Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು...

ದ.ಕ.ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ: ಫೆಡರೇಶನ್ ಅಧ್ಯಕ್ಷರಾಗಿ 4ನೇ ಬಾರಿಗೆ ಯಶ್ಪಾಲ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ3 April 2019 8:28 PM IST
share
ದ.ಕ.ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ: ಫೆಡರೇಶನ್ ಅಧ್ಯಕ್ಷರಾಗಿ 4ನೇ ಬಾರಿಗೆ ಯಶ್ಪಾಲ್ ಆಯ್ಕೆ

ಉಡುಪಿ, ಎ.3: ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ಸಹಕಾರಿ ರಂಗದ ಹಿರಿಯ ಸಂಸ್ಥೆಯಾದ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ಗೆ ಸತತ 4ನೇ ಅವಧಿಗೆ ಉಡುಪಿಯ ಯಶ್ಪಾಲ್ ಎ.ಸುವರ್ಣ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ. ಪುರುಷೋತ್ತಮ ಅಮೀನ್ ಉಳ್ಳಾಲ ಉಪಾಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ. ಬುಧವಾರ ನಡೆದ ಫೆಡರೇಶನ್‌ನ ಆಡಳಿತ ಮಂಡಳಿ ಸಭೆಯಲ್ಲಿ ಚುನಾವಣಾಧಿಕಾರಿ ಮಂಗಳೂರಿನ ಲೆಕ್ಕಪರಿಶೋಧನಾ ಉಪನಿರ್ದೇಶಕ ಮಹೇಶ್ವರಪ್ಪ ಅವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಯಶ್‌ಪಾಲ್ ಸುವರ್ಣ 2009ರಲ್ಲಿ ಫೆಡರೇಶನಿನ ಅಧ್ಯಕ್ಷತೆಯನ್ನು ವಹಿಸಿಕೊಂಡ ಬಳಿಕ ಸತತ ಪುನರಾಯ್ಕೆಗೊಳ್ಳುತಿದ್ದಾರೆ. ಫೆಡರೇಶನಿನ ಪ್ರಮುಖ ವ್ಯವಹಾರಗಳಾದ ಸಿಗಡಿ ಮಾರಾಟ, ಡೀಸಿಲ್ ಮಾರಾಟ, ಮೀನುಗಾರಿಕಾ ಸಲಕರಣೆಗಳ ಮಾರಾಟ ಹಾಗೂ ನೂತನ ಬ್ಯಾಂಕಿಂಗ್ ವಿಭಾಗವನ್ನು ಆರಂಭಿಸಿ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರದ ಹಲವಾರು ಯೋಜನೆಗಳನ್ನು ಸಂಸ್ಥೆಗೆ ಪಡೆದು ಅನುಷ್ಠಾನಗೊಳಿಸಿ 46 ಕೋಟಿಗಳಷ್ಟಿದ್ದ ಸಂಸ್ಥೆಯ ವ್ಯವಹಾರವನ್ನು ಸುವಾರು 250 ಕೋಟಿ ರೂ. ಹೆಚ್ಚಿಸಿದ್ದಾರೆ.

ಫೆಡರೇಶನ್ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ 85 ಸದಸ್ಯ ಸಹಕಾರಿ ಸಂಸ್ಥೆಗಳನ್ನು (1ಲಕ್ಷಕ್ಕೂ ಮಿಕ್ಕಿ ಸದಸ್ಯರು), ಸುಮಾರು 14,000 ದಷ್ಟು ವೈಯಕ್ತಿಕ ಸದಸ್ಯರನ್ನು ಹೊಂದಿದೆ. ಹಿಂದೆ ಹಲವು ವರ್ಷಗಳಿಂದ ನಷ್ಟದಲ್ಲಿದ್ದ ಸಂಸ್ಥೆ ಇದೀಗ ನಿರಂತರವಾಗಿ ಲಾಭಗಳಿಸುತ್ತಾ 10 ವರ್ಷಗಳಲ್ಲಿ ಸುಮಾರು 40 ಕೋಟಿ ರೂ. ಲಾಭ ದಾಖಲಿಸಿದೆ.

ಮುಂಬರುವ ದಿನಗಳಲ್ಲಿ ಬ್ಯಾಂಕಿಂಗ್ ವ್ಯವಹಾರವನ್ನು ವಿಸ್ತರಿಸಿ ಹೊಸ ಶಾಖೆಗಳ ಆರಂಭ, ಮೀನುಗಾರರ ಅರ್ಥಿಕ ಸ್ವಾವಲಂಬನೆಗಾಗಿ ಸುಮಾರು 25 ಸಾವಿರ ಸದಸ್ಯರನ್ನೊಳಗೊಂಡ ಸ್ವಸಹಾಯ ಸಂಘಗಳ ರಚನೆಯ ಮೂಲಕ ಶೇ.2ರ ಬಡ್ಡಿದರದಲ್ಲಿ ಸಾಲ ವಿತರಣೆ, ಮೀನು ಸೇವನೆ ಪ್ರೋತ್ಸಾಹಿಸುವ ಹಾಗೂ ಗ್ರಾಹಕರಿಗೆ ತಾಜಾ ಮೀನು ಖಾದ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಮತ್ಸ ಕ್ಯಾಂಟಿನ್‌ನ ಆರಂ, ಮೀನು ಸಂಸ್ಕರಣ ಘಟಕ ಹಾಗೂ ಶೀತಲೀಕರಣ ಘಟಕ ಸ್ಥಾಪನೆ ಮುಂತಾದ ಯೋಜನೆ ನೂತನ ಆಡಳಿತ ಮಂಡಳಿಯ ಮುಂದಿದೆ.

ಫೆಡರೇಶನ್‌ನ ಆಡಳಿತ ಮಂಡಳಿ ಸಭೆಯಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಪುರುಷೋತ್ತಮ್ ಅಮೀನ್ ಉಳ್ಳಾಲ, ನೂತನ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಗೊಂಡ ಆನಂದ್ ಎ, ಸತೀಶ್ ಆರ್ ಸಾಲ್ಯಾನ್, ರಾಮಚಂದ್ರ ಕುಂದರ್, ಶಿವಾಜಿ ಎಸ್ ಅಮೀನ್, ದೇವಪ್ಪಕಾಂಚನ್, ಸುರೇಶ್ ಸಾಲ್ಯಾನ್, ರಾಮಕಾಂಚನ್, ಚಿದಾನಂದ, ಸುಧೀರ್ ಶ್ರೀಯಾನ್, ಉಷಾ ರಾಣಿ, ಸುಧಾಕರ್, ಬೇಬಿ ಎಚ್. ಸಾಲ್ಯಾನ್ ಮತ್ತು ಇಂದಿರಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X