Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಮಲತಾ ಏಜೆಂಟ್ ವಿಚಾರಣೆ ನಡೆಸಿದ...

ಸುಮಲತಾ ಏಜೆಂಟ್ ವಿಚಾರಣೆ ನಡೆಸಿದ ಪ್ರಾದೇಶಿಕ ಆಯುಕ್ತರು

ವಾರ್ತಾಭಾರತಿವಾರ್ತಾಭಾರತಿ31 March 2019 7:49 PM IST
share

ಮಂಡ್ಯ, ಮಾ.31: ಜೆಡಿಎಸ್ ಅಭ್ಯರ್ಥಿ ನಾಮಪತ್ರ ಸಿಂಧುತ್ವ ಪ್ರಕರಣ ತೀವ್ರ ಗಮನ ಸೆಳೆದಿದ್ದು, ಈ ಸಂಬಂಧ ಆಕ್ಷೇಪಣೆ ಸಲ್ಲಿಸಿರುವ ಪಕ್ಷೇತರ ಅಭ್ಯರ್ಥಿ ಅಂಬರೀಷ್ ಸುಮಲತಾ ಅವರ ಚುನಾವಣಾ ಪ್ರತಿನಿಧಿ ಮದನ್‍ಕುಮಾರ್ ಅವರಿಂದ ಪ್ರಾದೇಶಿಕ ಆಯಕ್ತ ಅನಿಲ್‍ಕುಮಾರ್ ಹೇಳಿಕೆ ಪಡೆದಿದ್ದಾರೆ.

ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಶನಿವಾರ ನಗರಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ನಿರ್ಗಮಿಸಿದ ಬೆನ್ನಲ್ಲೇ, ರವಿವಾರ ಪ್ರಾದೇಶಿಕ ಆಯುಕ್ತರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುಮಾರು ಮೂರು ಗಂಟೆ ಮದನ್ ಅವರ ಹೇಳಿಕೆ ಪಡೆದರು.

ಇಲ್ಲವರೆಗೂ ನಡೆದಿರುವ ಎಲ್ಲಾ ಬೆಳವಣಿಗೆಗಳ ಬಗ್ಗೆ ಪ್ರಾದೇಶಿಕ ಆಯಕ್ತರಿಗೆ ಮಾಹಿತಿ ನೀಡಿದ್ದೇನೆ. ಎಲ್ಲವನ್ನೂ ಅವರು ತಾಳ್ಮೆಯಿಂದ ಕೇಳಿದ್ದಾರೆ. ಈ ಸಂಬಂಧ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ಅವರಿಂದಲೂ ಹೇಳಿಕೆ ಪಡೆಯಬಹುದು ಎಂದು ನಂತರ ಮದನ್ ಸುದ್ದಿಗಾರರಿಗೆ ತಿಳಿಸಿದರು.

ನಾಮಪತ್ರ ಸಲ್ಲಿಕೆಯಿಂದ ಆರಂಭವಾದ ಬೆಳವಣಿಗೆಗಳು. ನಾಮಪತ್ರ ಪರಿಶೀಲನೆ ವೇಳೆ ನಿಖಿಲ್ ಅವರ ನಾಮಪತ್ರಕ್ಕೆ ನಾನು ಸಲ್ಲಿಸಿದ್ದ ಆಕ್ಷೇಪಣೆ, ಪಡೆದುಕೊಂಡ ವೀಡಿಯೋ ನಕಲಿನ ಮಾಹಿತಿ, ಮುಖ್ಯ ಚುನಾವಣಾಧಿಕಾರಿಗೆ ನೀಡಿರುವ ದೂರಿನ ಬಗ್ಗೆ ಪ್ರಾದೇಶಿಕ ಆಯುಕ್ತರಿಗೆ ಮಾಹಿತಿ ನೀಡಿದ್ದೇನೆ. ನ್ಯಾಯ ಸಿಗುವ ವಿಶ್ವಾಸವಿದೆ. ಇಲ್ಲದಿದ್ದರೆ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದರು.

