ಎಸ್.ಮೂರ್ತಿ ಅಮಾನತ್ತು ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಅಮಾನತ್ತು
ಬೆಂಗಳೂರು, ಮಾ.31: ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಎಸ್.ಮೂರ್ತಿ ಅವರನ್ನು ಅಮಾನತ್ತು ಮಾಡಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ವಿಧಾನಸಭೆ ವಿಶೇಷ ಮಂಡಳಿ ಹೊರಡಿಸಿರುವ ಅಮಾನತು ಆದೇಶಕ್ಕೆ ತಡೆ ನೀಡುವಂತೆ ಕೋರಿ ಮೂರ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಅಮಾನತ್ತು ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು, ವಿಚಾರಣೆಯನ್ನು ಮುಂದೂಡಿತು.
2016, 2017ರಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕಾಮಗಾರಿ ಹಾಗೂ ಇತರೆ ಖರ್ಚು ವೆಚ್ಚಗಳಲ್ಲಿ ಅವ್ಯವಹಾರ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿರುವ ಶಾಸಕಾಂಗದ ವಿಶೇಷ ಮಂಡಳಿಯ ಆದೇಶದ ಅನುಸಾರ ವಿಧಾನಸಭೆ ಅಧೀನ ಕಾರ್ಯದರ್ಶಿ ಎಸ್.ಮೂರ್ತಿ ಅವರನ್ನು 2018ರ ಡಿ.27ರಂದು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಈ ಆದೇಶ ಪ್ರಶ್ನಿಸಿ ವುೂರ್ತಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Next Story