Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈಶ್ವರಪ್ಪಗೆ ಮಾನ-ಮರ್ಯಾದೆ ಇದ್ದರೆ,...

ಈಶ್ವರಪ್ಪಗೆ ಮಾನ-ಮರ್ಯಾದೆ ಇದ್ದರೆ, ಬಿಜೆಪಿ ಬಿಟ್ಟು ಹೊರಬರಲಿ: ಸಿದ್ದರಾಮಯ್ಯ ಸವಾಲು

"ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ-ಪ್ರಜಾಪ್ರಭುತ್ವ ಉಳಿಯದು"

ವಾರ್ತಾಭಾರತಿವಾರ್ತಾಭಾರತಿ3 April 2019 9:00 PM IST
share
ಈಶ್ವರಪ್ಪಗೆ ಮಾನ-ಮರ್ಯಾದೆ ಇದ್ದರೆ, ಬಿಜೆಪಿ ಬಿಟ್ಟು ಹೊರಬರಲಿ: ಸಿದ್ದರಾಮಯ್ಯ ಸವಾಲು

ಹಾವೇರಿ, ಎ. 3: ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಯುವುದಿಲ್ಲ. ಹೀಗಾಗಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಮನವಿ ಮಾಡಿದ್ದಾರೆ.

ಬುಧವಾರ ನಗರದಲ್ಲಿ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ ಪರವಾಗಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದೇವೆ ಎಂದರು.

ಅಮಾವಾಸ್ಯೆ: ಬಾಬಾ ಸಾಹೇಬ್ ಅಂಬೇಡ್ಕರ್ ರೂಪಿಸಿದ ಸಂವಿಧಾನ ಎಲ್ಲರೂ ಸಮಾನರು ಎಂದು ಪ್ರತಿಪಾದಿಸಿದೆ. ಆದರೆ, ಅಂಬೇಡ್ಕರ್ ಪ್ರತಿಮೆ ನಾಶ ಮಾಡಿ, ಸಂವಿಧಾನವನ್ನು ಸುಟ್ಟು ಹಾಕಿ ಎಂದು ಹೇಳಿಕೆ ನೀಡಿದವನೇ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾನೆಂದು ವಾಗ್ದಾಳಿ ನಡೆಸಿದರು.

