Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ:...

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಭದ್ರಕೋಟೆಯನ್ನು ಮತ್ತೊಮ್ಮೆ ಭೇದಿಸುವುದೇ ಬಿಜೆಪಿ ?

ನೇರಳೆ ಸತೀಶ್‌ಕುಮಾರ್ನೇರಳೆ ಸತೀಶ್‌ಕುಮಾರ್3 April 2019 11:41 PM IST
share
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಭದ್ರಕೋಟೆಯನ್ನು ಮತ್ತೊಮ್ಮೆ ಭೇದಿಸುವುದೇ ಬಿಜೆಪಿ ?

ಮೈಸೂರು, ಎ.3: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ದಿನೇ ದಿನೇ ರಂಗು ಪಡೆಯುತ್ತಿದ್ದು ಕಾಂಗ್ರೆಸ್ ಭಧ್ರಕೋಟೆಯನ್ನು ಮತ್ತೊಮ್ಮೆ ಬಿಜೆಪಿ ಭೇದಿಸುವುದೇ? ಎಂಬ ಚರ್ಚೆಗಳು ಜಿಲ್ಲೆಯಾದ್ಯಂತ ನಡೆಯುತ್ತಿದೆ.

ಮೈಸೂರು ಲೋಕಸಭಾ ಕ್ಷೇತ್ರಹಿಂದಿನಿಂದಲೂ ಕಾಂಗ್ರೆಸ್ ಪಕ್ಷದ ಹಿಡಿತದಲ್ಲಿದೆ. ಈವರೆಗೆ ನಡೆದಿರುವ 14 ಚುನಾವಣೆಗಳಲ್ಲಿ ಕಾಂಗ್ರೆಸ್ 11 ಬಾರಿ ಜಯಗಳಿಸಿದ್ದು ಮೂರು ಬಾರಿ ಬಿಜೆಪಿ ಜಯಸಾಧಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಬಾವುಟ ಹಾರಿಸಲು ಯತ್ನಿಸುತ್ತಿದ್ದರೆ ಬಿಜೆಪಿ ಸಹ ಕಮಲ ಅರಳಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಕಾಂಗ್ರೆಸ್ - ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲಬಂದಿದ್ದು ಈ ಬಾರಿ ಅತ್ಯಧಿಕ ಮತಗಳ ಅಂತರದಿಂದ ಗೆಲವು ಸಾಧಿಸುತ್ತೇವೆ ಎಂಬ ಆತ್ಮವಿಶ್ವಾಸ ಮೈತ್ರಿ ನಾಯಕರಲ್ಲಿ ಮೂಡಿದೆ. ಇನ್ನು ಬಿಜೆಪಿ ಐದು ವರ್ಷದಲ್ಲಿ ನಾವು ಮಾಡಿರುವ ಸಾಧನೆ ಮತ್ತು ಮೋದಿ ಹೆಸರಿನೊಂದಿಗೆ ಪ್ರಚಾರಕ್ಕಿಳಿದಿದ್ದು ಮತ್ತೊಮ್ಮೆ ಗೆಲುವು ನಮ್ಮದೆ ಎಂಬ ನಾಗಾಲೋಟದಲ್ಲಿ ತೇಲುತ್ತಿದೆ.

ಕಾಂಗ್ರೆಸ್ - ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ಸಿ.ಎಚ್.ವಿಜಯಶಂಕರ್, ಬಿಜೆಪಿಯಿಂದ ಪ್ರತಾಪ್ ಸಿಂಹ ನಡುವೆ ಜಿದ್ದಾ ಜಿದ್ದಿ ಕಣವಾಗಿ ಏರ್ಪಟ್ಟಿದೆ. ವಿಪರ್ಯಾಸ ಎಂದರೆ ಬಿಜೆಪಿಯಿಂದ ಎರಡು ಬಾರಿ ಸಿ.ಎಚ್.ವಿಜಯಶಂಕರ್ ಸಂಸದರಾಗಿ ಆಯ್ಕೆಯಾಗಿದ್ದರು. ಒಂದು ಬಾರಿ ಪ್ರತಾಪ್ ಸಿಂಹ ಆಯ್ಕೆಯಾಗಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಗ್ನಿಪರೀಕ್ಷೆಗಿಳಿದಿರುವ ಸಿ.ಎಚ್.ವಿಜಯಶಂಕರ್ ಜಯಭೇರಿ ಬಾರಿಸುವರೆ ಎಂಬುದು ಕುತೂಹಲ ಮೂಡಿಸಿದೆ.

