‘ಮೋದಿ’ ಚಿತ್ರ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು, ಎ.1: ಕರ್ನಾಟಕದಲ್ಲಿ ಪಿಎಂ ನರೇಂದ್ರ ಮೋದಿ ಚಿತ್ರದ ಬಿಡುಗಡೆಗೆ ತಡೆ ನೀಡಬೇಕೆಂದು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ವಕೀಲ ರಮೇಶ್ ನಾಯ್ಕ ಎಂಬುವವರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ. ಮೋದಿ ಜೀವನಾಧಾರಿತ ಚಿತ್ರ ಪಿಎಂ ನರೇಂದ್ರ ಮೋದಿ ಎಂಬ ಚಿತ್ರವನ್ನು ಬಿಡುಗಡೆ ಮಾಡುವುದರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ. ಹೀಗಾಗಿ, ಎ.12ರಂದು ಬಿಡುಗಡೆಯಾಗಲಿರುವ ಚಿತ್ರಕ್ಕೆ ತಡೆ ನೀಡಬೇಕೆಂದು ಅರ್ಜಿದಾರರು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಲೋಕಸಭಾ ಚುನಾವಣೆ ಮುಗಿಯುವವರೆಗೂ ಆದರೂ ಪಿಎಂ ನರೇಂದ್ರ ಮೋದಿ ಚಿತ್ರಕ್ಕೆ ತಡೆ ನೀಡಬೇಕೆಂದು ಮನವಿ ಮಾಡಿದ್ದಾರೆ.
Next Story