ಆ ಅಭ್ಯರ್ಥಿ ಸೂರ್ಯನೋ, ಚಂದ್ರನೋ ಗೊತ್ತಿಲ್ಲ. ಆದರೆ, ಅವನಿಗೆ ಅಮಾವಾಸ್ಯೆ ಎಂದು ಹೆಸರು ಇಡಬೇಕಿತ್ತು ಎಂದು ಲೇವಡಿ ಮಾಡಿದ ಸಿದ್ದರಾಮಯ್ಯ, ಮೋದಿ, ಶಾ ಅನುಮತಿ ಇಲ್ಲದೆ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ, ಸಂವಿಧಾನ ಬದಲು ಮಾಡುತ್ತೇನೆಂದು ಹೇಳಲು ಸಾಧ್ಯವಿಲ್ಲ. ಸಂವಿಧಾನದ ಬಗ್ಗೆ ಗೌರವ ಇಲ್ಲದವರು ಭಾರತದ ಪ್ರಜೆಯಾಗಲು ಯೋಗ್ಯರಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳಿಂದ ಹಿಂದುಳಿದವರಿಗೆ 7, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ 7 ಹಾಗೂ ಇತರರಿಗೆ 14 ಸ್ಥಾನ ನೀಡಿದ್ದೇವೆ. ಬಿಜೆಪಿಯವರು 28 ಕ್ಷೇತ್ರಗಳ ಪೈಕಿ ಒಂದೆ ಒಂದು ಕಡೆ ಹಿಂದುಳಿದವರಿಗೆ ಟಿಕೆಟ್ ನೀಡಿಲ್ಲ. ಬಿಜೆಪಿ ಮುಖಂಡ ಈಶ್ವರಪ್ಪಗೆ ಮಾನ-ಮರ್ಯಾದೆ ಇದ್ದರೆ, ಬಿಜೆಪಿ ಬಿಟ್ಟು ಹೊರಬರಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು. ಬಿಜೆಪಿ ಸಂಸದರು ತನ್ನ ಸಾಧನೆ ಆಧರಿಸಿ ಮತವನ್ನು ಕೇಳದೆ ಮೋದಿಗಾಗಿ ಮತ ನೀಡಿ ಎಂದು ಕೇಳುತ್ತಿರುವುದು ನಾಚಿಕೆಗೇಡು. ಮೋದಿ ಆಡಳಿತದಿಂದ ದೇಶದ ಜನತೆ ಈಗಾಗಲೆ ಭ್ರಮನಿರಸನರಾಗಿದ್ದಾರೆ. ಅಚ್ಚೇದಿನ್ ಬಂದಿದ್ದು ಅಂಬಾನಿ, ಅದಾನಿ, ಚೋಕ್ಸಿ, ನೀರವ್ ಮೋದಿಗೆ ಮಾತ್ರ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಸಂಸದ ಶಿವಕುಮಾರ ಉದಾಸಿ ಸಂಸತ್ತಿನಲ್ಲಿ ರೈತರ ಬಗ್ಗೆ ಒಂದೇ ಒಂದು ಪ್ರಶ್ನೆ ಕೇಳಿಲ್ಲ. ಅಂತವರಿಗ್ಯಾಕೆ ಪದೇಪದೆ ವೋಟು ಕೊಡ್ತಿದ್ದೀರಿ? ಇಂಥವರನ್ನ ಬಿಟ್ಟು ಡಿ.ಆರ್.ಪಾಟೀಲ ಅಂಥವರಿಗೆ ವೋಟು ಕೊಡಿ. ಪಾಟೀಲರನ್ನ ಆಯ್ಕೆ ಮಾಡಿದ್ರೆ ನಿಮ್ಮ ದನಿ ದಿಲ್ಲಿಯಲ್ಲಿ ಪ್ರತಿಧ್ವನಿಸುತ್ತೆ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್, ಸಚಿವ ಝಮೀರ್ ಅಹ್ಮದ್ ಖಾನ್, ಮಾಜಿ ಸಚಿವ ಬಸವರಾಜ ಹೊರಟ್ಟಿ, ಕೋನರೆಡ್ಡಿ, ಶಾಸಕರಾದ ಎನ್.ಎ.ಹಾರಿಸ್, ಬಿ.ಸಿ.ಪಾಟೀಲ್, ಕೆ.ಬಿ.ಕೋಳಿವಾಡ, ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ್ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.

ಅಪ್ಪನ ನೋಡಿ ಮಗಳ ಕೊಡ್ತಾರಾ:

‘ಏನೂ ಕೆಲಸ ಮಾಡದ ಬಿಜೆಪಿ ಸಂಸದರು, ಮೋದಿ ನೋಡಿ ವೋಟು ಕೊಡಿ ಎನ್ನುತ್ತಿದ್ದಾರೆ. ಹುಡುಗನ ನೋಡಿ ಹೆಣ್ಣು ಕೊಡೋದು ವಾಡಿಕೆ. ಆದರೆ, ಹುಡುಗನ ಅಪ್ಪನ ನೋಡಿ ಹೆಣ್ಣು ಕೊಡ್ತಾರಾ? ಬಿಜೆಪಿಯಲ್ಲಿ ಚುನಾವಣೆ ತನಕ ಯಡಿಯೂರಪ್ಪ ಹಿಂದೂ, ಅಧಿಕಾರ ಬಂದರೆ ಹೆಗಡೆ ಮುಂದು. ಅಂಬೇಡ್ಕರ್ ಪ್ರತಿಮೆ ನಾಶ ಮಾಡಬೇಕೆಂದು ತೇಜಸ್ವಿ ಸೂರ್ಯ ಹೇಳಿಕೆ ಕೊಡ್ತಾನೆ. ಆದರೂ, ಬಿಜೆಪಿಯಿಂದ ವಿ.ಶ್ರೀನಿವಾಸ ಪ್ರಸಾದ್ ಸ್ಪರ್ಧಿಸುತ್ತಾರೆ’

-ಸಿ.ಎಂ.ಇಬ್ರಾಹೀಂ ಕಾಂಗ್ರೆಸ್ ಮುಖಂಡ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X