರುವಂತೆ ಮಾಡಲಾಗಿದೆ ಎಂದು ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಆರೋಪಿಸಿದ್ದಾರೆ.

ಈ ಆರೋಪಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಇವಿಎಂನಲ್ಲಿ ಮಾನ್ಯತೆ ಇರುವ ಪಕ್ಷಗಳ ಹೆಸರು ಮೊದಲಿಗೆ ಬರುತ್ತದೆ. ಹೀಗಾಗಿ ನಿಖಿಲ್ ಕುಮಾರಸ್ವಾಮಿಗೆ ಕ್ರಮಸಂಖ್ಯೆ 1 ಬಂದಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಆರೋಪಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಮಂಡ್ಯ ಕ್ಷೇತ್ರದಲ್ಲಿ ಚುನಾವಣೆ ನೀತಿ ನಿಯಮದ ಪ್ರಕಾರ ಪ್ರಕ್ರಿಯೆ ನಡೆಯುತ್ತಿದೆ. ಅದರಲ್ಲಿ ತಪ್ಪು ಕಂಡರೆ ಯಾರು ಬೇಕಾದರೂ ಕೋರ್ಟ್‌ಗೆ ಹೋಗಲಿ. ಬಿಜೆಪಿಯವರು ಸುಮಲತಾ ಪರ ಪ್ರಚಾರ ಮಾಡುತ್ತಿರುವುದು ಸಂತೋಷ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.

ಎ.18ರಂದು ನಡೆಯಲಿರುವ ಮೊದಲ ಹಂತದಲ್ಲಿ 14 ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಾಗೂ ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದ್ದು, ರಾಜಕೀಯ ಮುಖಂಡರು ಬಿಸಿಲ ಬೇಗೆಯನ್ನು ಲೆಕ್ಕಿಸದೆ ಮತದಾರರ ಮನಗೆಲ್ಲಲು ಬೆವರು ಹರಿಸುತ್ತಿದ್ದಾರೆ.

ಜಟಾಪಟಿ: ಹಾಸನ ಜಿಲ್ಲೆ ಬೇಲೂರಿನಲ್ಲಿ ಏರ್ಪಡಿಸಿದ್ದ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಟಾಪಟಿ ನಡೆದಿದ್ದು, ಮುಖಂಡರ ಸಮ್ಮುಖದಲ್ಲೇ ಕಾರ್ಯಕರ್ತರು ಪರಸ್ಪರ ಕೈ-ಕೈ ಮಿಲಾಯಿಸಿದ್ದು, ಕುರ್ಚಿಗಳನ್ನು ಎಸೆದು ಗಲಾಟೆ ಮಾಡಿಕೊಂಡಿದ್ದಾರೆ.

share
-ಪ್ರಕಾಶ್ ರಾಮಜೋಗಿಹಳ್ಳಿ
-ಪ್ರಕಾಶ್ ರಾಮಜೋಗಿಹಳ್ಳಿ
Next Story
X