ಹನೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹನೂರು, ಎ.3: ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ಪಲ್ಟಿಯಾಗಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಹನೂರು ಹೂರವಲಯದ ರಾಮಾಪುರ ರಸ್ತೆಯ ಕಣಿವೆ ಆಂಜನೇಯ ಸ್ವಾಮಿ ದೇವಸ್ಥಾನದ ತಿರುವಿನಲ್ಲಿ ಬುಧವಾರ ನಡೆದಿದೆ.
ಟಾಟಾ ಸುಮೋದ ಒಳಗಡೆ ಇದ್ದ ಪ್ರಯಾಣಿಕರಿಗೆ ಅದೃಷ್ಟವಶಾತ್ ಯಾವುದೇ ಪ್ರಾಣಿ ಹಾನಿಯಾಗಿಲ್ಲ ಎಂದು ತಿಳಿದುಬಂದಿದ್ದು ಈ ದುರ್ಘಟನೆಯಲ್ಲಿ ಸಣ್ಣ ಪುಟ್ಟ ಗಾಯಗಳಾಗಿರುವವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ.
Next Story





