Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಕ್ರಿಯಾತ್ಮಕ ಚಿಂತನೆಗೆ ಪ್ರಾಯೋಗಿಕ...

‘ಕ್ರಿಯಾತ್ಮಕ ಚಿಂತನೆಗೆ ಪ್ರಾಯೋಗಿಕ ಶಿಕ್ಷಣ ಆಧಾರ’

ವಾರ್ತಾಭಾರತಿವಾರ್ತಾಭಾರತಿ1 April 2019 9:55 PM IST
share
‘ಕ್ರಿಯಾತ್ಮಕ ಚಿಂತನೆಗೆ ಪ್ರಾಯೋಗಿಕ ಶಿಕ್ಷಣ ಆಧಾರ’

ಮಂಗಳೂರು, ಎ.1: ವಿದ್ಯಾರ್ಥಿಗಳು ಕೇವಲ ಶೇ.25ರಷ್ಟು ಶಿಕ್ಷಣವನ್ನು ತರಗತಿಗಳಲ್ಲಿ ಪಡೆಯುತ್ತಾರೆ, ಉಳಿದ ಶೇ.75ರಷ್ಟನ್ನು ಶಿಕ್ಷಣವನ್ನು ಕ್ಲಾಸ್‌ರೂಮ್‌ ನಿಂದ ಹೊರತಾದ ‘ಪ್ರಾಜೆಕ್ಟ್ ಬೇಸ್ಡ್ ಲರ್ನಿಂಗ್’ ಮೂಲಕ ಪ್ರಾಯೋಗಿಕವಾಗಿ ಜ್ಞಾನ ಸಂಪಾದಿಸಿಕೊಳ್ಳುತ್ತಾರೆ ಎಂದು ನಿಟ್ಟೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್.ವಿನಯ ಹೆಗ್ಡೆ ಅಭಿಪ್ರಾಯಪಟ್ಟರು.

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್ ವಿಭಾಗವು ಸೋಮವಾರ ವಿಭಾಗದ ಹಳೆವಿದ್ಯಾರ್ಥಿಗಳ ಪ್ರಾಯೋಜಕತ್ವದಲ್ಲಿ ಹಮ್ಮಿಕೊಂಡ ‘ಎಲಿಕ್ಸೀರ್-2019’ ವಿದ್ಯಾರ್ಥಿಗಳ ಮಾದರಿ ವಸ್ತುಪ್ರದರ್ಶನದ ಹತ್ತನೇ ವರ್ಷದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿಟ್ಟೆ ಶಿಕ್ಷಣ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಇಂತಹ ಪ್ರಾಯೋಗಿಕ ಶಿಕ್ಷಣ ವಿದ್ಯಾರ್ಥಿಗಳಿಗೆ ಸಿಗುತ್ತಿದೆ. ಆ ಶಿಕ್ಷಣವು ಇಂತಹ ವಸ್ತುಪ್ರದರ್ಶನ ಕಾರ್ಯಕ್ರಮ ಗಳ ಮೂಲಕ ಅನಾವರಣಗೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ತಮ್ಮ ಜ್ಞಾನವನ್ನು ಪ್ರದರ್ಶಿಸಲು ಇಂತಹ ಕಾರ್ಯಕ್ರಗಳು ಉತ್ತಮ ವೇದಿಕೆಯಾಗಿದೆ. ವಿಭಾಗ ದಲ್ಲಿ ಕಲಿತು ಇಂದು ಉತ್ತಮ ಉದ್ಯೋಗದಲ್ಲಿದ್ದು ಇಂತಹ ಪ್ರಾಜೆಕ್ಟ್ ಪ್ರದರ್ಶನಕ್ಕೆ ಸಹಾಯ ಮಾಡುವ ಹಳೆವಿದ್ಯಾರ್ಥಿಗಳ ಕೊಡುಗೆ ಮಹತ್ತರವಾದುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಪಾಲ್ಗೊಂಡಿದ್ದ ಎಚ್‌ಸಿಎಲ್ ಕಂಪೆನಿಯ ಜಪಾನ್ ವಿಭಾಗದ ಅಧ್ಯಕ್ಷ ಹರಿಕೃಷ್ಣ ಭಟ್ ಮಾತನಾಡಿ. ಜಪಾನ್‌ನಲ್ಲಿ ತಂತ್ರಜ್ಞಾನ ಬೆಳೆಯುತ್ತಿದೆ. ಆದರೆ ಮಾನವಶಕ್ತಿ ಅಥವಾ ಮಾನವ ಸಂಪನ್ಮೂಲದ ಕೊರತೆಯಿದೆ. ಜಪಾನ್‌ನ ಒಟ್ಟು ಜನಸಂಖ್ಯೆಯ 3ನೇ 1 ಪಾಲು 60 ವರ್ಷಕ್ಕೂ ಹೆಚ್ಚಿನ ವಯಸ್ಕರು. ಇಂತಹ ಸಂದರ್ಭದಲ್ಲಿ ಭಾರತ ಹಾಗೂ ಜಪಾನ್ ಸರಕಾರಗಳು ಒಪ್ಪಂದಕ್ಕೆ ಸಹಿ ಹಾಕಿದೆ ಎಂದರು.

2022ನೇ ಇಸವಿಯ ಒಳಗಾಗಿ ಸುಮಾರು 5ಲಕ್ಷ ಇಂಜಿನಿಯರ್‌ಗಳನ್ನು ಜಪಾನ್ ದೇಶಕ್ಕೆ ಉದ್ಯೋಗಾವಕಾಶದೊಂದಿಗೆ ಕಳುಹಿಸುವ ನಿರೀಕ್ಷೆ ಇದೆ. ಇದರಿಂದ ಎರಡು ದೇಶಗಳ ಬಾಂಧವ್ಯ ಹಾಗೂ ತಂತ್ರಜ್ಞಾನದ ಬೆಳವಣಿಗೆ ಕ್ಷಿಪ್ರಗತಿಯಲ್ಲಿ ಸಾಗಲಿದೆ ಎಂದರು. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್. ಚಿಪ್ಳೂಣ್ಕರ್ ಮಾತನಾಡಿದರು.

ವೇದಿಕೆಯಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಉಪಪ್ರಾಂಶುಪಾಲ ಡಾ.ಐ.ರಮೇಶ್ ಮಿತ್ತಂತಾಯ ಹಾಗೂ ಡಾ.ಶ್ರೀನಿವಾಸ ರಾವ್ ಬಿ.ಆರ್. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ನಿಧಿ ಪ್ರಾರ್ಥಿಸಿದರು. ಎಲಿಕ್ಸೀರ್ 2019 ವಸ್ತು ಪ್ರದರ್ಶನದ ಸಂಯೋಜಕ ಡಾ.ಸೂರ್ಯನಾರಾಯಣ ಕೆ. ಸ್ವಾಗತಿಸಿದರು. ಇಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥ ಡಾ.ನಾಗೇಶ್ ಪ್ರಭು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಲಿಕ್ಸೀರ್ ವಿದ್ಯಾರ್ಥಿ ಸಂಯೋಜಕ ಅನೂಪ್ ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಪೈ ಕಾರ್ಯಕ್ರಮ ನಿರೂಪಿಸಿದರು.

ಪ್ರಥಮ ವರ್ಷದ ಬಿ.ಇ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಬಗೆಯ ಮಾದರಿಗಳನ್ನು ಪ್ರದರ್ಶಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X