ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ನೀರು ಪಾಲು

ವಿಜಯಪುರ,ಎ.6: ಭೀಮಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ನೀರು ಪಾಲಾದ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಮರಗೂರ ಬಳಿ ಇರುವ ಭೀಮಾ ನದಿಯಲ್ಲಿ ಘಟನೆ ನಡೆದಿದ್ದು, ಯುಗಾದಿ ಹಬ್ಬದ ಪ್ರಯುಕ್ತ ಸ್ನಾನಕ್ಕಾಗಿ ನದಿಗೆ ಇಳಿದಿದ್ದ ವೇಳೆ ಯುವಕರು ನೀರುಪಾಲಾಗಿದ್ದಾರೆ ಎನ್ನಲಾಗಿದೆ.
ನೀರುಪಾಲಾದವರಲ್ಲಿ ಓರ್ವ ಅಂಜುಟಗಿ ಗ್ರಾಮ ಹಾಗೂ ಇಬ್ಬರು ಮಹಾರಾಷ್ಟ್ರದ ಔದ ಗ್ರಾಮದವರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯುವಕರಿಗಾಗಿ ಸಾರ್ವಜನಿಕರು ಶೋಧ ಮುಂದುವರೆಸಿದ್ದಾರೆ.
Next Story





