Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಮಲತಾ ಪರ ದರ್ಶನ್‍ ಬಿರುಸಿನ ಪ್ರಚಾರ:...

ಸುಮಲತಾ ಪರ ದರ್ಶನ್‍ ಬಿರುಸಿನ ಪ್ರಚಾರ: 'ಕೈ' ನಾಯಕರ ಸಾಥ್

ಮೈತ್ರಿ ಧರ್ಮವನ್ನು ಗಾಳಿಗೆ ತೂರಿದ ಕಾಂಗ್ರೆಸ್ ಮುಖಂಡರು

ವಾರ್ತಾಭಾರತಿವಾರ್ತಾಭಾರತಿ3 April 2019 9:55 PM IST
share
ಸುಮಲತಾ ಪರ ದರ್ಶನ್‍ ಬಿರುಸಿನ ಪ್ರಚಾರ: ಕೈ ನಾಯಕರ ಸಾಥ್

ಮಂಡ್ಯ, ಎ.3: ಲೋಕಸಭಾ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರವಾಗಿ ಬಿರುಸಿನ ಪ್ರಚಾರ ಮುಂದುವರಿಸಿರುವ ನಟ ದರ್ಶನ್, ಬುಧವಾರ ಕೃಷ್ಣರಾಜಪೇಟೆ ತಾಲೂಕಿನಲ್ಲಿ ಮತಯಾಚನೆ ನಡೆಸಿದರು. ಈ ವೇಳೆ ಅವರಿಗೆ ಭರ್ಜರಿ ಬೆಂಬಲ ದೊರೆಯಿತು.

ತೆಂಡೇಕೆರೆ ಗ್ರಾಮದ ಮೂಲಕ ಪ್ರಚಾರ ಆರಂಬಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ಅಭಿಮಾನಿಗಳು ಭಾರೀ ಗಾತ್ರದ ಹೂಮಾಲೆಯನ್ನು ಸಮರ್ಪಿಸಿ ಸ್ವಾಗತಿಸಿದರು. ದರ್ಶನ ಅವರ ಪ್ರಚಾರ ಸಭೆಗೆ ಸಾವಿರಾರು ಸಂಖ್ಯೆಯಲ್ಲಿ ಯುವಕರು ಭಾಗವಹಿಸಿದ್ದು ವಿಶೇಷವಾಗಿತ್ತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ರವೀಂದ್ರಬಾಬು ದರ್ಶನ್ ಅವರೊಂದಿಗೆ ಪ್ರಚಾರ ವಾಹನವನ್ನೇರಿ ಸುಮಲತಾ ಅವರ ಪರವಾದ ಪ್ರಚಾರ ಕಾರ್ಯಕ್ಕೆ ಸಾಥ್ ನೀಡಿದರು.

ಜಿಲ್ಲಾ ಪಂಚಾಯತ್ ಸದಸ್ಯ ಕೋಡಿಮಾರನಹಳ್ಳಿ ದೇವರಾಜು, ಜಿಪಂ ಮಾಜಿ ಸದಸ್ಯ ಬಿ.ನಾಗೇಂದ್ರಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್ ಸೇರಿದಂತೆ ಕಾಂಗ್ರೆಸ್ ನಾಯಕರ ದಂಡೇ ದರ್ಶನ್ ಅವರೊಂದಿಗೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸುವ ಮೂಲಕ ಮೈತ್ರಿ ಧರ್ಮವನ್ನು ಗಾಳಿಗೆ ತೂರಿದರು.

ಜಿಲ್ಲೆಯ ಸ್ವಾಭಿಮಾನವನ್ನು ಎತ್ತಿ ಹಿಡಿಯಲು ಅಮ್ಮ ಸುಮಲತಾ ಅವರನ್ನು ಭಾರೀ ಬಹು ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಮೂಲಕ ಜಿಲ್ಲೆಯಲ್ಲಿ ಹೊಸ ಇತಿಹಾಸ ನಿರ್ಮಾಣ ಮಾಡಬೇಕು ಎಂದು ದರ್ಶನ್ ಮನವಿ ಮಾಡಿದರು. ಅಭಿಮಾನಿಗಳೇ ನನ್ನ ಬಾಸ್. ನಿಮ್ಮಿಂದ ನಾನು ಬಾಸ್ ಆಗಿದ್ದೇನೆ. ಅಭಿಮಾನಿಗಳು ನೀಡುವ ಪ್ರೀತಿ ವಿಶ್ವಾಸ ಕೋಟಿ ರೂ.ಗಳಿಗೂ ಸಮವಲ್ಲ ಎಂದು ದರ್ಶನ್ ಹೇಳಿದರು.

ಅಂಬರೀಷ್ ಅಪ್ಪಾಜಿ ಮಂಡ್ಯ ಸೇರಿದಂತೆ ರಾಜ್ಯದ ಜನರ ಹೃದಯ ಸಿಂಹಾಸನದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ಅವರ ಆಶಯಗಳ ಈಡೇರಿಕೆಗಾಗಿ ಅಮ್ಮ ಸುಮಲತಾ ಅವರನ್ನು ಬೆಂಬಲಿಸಿ 20ನೇ ಕ್ರಮಸಂಖ್ಯೆಯ ರಣಕಹಳೆ ಊದುತ್ತಿರುವ ರೈತನ ಗುರುತಿಗೆ ನಿಮ್ಮ ಮತ ನೀಡಬೇಕು ಎಂದು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X