ನಾನು ಮಾಡಿರುವ ಆಕ್ಷೇಪಣೆಗೆ ಜಿಲ್ಲಾ ಚುನಾವಣಾಧಿಕಾರಿಗಳು ಸ್ಪಷ್ಟವಾಗಿ ಉತ್ತರ ನೀಡಿಲ್ಲ. ಅವರು ನೀಡಿರುವ ಸ್ಪಷ್ಟನೆ ಸಂಶಯಾಸ್ಪದವಾಗಿವೆ. ನಿಖಿಲ್ ನಾಮಪತ್ರ ನೂನ್ಯತೆ ಸರಿಪಡಿಸಲಾಗಿದೆ ಎಂದು ಹೇಳುತ್ತಾರೆ. ಆದರೆ, ಸರಿಪಡಿಸಲಾದ ಅಫಿದಾವಿತ್‍ನ್ನು ನಾಮಪತ್ರ ಪರಿಶೀಲನೆ ವೇಳೆ ತೋರಿಸಿಲ್ಲ. ನೀಡಿರುವ ವೀಡಿಯೋ ಅಪೂರ್ಣವಾಗಿದೆ ಎಂದು ಅವರು ಆರೋಪಿಸಿದರು.

ತಾನು ನೀಡಿದ ದೂರಿನ ಹಿನ್ನೆಲೆಯಲ್ಲಿ ಚುನಾವಣಾ ವೀಕ್ಷಕ ರಂಜಿತ್‍ಕುಮಾರ್ ಐದು ಪುಟಗಳ ಲಿಖಿತ ರೂಪದಲ್ಲಿ ವಿವರಣೆ ನೀಡಿದ್ದಾರೆ. ಅವರು ನೀಡಿರುವ ಪತ್ರದಲ್ಲಿರುವ ಉಲ್ಲೇಖದಂತೆ ನಾಮಪತ್ರ ಪರಿಶೀಲನೆ ವೇಳೆಯಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣವಾಗಿಲ್ಲ. ನೀವು ಆಕ್ಷೇಪಣೆ ವ್ಯಕ್ತಪಡಿಸಿದ ಸಂದರ್ಭದಲ್ಲಿ ಕ್ಯಾಮೆರಾಮೆನ್ ಕ್ಯಾಮೆರಾವನ್ನು ಬೇರೆಡೆಗೆ ತಿರುಗಿಸಿದ್ದರಿಂದ ಸಂಪೂರ್ಣ ವಿಡಿಯೋ ಚಿತ್ರೀಕರಣವಾಗಿಲ್ಲ. ಆದ್ದರಿಂದ ಕ್ಯಾಮೆರಾಮೆನ್ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ದೂರು ನೀಡಲಾಗಿದೆ ಎಂದು ವಿವರಣೆ ನೀಡಿದ್ದಾರೆ ಎಂದು ಮದನ್ ಹೇಳಿದರು.

ಇವೆಲ್ಲವನ್ನೂ ಗಮನಿಸಿದರೆ ಜಿಲ್ಲಾ ಚುನಾವಣಾಧಿಕಾರಿ, ಇತರೆ ಸಿಬ್ಬಂದಿಯನ್ನು ದುರುಪಯೋಗಪಡಿಸಿಕೊಂಡಿರುವಂತೆ ಕಾಣುತ್ತಿದ್ದು, ನುಣಿಚಿಕೊಳ್ಳುವ ಯತ್ನ ನಡೆದಿದೆ ಎನಿಸುತ್ತಿದೆ. ಏಕೆಂದರೆ, ನಾಮಪತ್ರ ಪರಿಶೀಲನೆ ವೀಡಿಯೋ ರೆಕಾರ್ಡ್ ಮಾಡಿದ ಕ್ಯಾಮೆರಾಮೆನ್ ಮೇಲೆ ಆರೋಪ ಹೊರಿಸಲು ಮುಂದಾಗಿದ್ದಾರೆ ಎಂದು ಮದನ್ ಗಂಭೀರ ಆರೋಪ ಮಾಡಿದರು.

ನಾಮಪತ್ರ ಪರಿಶೀಲನೆಯ ದಿನವೇ ಬೆಳಗ್ಗೆ 10 ಗಂಟೆಗೆ ನಿಖಿಲ್ ಪರ ಚುನಾವಣೆ ಏಜೆಂಟ್ ಹೊಸ ನಮೂನೆ ಸಲ್ಲಿಸಿದ್ದಾರೆ ಎನ್ನುವುದಾದರೆ, ಆ ದಿನ ಬೆಳಗ್ಗೆ ಅಭ್ಯರ್ಥಿ ನಿಖಿಲ್ ಮಂಡ್ಯದಲ್ಲಿದ್ದರಾ ಎಂಬ ಅನುಮಾನ ಕಾಡುತ್ತಿದೆ. ಅಲ್ಲದೆ, ಹೊಸ ನಮೂನೆ ಹಾಗೂ ಹಳೇ ನಮೂನೆ ಎರಡಲ್ಲೂ ಒಂದೇ ದಿನಾಂಕವಿದೆ. ಇದು ಹೇಗೆ ಸಾಧ್ಯ? ಎಂದು ಅವರು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X