ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ
![ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ](https://www.varthabharati.in/sites/default/files/images/articles/2019/04/5/185634.jpg)
ಬೆಂಗಳೂರು, ಎ.5: ಕೇಂದ್ರ ಚುನಾವಣಾ ಆಯೋಗದ ಸೂಚನೆ ಮೇರೆಗೆ ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಉಮಾ ಮಹದೇವನ್ರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಪಿ.ಎ.ಮೇಘಣ್ಣನವರ್ರನ್ನು ಧಾರವಾಡದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಪಿ.ಎನ್.ರವಿಂದ್ರ ಅವರನ್ನು ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಕೆ.ಏಲಕ್ಕಿ ಗೌಡರನ್ನು ಪಂಚಾಯತ್ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
Next Story