Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಮೋದಿಯ 100 ತಪ್ಪುಗಳು’: ಪುಸ್ತಕ...

‘ಮೋದಿಯ 100 ತಪ್ಪುಗಳು’: ಪುಸ್ತಕ ಬಿಡುಗಡೆಗೊಳಿಸಿದ ಕಾಂಗ್ರೆಸ್‌

ಪುಸ್ತಕದಲ್ಲಿ ಏನೇನಿದೆ ?

ವಾರ್ತಾಭಾರತಿವಾರ್ತಾಭಾರತಿ30 March 2019 10:28 PM IST
share
‘ಮೋದಿಯ 100 ತಪ್ಪುಗಳು’: ಪುಸ್ತಕ ಬಿಡುಗಡೆಗೊಳಿಸಿದ ಕಾಂಗ್ರೆಸ್‌

ಮುಂಬೈ, ಮಾ.30: ಪ್ರಧಾನಿ ನರೇಂದ್ರ ಮೋದಿಯ ಕುರಿತು ಕಾಂಗ್ರೆಸ್ ಪಕ್ಷ ಪುಸ್ತಕವೊಂದನ್ನು ಶನಿವಾರ ಬಿಡುಗಡೆಗೊಳಿಸಿದ್ದು ಇದಕ್ಕೆ ‘ಮೋದಿಯ 100 ತಪ್ಪುಗಳು’ ಎಂಬ ಶೀರ್ಷಿಕೆಯಿದ್ದು, ‘ಬಿಜೆಪಿಯ ಶಿಶುಪಾಲ’ ಎಂಬ ಟ್ಯಾಗ್‌ಲೈನ್ ನೀಡಲಾಗಿದೆ.

ದಾದರ್‌ನಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಮುಖರಾದ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್, ಅಶೋಕ್ ಚವಾಣ್ ಉಪಸ್ಥಿತಿಯಲ್ಲಿ ನಡೆದ ಸಭೆಯ ಬಳಿಕ ‘ಪ್ರಧಾನಿಯ 100 ತಪ್ಪುಗಳು’ ಎಂಬ ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ರಫೇಲ್ ಒಪ್ಪಂದ ಮೋದಿಯ ಮೊದಲ ತಪ್ಪು ಎಂದು ಕೃತಿಯಲ್ಲಿ ಉಲ್ಲೇಖಿಸಲಾಗಿದೆ.

‘ರಫೇಲ್ ಒಪ್ಪಂದ- ಅಂಬಾನಿಯ ಗೆಲುವು’ ಎಂಬ ಲೇಖನದಲ್ಲಿ , ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ರಫೇಲ್ ವಿಮಾನ ಖರೀದಿಗೆ ಉಲ್ಲೇಖಿಸಿದ್ದ ಮೊತ್ತದ ಮೂರು ಪಟ್ಟು ಹೆಚ್ಚಿನ ಮೊತ್ತವನ್ನು ಮೋದಿ ಸರಕಾರ ಪಾವತಿಸಿದೆ. 36 ವಿಮಾನಗಳಿಗೆ 58 ಕೋಟಿ ರೂ. ಪಾವತಿಸಲಾಗಿದೆ ಎಂದು ತಿಳಿಸಲಾಗಿದೆ. ಅಲ್ಲದೆ ಅನಿಲ್ ಅಂಬಾನಿಯನ್ನು ಭಾರತೀಯ ಪಾಲುದಾರ ಸಂಸ್ಥೆಯನ್ನಾಗಿ ಆಯ್ಕೆ ಮಾಡುವಂತೆ ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ ಸಂಸ್ಥೆಗೆ ಮೋದಿ ಸರಕಾರ ಯಾಕೆ ಒತ್ತಡ ತಂದಿದೆ ಎಂದೂ ಪ್ರಶ್ನಿಸಲಾಗಿದೆ. ತನ್ನ ಮಿಲಿಯಾಧೀಶ ಸ್ನೇಹಿತನಿಗಾಗಿ ಪ್ರಧಾನಿ ದೇಶದ ಸಾವಿರಾರು ಕೋಟಿ ರೂ.ಗಳನ್ನು ಕೊಡುಗೆ ನೀಡಿದ್ದಾರೆ ಎಂದು ತಿಳಿಸಲಾಗಿದೆ. ಪೊಳ್ಳು ಭರವಸೆ; ಕಡಿಮೆ ಕೆಲಸ ಎಂಬ ಮತ್ತೊಂದು ಲೇಖನದಲ್ಲಿ ಪ್ರಧಾನಿ ಮೋದಿ ಸರಕಾರ ಕೆಲಸ ಮಾಡುವುದಕ್ಕಿಂತ, ಸರಕಾರಿ ಹಣದಲ್ಲಿ ಜಾಹೀರಾತು ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುವುದರಲ್ಲೇ ಮಗ್ನವಾಗಿದೆ ಎಂದು ಹೇಳಲಾಗಿದೆ.