1951ರಲ್ಲಿ ದ್ವಿಸದಸ್ಯ ಕ್ಷೇತ್ರದಿಂದ ಎನ್.ರಾಚಯ್ಯ (ಕಾಂಗ್ರೆಸ್) ಮತ್ತು ಎಂ.ಎಸ್.ಗುರುಪಾದಸ್ವಾಮಿ (ಕೆಎಂಪಿಪಿ) ಪಕ್ಷದಿಂದ ಜಯಗಳಿಸಿದ್ದರು. 1957ರಲ್ಲಿ ಕಾಂಗ್ರೆಸ್‌ನವರೇ ಆದ ಎಂ.ಶಂಕರಯ್ಯ, ಎಸ್.ಎಂ.ಸಿದ್ದಯ್ಯ ಅವರು ಆಯ್ಕೆಯಾಗಿದ್ದರು. ನಂತರ ಏಕ ಸದಸ್ಯ ಕ್ಷೇತ್ರವಾಗಿ ಪರಿವರ್ತನೆಯಾದ ನಂತರ 1962ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಎಂ.ಶಂಕರಯ್ಯ(ಕಾಂಗ್ರೆಸ್) ಜಯಗಳಿಸಿ ಸತತ ಎರಡನೇ ಬಾರಿಗೆ ಲೋಕಸಭೆ ಪ್ರವೇಶಿಸಿದ್ದರು. ನಂತರ1967 ರಿಂದ 1977ರವರೆಗೆ ನಡೆದ ಮೂರು ಚುನಾವಣೆಯಗಳಲ್ಲಿ ಎಚ್.ಡಿ.ತುಳಸಿದಾಸಪ್ಪ ಅವರು ಆಯ್ಕೆಯಾಗಿದ್ದರು. 1980ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಎಂ.ರಾಜಶೇಖರಮೂರ್ತಿ ಜಯಗಳಿಸಿದ್ದರು. ನಂತರ ನಡೆದ 1984, 1989, 1996 ಮತ್ತು 1999ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಆಯ್ಕೆಯಾಗಿದ್ದರು. 1998 ಮತ್ತು 2004ರಲ್ಲಿ ಬಿಜೆಪಿಯಿಂದ ಸಿ.ಎಚ್.ವಿಜಯಶಂಕರ್ ಆಯ್ಕೆಯಾಗಿದ್ದರು. ಕ್ಷೇತ್ರ ಪುನರ್ ವಿಂಗಡಣೆಯ ನಂತರ 2009 ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ರಚನೆಯಾಯಿತು. ಆಗ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದ ಅಡಗೂರು ಎಚ್.ವಿಶ್ವನಾಥ್ ಆಯ್ಕೆಯಾಗಿದ್ದರು. 2014ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ಆಯ್ಕೆಯಾಗಿ ಮತ್ತೊಮ್ಮೆ ಅಗ್ನಿಪರೀಕ್ಷೆಗೆ ಮುಂದಾಗಿದ್ದಾರೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅಡಗೂರು ಎಚ್.ವಿಶ್ವನಾಥ್ ಜೆಡಿಎಸ್ ಪಕ್ಷ ಸೇರಿದ್ದರೆ ಸಿ.ಎಚ್.ವಿಜಯಶಂಕರ್ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ. ಇತ್ತ ಬಲಿಷ್ಠಗೊಂಡಿರುವ ಬಿಜೆಪಿ ಏಕಾಂಗಿ ಹೋರಾಟ ನಡೆಸುತ್ತಿದ್ದು ಕಾಂಗ್ರೆಸ್ ಭದ್ರಕೋಟೆಯನ್ನು ಮತ್ತೊಮ್ಮೆ ಭೇದಿಸುವುದೇ ಎಂಬುದನ್ನು ಕಾದು ನೋಡಬೇಕಿದೆ.

share
ನೇರಳೆ ಸತೀಶ್‌ಕುಮಾರ್
ನೇರಳೆ ಸತೀಶ್‌ಕುಮಾರ್
Next Story
X