ಮಧ್ಯಪ್ರದೇಶ ಸಿಎಂ ಕಮಲನಾಥ್ ಆಪ್ತನ ಮನೆ ಮೇಲೆ ಐಟಿ ದಾಳಿ

ಹೊಸದಿಲ್ಲಿ, ಎ.7: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರವಿವಾರ ಬೆಳಗ್ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್‌ರ ಆಪ್ತನ ಇಂದೋರ್‌ನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಬೆಳಗ್ಗಿನ ಜಾವ 3 ಗಂಟೆಯ ಸುಮಾರಿಗೆ ಕಮಲನಾಥ್ ಆಪ್ತ ಪ್ರವೀಣ್ ಕಕ್ಕರ್ ನಿವಾಸದ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ದಾಖಲೆ ಪತ್ರವನ್ನು ಪರಿಶೀಲಿಸುತ್ತಿದ್ದಾರೆ. ಕಕ್ಕರ್ ಅವರ ನಿವಾಸ ಇಂದೋರ್‌ನ ಪ್ರತಿಷ್ಠಿತ ಪ್ರದೇಶ ವಿಜಯ ನಗರದಲ್ಲಿದೆ.
‘‘ಐಟಿ ಅಧಿಕಾರಿಗಳು 50 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಮ.ಪ್ರ.ದ ಮುಖ್ಯಮಂತ್ರಿ ಕಮಲನಾಥ್‌ರ ಒಎಸ್‌ಡಿ ರುತುಲ್ ಪುರಿ ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಭೂಲಾ, ಇಂದೋರ್ ,ಗೋವಾ ಹಾಗೂ ದಿಲ್ಲಿಯ 35 ಸ್ಥಳಗಳಲ್ಲಿ ದಾಖಲೆಗಳಿಗಾಗಿ ಶೋಧ ನಡೆಸಲಾಗುತ್ತಿದೆ. 300ಕ್ಕೂ ಅಧಿಕ ಐಟಿ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story





