ಆಟವಾಡುತ್ತಿದ್ದ ಬಾಲಕಿ ಕೆರೆಗೆ ಬಿದ್ದು ಮೃತ್ಯು

ಮಡಿಕೇರಿ,ಎ.1: ಸಾಕು ನಾಯಿಯೊಂದಿಗೆ ಆಟವಾಡುತ್ತಿದ್ದ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಕೆರೆಯೊಳಗೆ ಬಿದ್ದು ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ 7ನೇ ಹೊಸಕೋಟೆಯಲ್ಲಿ ನಡೆದಿದೆ.
7ನೇ ಹೋಸಕೋಟೆ ಗ್ರಾಮದ ರಂಜನ್ ಎಂಬವರ ತೋಟದಲ್ಲಿ ಕಾರ್ಮಿಕರಾಗಿರುವ ಚೋಮ ಎಂಬವರ ಪುತ್ರಿ ಭಾರತಿ(13) ಮನೆಯ ಸಾಕು ನಾಯಿಯೊಂದಿಗೆ ಆಟವಾಡುತ್ತಿದ್ದ ಸಂದರ್ಭ ಕೆರೆಗೆ ಬಿದ್ದಿದ್ದಾಳೆ ಎನ್ನಲಾಗಿದೆ.
ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ ತೋಟದ ಲೈನ್ ಮನೆಯ ಪಕ್ಕದಲ್ಲಿ ಮುದ್ದಿನ ಸಾಕು ನಾಯಿಯೊಂದಿಗೆ ಆಟವಾಡುತ್ತಿದ್ದಳು. ಆಟದ ನಡುವೆ ಭಾರತಿಯನ್ನು ನಾಯಿ ಓಡಿಸಿಕೊಂಡು ಹೋಗಿದೆ. ಈ ವೇಳೆ ಇಳಿಜಾರಿನಿಂದ ಕೂಡಿದ ಪ್ರದೇಶದಲ್ಲಿದ್ದ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.
ಕುಶಾಲನಗರ ಆಸ್ಪತ್ರೆಯಲ್ಲಿ ಬಾಲಕಿಯ ಮೃತ ದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಿ ಸಂಬಂಧಿಕರಿಗೆ ಒಪ್ಪಿಸಲಾಗಿದೆ.
Next Story





