Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಂಗ್ರೆಸ್‌ನಿಂದ ಜಾತಿ ರಾಜಕಾರಣ: ಬಿಜೆಪಿ...

ಕಾಂಗ್ರೆಸ್‌ನಿಂದ ಜಾತಿ ರಾಜಕಾರಣ: ಬಿಜೆಪಿ ಆರೋಪ

ವಾರ್ತಾಭಾರತಿವಾರ್ತಾಭಾರತಿ30 March 2019 10:51 PM IST
share

ಮಂಗಳೂರು, ಮಾ.30: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಸಂಸದ ನಳಿನ್ ಕುಮಾರ್‌ರ ಸಾಧನೆ, ಜನಪ್ರಿಯತೆಯನ್ನು ಸಹಿಸದ ಕಾಂಗ್ರೆಸ್ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿವಿ ವಾಹಿನಿಯೊಂದನ್ನು ಬಳಸಿ ಅಪಪ್ರಚಾರದಲ್ಲಿ ತೊಡಗಿದೆ. ಜಾತ್ಯತೀತ ಪಕ್ಷ ಎನ್ನುವ ಕಾಂಗ್ರೆಸ್ಸಿಗರು ಅಪಪ್ರಚಾರಕ್ಕೆ ಜಾತಿಯ ಹೆಸರು ಬಳಸಿ ಹಿಂದೂ ಸಮಾಜವನ್ನು ಒಡೆಯುವ ಷಡ್ಯಂತ್ರ ನಡೆಸಿದ್ದಾರೆ ಎಂದು ಬಿಜೆಪಿ ದ.ಕ. ಚುನಾವಣಾ ಕಾನೂನು ವಿಭಾಗದ ಪ್ರಮುಖ್ ಕೆ. ಶಂಭು ಶರ್ಮ ಆರೋಪಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನಾಯಕರು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈಯ ಹೆಸರಿನಲ್ಲಿ ಕರಪತ್ರವೊಂದನ್ನು ಮುದ್ರಿಸಿ, ಜಾತಿ ಹೆಸರಿನಲ್ಲಿ ಮತ ನೀಡುವಂತೆ ತಿಳಿಸಿದ್ದರು.

ನಳಿನ್ ಕುಮಾರ್ ಕಟೀಲು ಸಹಿತ ಕೆಲ ನಾಯಕರ ಹೆಸರನ್ನು ಅದರಲ್ಲಿ ನಮೂದಿಸಿದ್ದರು. ತಮ್ಮ ಹೆಸರಿನಲ್ಲಿ ಇಂತಹ ಕರಪತ್ರ ಮುದ್ರಣವಾಗಿದೆ ಎಂದು ತಿಳಿಯುತ್ತಿದ್ದಂತೆ ಮಾಲಾಡಿ ಪೊಲೀಸ್ ಆಯುಕ್ತರಿಗೆ ದೂರು ನೀಡಿ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದರು. ಮಾಧ್ಯಮಗಳಲ್ಲೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ಅಜಿತ್ ಕುಮಾರ್ ಮಾಲಾಡಿ ಪೊಲೀಸ್ ಆಯುಕ್ತರಿಗೆ ನೀಡಿದ ದೂರನ್ನು ತಿರುಚಿ ಖಾಸಗಿ ಟಿವಿ ವಾಹಿನಿಯೊಂದು ಸುಳ್ಳು ಸುದ್ದಿ ಸೃಷ್ಟಿಸಿ ಪ್ರಸಾರ ಮಾಡಿದೆ. ಮಾಲಾಡಿ ಅವರು ನಳಿನ್ ವಿರುದ್ಧ ದೂರು ನೀಡಿದ್ದಾರೆ ಎಂಬ ಸುಳ್ಳು ಸುದ್ದಿ ಪ್ರಸಾರ ಮಾಡಿದೆ. ಬಿಜೆಪಿ ಅಭ್ಯರ್ಥಿ ಮಾಲಾಡಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಕಪೋಲಕಲ್ಪಿತ ವರದಿಯನ್ನು ಚುನಾವಣೆ ಸಂದರ್ಭ ಸ್ಥಾಪಿತ ಹಿತಾಸಕ್ತಿ ಉದ್ದೇಶ ಇಟ್ಟುಕೊಂಡು ಪ್ರಸಾರ ಮಾಡಿದ್ದು ಸಂಶಯಕ್ಕೆ ಎಡೆ ಮಾಡಿದೆ. ಮಾಲಾಡಿಯವರು ನಳಿನ್ ವಿರುದ್ಧ ಯಾವುದೇ ದೂರು ನೀಡಿಲ್ಲ. ಆದರೂ ಖಾಸಗಿ ವಾಹಿನಿ ಕಾಂಗ್ರೆಸ್ ಅಭ್ಯರ್ಥಿಗೆ ಸಹಾಯ ಮಾಡುವ ಉದ್ದೇಶದಿಂದ ಸುಳ್ಳು ಸುದ್ದಿ ಪ್ರಸಾರ ಮಾಡಿ ಆ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಇದು ಪತ್ರಿಕಾಧರ್ಮಕ್ಕೆ ಎಸಗಿದ ಅಪಚಾರವಾಗಿದ್ದು, ಇಂತಹ ನೀಚ ರಾಜಕಾರಣ ಖಂಡನೀಯ ಎಂದರಲ್ಲದೆ ಸುಳ್ಳು ಸುದ್ದಿಯನ್ನು ಹಬ್ಬಿಸಿ ಸಮಾಜವನ್ನು ಒಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗ ಮತ್ತು ಮಂಗಳೂರು ಪೊಲೀಸ್ ಕಮೀಷನರ್‌ಗೆ ದೂರು ನೀಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಕಾನೂನು ಪ್ರಕೋಷ್ಠದ ಪ್ರಮುಖರಾದ ಸುಧಾಕರ ಜೋಷಿ, ಜಗದೀಶ ಶೇಣವ, ಸಂತೋಷ್ ನಾಯಕ್, ರಾಮಕೃಷ್ಣ ಶೆಟ್ಟಿ, ಪುರಂದರ ರೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X