ಉಡುಪಿ: ಅಂಬೇಡ್ಕರ್ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆ
ಉಡುಪಿ, ಎ.1: ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಹಾಗೂ ಸಂವಿಧಾನ ಶಿಲ್ಪಿಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಎ.5 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಬು ಜಗಜೀವನ ರಾಂ ಜಯಂತಿ ನಡೆಯಲಿದೆ. ಎ.14ರಂದು ಬೆಳಗ್ಗೆ 9:30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ಜಿಪಂ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾ ಗುವುದು. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ ಯಲ್ಲಿ ಎರಡೂ ಜಯಂತಿ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ನಾಗೇಶ್ ರಾಯ್ಕರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭುಜಬಲಿ ಪಾಸಾನೆ, ದಲಿತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
Next Story





