Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್ 'ಟ್ರೆಡಿಶ್‍ನಲ್ ಡೇ-2019'

ಆಳ್ವಾಸ್ 'ಟ್ರೆಡಿಶ್‍ನಲ್ ಡೇ-2019'

ವಾರ್ತಾಭಾರತಿವಾರ್ತಾಭಾರತಿ30 March 2019 10:48 PM IST
share
ಆಳ್ವಾಸ್ ಟ್ರೆಡಿಶ್‍ನಲ್ ಡೇ-2019

ಮೂಡುಬಿದಿರೆ: ನಮ್ಮ ಸಂಸ್ಕೃತಿ ನಮಗೆ ಅರ್ಥವಾಗಬೇಕಾದರೆ ನಮ್ಮ ಭಾಷೆ ನೆಲೆಕಾಣಬೇಕು ಆಗ ಮಾತ್ರ ನಮ್ಮ ಪರಂಪರೆ ಸಂಸ್ಕøತಿಯನ್ನು ನಾವು ಆಳವಾಗಿ ತಿಳಿದುಕೊಳ್ಳಲು ಸಾಧ್ಯ ಎಂದು ನಟಿ ಪದ್ಮಶ್ರೀ ಪುರಸ್ಕೃತೆ ಬಿ.ಜಯಶ್ರೀ ಹೇಳಿದರು.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಿಜಾರು ಎಐಇಟಿ ಆವರಣದಲ್ಲಿ ನಡೆದ ಟ್ರಡಿಶ್‍ನಲ್ ಡೇ-2019' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ವೈವಿಧ್ಯತೆಯನ್ನು ನಾವು ಈ ಕಾಲೇಜಿನಲ್ಲಿ ಜೀವಂತವಾಗಿ ನೋಡಬಹುದು. ಈ ರೀತಿ ವಿವಿಧ ಸಂಸ್ಕೃತಿಗಳ ಆನಾವರಣದಿಂದ ಸಂಸ್ಕೃತಿ ಮತ್ತು ಪರಂಪರೆಯ ಕೊಡುಕೊಳ್ಳುವಿಕೆಯಾಗಿ ನಮ್ಮ ಭವ್ಯ ಪರಂಪರೆ ನೂರ್ಕಾಲ ಮುಂದುವರೆಯಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಮಾತನಾಡಿ ನಮ್ಮ ಪೂರ್ವಜರು ನಮಗೆ ನೀಡಿರುವ ಸಂಸ್ಕೃತಿಯನ್ನು ನಾವು ಜಾಗರೂಕತೆಯಿಂದ ಮುದುವರೆಸಿಕೊಂಡು ಹೋಗುವುದು ನಮ್ಮೆಲ್ಲರ ಮೂಲ ಕರ್ತವ್ಯ ಎಂದು ಹೇಳಿದರು.

ಯುವಜನತೆ ಮೂಡನಂಬಿಕೆ ಮತ್ತು ನಂಬಿಕೆಯ ನಡುವೆ ಇರುವ ವ್ಯತ್ಯಾಸವನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು. ಮೂಡನಂಬಿಕೆಯನ್ನು ಹೋಗಲಾಡಿಸಿ ನಂಬಿಕೆಗಳನ್ನು ಹೆಚ್ಚು ಪ್ರೋತ್ಸಾಹಿಸಿ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕು ಎಂದು ಹೇಳಿದರು. ವಿದ್ಯಾರ್ಥಿಗಳು ಸಂಸ್ಕೃತಿ ಪರಂಪರೆಯುನ್ನು ‘ಫ್ಯಾಶನ್’ ಆಗಿ ನೊಡದೇ ‘ಪ್ಯಾಶನ್’ ಆಗಿ ತಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ವಿಜೇತ ಮೂಡಬಿದಿರೆಯ ಕಂಬಳದ ಓಟಗಾರ ಶ್ರೀನಿವಾಸ ಗೌಡ ಅವರನ್ನು ಗೌರವಿಸಲಾಯಿತು. ಆಳ್ವಾಸ್‍ನ ಬಿವಿಎ ವಿದ್ಯಾರ್ಥಿ ಪ್ರದೀಶ್ ಮ್ಯಾಜಿಕ್ ಆರ್ಟ್ ಮೂಲಕ ನಿರ್ಮಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹೊಸ ಲೋಗೋವನ್ನು ಅತಿಥಿಗಳು ಬಿಡುಗಡೆ ಮಾಡಿದರು.

ಸಭಾ ಕಾರ್ಯಕ್ರಮದ ನಂತರ ಕಲ್ಲಡ್ಕ ಗೊಂಬೆ ಕುಣಿತ, ಮಹಾರಾಷ್ಟ್ರ ಮತ್ತು ಗುಜರಾತ್ ಭಾಗದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಲವಣಿ, ಕೋಯಿ, ಗರ್ಭ, ಗೋನ್ ದಂಡ ನೃತ್ಯ ನಡೆಯಿತು.  ಕರಾವಳಿ ಸಾಂಸ್ಲøತಿಕ ಕಾರ್ಯಕ್ರಮ ಜಾಗಂಟೆ, ಶಂಖ ವಾದನದೊಂದಿಗೆ ಪ್ರಾರಂಭವಾಗಿ ಬಲೀಂದ್ರ ಕರೆಯುವುದು, ಯಕ್ಷಗಾನ, ಆಟಿಕಳಂಜ, ಬ್ಯಾರಿ ದಫ್‍ಮುಟ್, ಕಂಬಳ, ಹುಲಿವೇಷದ ವಿಶೇಷತೆಗಳೊಂದಿಗೆ ಪ್ರದರ್ಶನಗೊಂಡಿತು. ನಂತರ ಕೇರಳದ ಕಲಾರಿ, ಮೋಹಿನಿ ಅಟ್ಟಂ, ಚೆಂಡೆ, ಕಥಕಳಿ, ಶೃಂಗಾರಿ ನೃತ್ಯದ ಮೂಲಕ ಕೇರಳದ ಪ್ರವಾಹದ ಚಿತ್ರಣವನ್ನು ಕಟ್ಟಿಕೊಡಲಾಯಿತು. ನಂತರ ಕುಡುಬಿ ನೃತ್ಯ, ಮಲ್ಲಕಂಬ, ಈಶಾನ್ಯ ರಾಜ್ಯಗಳ ನೃತ್ಯ, ಡ್ರಾಮ್‍ಜಾಮ್, ರೆಸ್ಟ್ ಆಫ್ ಇಂಡಿಯಾ, ಶ್ರೀಲಂಕಾದ ಸಂಸ್ಕøತಿಕ ಕಾರ್ಯಕ್ರಮಗಳು ಅನಾವರಣಗೊಂಡವು.

ಕಾರ್ಯಕ್ರಮದಲ್ಲಿ ರಾಜೀವಗಾಂಧಿ ವಿಶ್ವವಿದ್ಯಾಲಯಕ್ಕೆ ಸಂಬಂಧ ಪಟ್ಟ ಕಾಲೇಜುಗಳಲ್ಲಿ ನಡೆದ ವಿವಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೆಂಜಿಗ್ ಟ್ರಸ್ಟಿ ವಿವೇಕ್ ಆಳ್ವ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಆಳ್ವಾಸ್ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ನಿರೂಪಿಸಿದರು. ಆರ್ಯವೇದ ವಿಭಾಗದ ಜಿತೇಂದ್ರ ಪೂಜಾರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X