Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೋಲಿನ ಭಯದಿಂದ ಸ್ಪರ್ಧೆಗೆ ಶರದ್ ಪವಾರ್...

ಸೋಲಿನ ಭಯದಿಂದ ಸ್ಪರ್ಧೆಗೆ ಶರದ್ ಪವಾರ್ ಹಿಂದೇಟು: ಪ್ರಧಾನಿ ಮೋದಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ1 April 2019 9:55 PM IST
share
ಸೋಲಿನ ಭಯದಿಂದ ಸ್ಪರ್ಧೆಗೆ ಶರದ್ ಪವಾರ್ ಹಿಂದೇಟು: ಪ್ರಧಾನಿ ಮೋದಿ ಟೀಕೆ

ಮುಂಬೈ, ಎ.1: ಎನ್‌ಸಿಪಿ(ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ) ಅಧ್ಯಕ್ಷ ಶರದ್ ಪವಾರ್‌ರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ , ಎನ್‌ಸಿಪಿ ಪಕ್ಷದಲ್ಲಿ ಅಂತಃಕಲಹ ಆರಂಭವಾಗಿದ್ದು, ಶರದ್ ಪವಾರ್ ಪಕ್ಷದ ಮೇಲಿನ ಹಿಡಿತ ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ವಾರ್ಧಾದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದ ಮೋದಿ, ಪರಿಸ್ಥಿತಿ ತನಗೆ ವಿರುದ್ಧವಾಗಿದೆ ಎಂಬುದನ್ನು ಅರಿತುಕೊಂಡ ಬಳಿಕ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಪವಾರ್ ನಿರ್ಧರಿಸಿದರು . ಒಂದು ಸಮಯದಲ್ಲಿ ತಾನೂ ಪ್ರಧಾನಿಯಾಗಬಲ್ಲ ಎಂದು ಭಾವಿಸಿದ್ದ ಪವಾರ್ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಆದರೆ ಪರಿಸ್ಥಿತಿ ಅನುಕೂಲವಾಗಿಲ್ಲ ಎಂಬುದನ್ನು ಅರಿತೊಡನೆ, ನಾನು ರಾಜ್ಯಸಭಾ ಸದಸ್ಯನಾಗಿಯೇ ಇರುತ್ತೇನೆ ಎಂದುಬಿಟ್ಟರು. ಗಾಳಿ ಯಾವ ದಿಕ್ಕಿಗೆ ಬೀಸುತ್ತಿದೆ ಎಂಬುದನ್ನು ಪವಾರ್ ತಿಳಿದುಕೊಂಡಿದ್ದಾರೆ. ಈ ಬಾರಿ ದೇಶದ ಜನತೆ, ಪ್ರಮುಖ ನಾಯಕರನ್ನೇ ಒಂದು ಕ್ಷೇತ್ರದಿಂದ ಇನ್ನೊಂದಕ್ಕೆ ಓಡುವಂತೆ ಮಾಡಿದ್ದಾರೆ ಎಂದು ಮೋದಿ ಹೇಳಿದರು.

ವಂಶಪಾರಂಪರ್ಯದ ಆಡಳಿತಕ್ಕೆ ಪವಾರ್ ಮುಂದಾಗಿದ್ದಾರೆ. ಆದರೆ ಪವಾರ್ ಸಾಹೇಬರ ಸೋದರಳಿಯ ಅಜಿತ್ ಪವಾರ್ ಪಕ್ಷದ ನಿಯಂತ್ರಣವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಶರದ್ ಪವಾರ್ ಹಿಡಿತ ಸಡಿಲವಾಗುತ್ತಿದೆ. ಈ ಕಾರಣದಿಂದಲೇ ಎನ್‌ಸಿಪಿ ಟಿಕೆಟ್ ಹಂಚಿಕೆಯಲ್ಲಿ ಸಮಸ್ಯೆ ಎದುರಿಸುವಂತಾಗಿದೆ. ಓರ್ವ ರೈತನಾಗಿದ್ದೂ ಶರದ್ ಪವಾರ್ ರೈತರ ಸಮಸ್ಯೆಯ ಬಗ್ಗೆ ನಿರ್ಲಕ್ಷದ ಧೋರಣೆ ತಳೆದಿದ್ದರು. ಈಗ ಶರದ್ ಪವಾರ್ ಅವರ ಸುಳ್ಳು ಭರವಸೆ ಬಹಿರಂಗವಾಗಿದೆ ಮತ್ತು ಅವರ ಸೋದರಳಿಯನೇ ಶರದ್‌ರನ್ನು ಹಿಟ್‌ ವಿಕೆಟ್ ಮಾಡಿದ್ದಾರೆ.

ಎನ್‌ಸಿಪಿಯ ಹಿರಿಯ ಮುಖಂಡರನ್ನು ನಿವೃತ್ತಿಯಾಗುವಂತೆ ಬಲವಂತಪಡಿಸಲಾಗುತ್ತಿದೆ ಎಂದು ಮೋದಿ ಹೇಳಿದರು. ಮೋದಿ ಹೇಳಿಕೆಗೆ ತಿರುಗೇಟು ನೀಡಿರುವ ಎನ್‌ಸಿಪಿ, ವಾರ್ಧಾದಲ್ಲಿ ಖಾಲಿ ಮೈದಾನವನ್ನು ನೋಡಿ ಹತಾಶೆಯಿಂದ ಮೋದಿ ಈ ರೀತಿ ಹೇಳಿದ್ದಾರೆ. ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯ ಮುಖಂಡ ಎಲ್‌ಕೆ ಅಡ್ವಾಣಿಯನ್ನು ಮೂಲೆಗುಂಪು ಮಾಡಿದ ಮೋದಿಯಿಂದ ಎನ್‌ಸಿಪಿ ಅಧ್ಯಕ್ಷ ಪವಾರ್ ಕಲಿಯಬೇಕಿಲ್ಲ ಎಂದು ಪ್ರತಿಕ್ರಿಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X