ವಯನಾಡ್ ನಲ್ಲಿ ರಾಹುಲ್ ಗಾಂಧಿ ರೋಡ್ ಶೋ

ಕಲ್ಪೆಟ್ಟಾ, ಎ.4: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಂಬರುವ ಲೋಕಸಭಾ ಚುನಾವಣೆಗೆ ವಯನಾಡ್ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ರೋಡ್ ಶೋ ನಡೆಸಿದರು.
ಕಲ್ಪೆಟ್ಟಾದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ರಾಹುಲ್ ಅವರು ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಮುಲ್ಲಪಳ್ಳಿ ಮುಲ್ಲಪಳ್ಳಿ ರಾಮಚಂದ್ರನ್, ಕೇರಳ ವಿಧಾನ ಸಭೆಯ ವಿಪಕ್ಷ ನಾಯಕ ರಮೇಶ್ ಚೆನ್ನಿತಲಾ ಮತ್ತಿತರ ನಾಯಕರು ರಾಹುಲ್ ಗಾಂಧಿಗೆ ಸಾಥ್ ನೀಡಿದರು.
Next Story