  ‘ನೋಟು ರದ್ದತಿ ಎಂಬ ಭೂತ, ಅರ್ಥವ್ಯವಸ್ಥೆ ಪಾತಾಳಕ್ಕೆ’ ಎಂಬ ಲೇಖನದಲ್ಲಿ ನೋಟು ರದ್ದತಿಯ ನಿರ್ಧಾರದಿಂದ ಜನಸಾಮಾನ್ಯರು ಪಟ್ಟಿರುವ ಬವಣೆಯನ್ನು ವಿವರಿಸಲಾಗಿದೆ. ಮೋದಿಯ ನಿರ್ಧಾರದಿಂದ ಕಪ್ಪುಹಣದ ನಿಯಂತ್ರಣವಾಗಲಿಲ್ಲ, ಆದರೆ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡರು. ಇ-ಕಾಮರ್ಸ್ ವ್ಯವಹಾರದ ಸಂಸ್ಥೆಗಳ ವ್ಯಾಪಾರ ವೃದ್ಧಿಸಿತು ಅಷ್ಟೇ ಎಂದು ಹೇಳಲಾಗಿದೆ.

ಈ ಕೃತಿಯಲ್ಲಿ ಮೋದಿಯನ್ನು ‘ಆಧುನಿಕ ಶಿಶುಪಾಲ’ ಎಂದು ಬಣ್ಣಿಸಲಾಗಿದೆ. ಮಹಾಭಾರತ ಪುರಾಣಕೃತಿಯಲ್ಲಿ ಶಿಶುಪಾಲ ಎಂಬ ರಾಜನ ತಾಯಿ ತನ್ನ ಮಗ 100 ತಪ್ಪು ಮಾಡುವವರೆಗೆ ಆತನನ್ನು ಕ್ಷಮಿಸಬೇಕೆಂದು ಸೋದರಳಿಯ ಕೃಷ್ಣನಿಂದ ವರ ಬೇಡುತ್ತಾಳೆ. ಅದಕ್ಕೆ ಸಮ್ಮತಿಸಿದ ಕೃಷ್ಣ ಶಿಶುಪಾಲನ 101ನೇ ತಪ್ಪಿಗಾಗಿ ಆತನನ್ನು ವಧಿಸುತ್ತಾನೆ. ಸದಾಕಾಲ ಪುರಾಣದ ವಾಕ್ಯಗಳನ್ನು ಉಲ್ಲೇಖಿಸುವ ಮೋದಿಗೆ ಈಗ ಶಿಶುಪಾಲನ ಕತೆಯನ್ನು ನೆನಪಿಸಬೇಕಿದೆ. ದೇಶದ ಜನರು ಈ ಶಿಶುಪಾಲ(ಮೋದಿ)ನ 100 ತಪ್ಪುಗಳನ್ನು ಕ್ಷಮಿಸಿದ್ದಾರೆ. ಈಗ 101ನೇ ತಪ್ಪು ಮಾಡಿರುವ ಮೋದಿಗೆ ಖಂಡಿತಾ ಶಿಕ್ಷೆ ಕಾದಿದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X