Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಲಾ ಕೆಲಸಗಳನ್ನು ಮಾಡಿಲ್ಲ, ಇನ್ನೊಂದು...

ಎಲ್ಲಾ ಕೆಲಸಗಳನ್ನು ಮಾಡಿಲ್ಲ, ಇನ್ನೊಂದು ಅವಕಾಶ ಕೊಡಿ: ಮೋದಿ

2014ರಲ್ಲಿ 60 ತಿಂಗಳುಗಳಲ್ಲೇ ಭಾರತದ ಭವಿಷ್ಯ ಬದಲಿಸುತ್ತೇವೆ ಎಂದಿದ್ದ ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ2 April 2019 9:20 PM IST
share
ಎಲ್ಲಾ ಕೆಲಸಗಳನ್ನು ಮಾಡಿಲ್ಲ, ಇನ್ನೊಂದು ಅವಕಾಶ ಕೊಡಿ: ಮೋದಿ

ಪಾಟ್ನಾ,ಎ.2: ತನ್ನ ಭರವಸೆಗಳನ್ನು ಈಡೇರಿಸಲು ತನಗೆ ಇನ್ನೊಂದು ಅಧಿಕಾರಾವಧಿ ಅಗತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬಿಹಾರದ ಜಮುಯಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದರು.

 ‘‘ಎಲ್ಲ ಕಾರ್ಯಗಳನ್ನೂ ಪೂರ್ಣಗೊಳಿಸಿದ್ದೇನೆ ಎಂದು ನಾನು ಹೇಳುತ್ತಿಲ್ಲ. 70 ವರ್ಷಗಳಲ್ಲಿ ಹಾಗೆ ಹೇಳಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲದಿರುವಾಗ ಕೇವಲ ಐದು ವರ್ಷಗಳಲ್ಲಿ ಅದನ್ನು ನಾನು ಹೇಳಲು ಹೇಗೆ ಸಾಧ್ಯ? ಬಹಳಷ್ಟನ್ನು ಮಾಡಿದ್ದೇವೆ,ಇನ್ನೂ ಬಹಳಷ್ಟನ್ನು ಮಾಡುವ ಸಾಮರ್ಥ್ಯವಿದೆ ಮತ್ತು ಇದಕ್ಕಾಗಿ ನಿರಂತರ ಪ್ರಯತ್ನಗಳ ಅಗತ್ಯವಿದೆ. ಹೀಗಾಗಿ ನಿಮ್ಮ ಆಶೀರ್ವಾದಗಳ ಅಗತ್ಯವೂ ನನಗಿದೆ ’’ಎಂದು ಅವರು ಹೇಳಿದರು.

ಆರು ವರ್ಷಗಳ ಹಿಂದೆ ಪ್ರಧಾನಿ ಅಭ್ಯರ್ಥಿಯಾಗಿ ಉತ್ತರ ಪ್ರದೇಶದಲ್ಲಿ ಪ್ರಚಾರದ ಸಂದರ್ಭ ಮೋದಿ,‘‘ನೀವು ಕಾಂಗ್ರೆಸ್‌ಗೆ 60 ವರ್ಷಗಳನ್ನು ಕೊಟ್ಟಿದ್ದೀರಿ,ಬಿಜೆಪಿಗೆ ಕೇವಲ 60 ತಿಂಗಳುಗಳನ್ನು ಕೊಡಿ. ನಾವು 60 ತಿಂಗಳುಗಳಲ್ಲಿ ಭಾರತದ ಭವಿಷ್ಯವನ್ನು ಬದಲಿಸುತ್ತೇವೆ ಮತ್ತು ಅಭಿವೃದ್ಧಿಯನ್ನು ತರುತ್ತೇವೆ ’’ ಎಂದು ಆಗ್ರಹಿಸಿದ್ದರು.

ತನ್ನ ಭಾಷಣದುದ್ದಕ್ಕೂ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಿದ ಮೋದಿ,ಅದು ಮತ್ತು ಅದರ ಮಿತ್ರಪಕ್ಷಗಳು ಅಧಿಕಾರದಲ್ಲಿದ್ದಾಗ ಆಡಳಿತವು ಹಿಮ್ಮುಖವಾಗಿ ಸಾಗುತ್ತದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭಯೋತ್ಪಾದನೆ, ಬೆಲೆಗಳು,ಭ್ರಷ್ಟಾಚಾರ ಮತ್ತು ಕಪ್ಪುಹಣ ಹೆಚ್ಚುತ್ತವೆ ಹಾಗೂ ದೇಶದ ಸಮೃದ್ಧಿ,ಅದರ ವಿಶ್ವಾಸಾರ್ಹತೆ,ಸಶಸ್ತ್ರ ಪಡೆಗಳ ನೈತಿಕ ಸ್ಥೈರ್ಯ ಮತ್ತು ಪ್ರಾಮಾಣಿಕತೆಗೆ ಗೌರವ ಕಡಿಮೆಯಾಗುತ್ತದೆ ಎಂದರು.

 ಕಾಂಗ್ರೆಸ್ ಮತ್ತು ನೆಹರು-ಗಾಂಧಿ ಕುಟುಂಬವು ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ‘ಪರಾಭವ’ಕ್ಕಾಗಿ ಪ್ರತಿಯೊಂದನ್ನೂ ಮಾಡಿತ್ತು ಎಂದು ಅವರು ಆರೋಪಿಸಿದರು. ಮೀಸಲು ಕ್ಷೇತ್ರವಾಗಿರುವ ಜಮುಯಿಯಲ್ಲಿ ಎ.11ರಂದು ಮತದಾನ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X