Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲೋಕಸಭಾ ಚುನಾವಣೆಗೆ ಆಯೋಗ ಸಕಲ ಸಿದ್ಧತೆ

ಲೋಕಸಭಾ ಚುನಾವಣೆಗೆ ಆಯೋಗ ಸಕಲ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ7 April 2019 11:15 PM IST
share
ಲೋಕಸಭಾ ಚುನಾವಣೆಗೆ ಆಯೋಗ ಸಕಲ ಸಿದ್ಧತೆ

ಬೆಂಗಳೂರು, ಎ.7: ರಾಜ್ಯದಲ್ಲಿ ಎ.18 ಹಾಗೂ 23 ರಂದು ಎರಡು ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಅಗತ್ಯವಾದ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಸುಗಮವಾಗಿ ಚುನಾವಣೆ ನಡೆಸಲು ಹಾಗೂ ಹೆಚ್ಚು ಮತದಾನ ನಡೆಯುವಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಯುವ ಮತದಾರರನ್ನು ಆಕರ್ಷಿಸಲು ನಾಮಪತ್ರ ಸಲ್ಲಿಕೆ ದಿನದವರೆಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿತ್ತು. ಚುನಾವಣೆ ದಿನದಂದು ವಿಕಲಚೇತನರಿಗೆ ಮತದಾನಕ್ಕೆ ಮನೆಯಿಂದ ಕರೆದುಕೊಂಡು ಹೋಗಲು ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ದಿವ್ಯಾಂಗರನ್ನು ಕರೆದುಕೊಂಡು ಹೋಗಲು ಬರೋಬ್ಬರಿ 17 ಸಾವಿರ ವಾಹನಗಳನ್ನು ಈ ಬಾರಿ ಬಳಸಿಕೊಳ್ಳಲಾಗುತ್ತಿದೆ. ಕಳೆದ ವರ್ಷವಷ್ಟೆ ವಿಧಾನಸಭಾ ಚುನಾವಣೆ ನಡೆಸಿದ್ದ ರಾಜ್ಯ ಚುನಾವಣಾ ಆಯೋಗ ಇದೇ ಉತ್ಸಾಹದಲ್ಲಿ ಚುನಾವಣೆಗೆ ಸಕಲ ರೀತಿಯ ಕ್ರಮಗಳನ್ನು ಕೈಗೊಂಡಿದೆ.

ರಾಜ್ಯದಲ್ಲಿ ಒಟ್ಟು 5 ಕೋಟಿ ಮತದಾರರಿದ್ದಾರೆ. ಆ ಪೈಕಿ ದಿವ್ಯಾಂಗರು, ಹಿರಿಯ ನಾಗರಿಕರು ಬಂದು ಮತದಾನ ಮಾಡುವ ಕಾರಣಕ್ಕೆ ರಾಜ್ಯಾದ್ಯಂತ 58,186 ಮತಕೇಂದ್ರಗಳನ್ನು ನೆಲ ಅಂತಸ್ತಿನಲ್ಲೇ ಮಾಡಲಾಗುತ್ತದೆ. ಚುನಾವಣಾ ಆಯೋಗ ಪ್ರತಿ ಬಾರಿಯಂತೆ ಈ ಬಾರಿಯೂ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಶಾಲಾ- ಕಾಲೇಜು ವಿದ್ಯಾರ್ಥಿಗಳಲ್ಲಿ ಮತದಾನ ಜಾಗೃತಿ ಕ್ಲಬ್, ಜಾಗತಿ ಕಾರ್ಯಕ್ರಮ, ಬೀದಿ ನಾಟಕ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ.

ವಿಶೇಷಚೇನರಿಗೆ ಸಹಾಯ ಕ್ರಮಗಳು: ರಾಜ್ಯದಲ್ಲಿ 4.21 ಲಕ್ಷ ಅಂಧರಿದ್ದು, ಮತದಾನದ ಸಂದರ್ಭದಲ್ಲಿ ಸುಗಮವಾಗಿ ಮತದಾನ ಮಾಡಲು 40,823 ವೀಲ್ ಚೇರ್ ವ್ಯವಸ್ಥೆ, ದಿವ್ಯಾಂಗರನ್ನು ಕರೆದುಕೊಂಡು ಹೋಗಲು 17,189 ವಾಹನ ವ್ಯವಸ್ಥೆ, ಕಿವುಡ- ಮೂಗರ ಸಹಾಯಕ್ಕೆ 405 ಸನ್ನೆನುಡಿ ತಜ್ಞರ ಬಳಕೆ, ದಿವ್ಯಾಂಗ ಮತಗಟ್ಟೆ ಅಧಿಕಾರಿಗಳೇ ಇರುವ 90 ಮತಕೇಂದ್ರಗಳ ಸ್ಥಾಪನೆ, ಮಹಿಳಾ ಸಿಬ್ಬಂದಿಯಿರುವ 639 ಮತಕೇಂದ್ರ ಸ್ಥಾಪನೆ, ಬುಡಕಟ್ಟು ಮತದಾರರು ಹೆಚ್ಚಿರುವ ಕಡೆ 39 ಸಾಂಪ್ರದಾಯಿಕ ಮತಕೇಂದ್ರ ಹಾಗೂ ಇವಿಎಂ ಯಂತ್ರದಲ್ಲಿ ಬ್ರೈಲ್ ಲಿಪಿ ಅಳವಡಿಕೆ ಕ್ರಮಗಳನ್ನು ಅಳವಡಿಸಲಾಗುತ್ತಿದೆ.

ಮತದಾರರ ಅನುಕೂಲಕ್ಕಾಗಿ ಪ್ರತಿ ಮತಕೇಂದ್ರದಲ್ಲೂ ಸಹಾಯಕರ ನೆರವಿನಿಂದ ವೀಲ್ ಚೇರ್‌ನಲ್ಲಿ ಬರಲು ರ್ಯಾಂಪ್ ಸೌಕರ್ಯ ಕಲ್ಪಿಸಲಿದೆ. ಮನೆ ಮನೆಗೆ ಆಯೋಗದ ಸಿಬ್ಬಂದಿ ವೋಟರ್‌ಸ್ಲಿಪ್ ವಿತರಣೆ ಆರಂಭಗೊಂಡಿದ್ದು, ಅದರ ಜತೆಗೆ ವೋಟರ್ ಗೈಡ್‌ಗಳನ್ನು ಪೂರೈಕೆ ಮಾಡಲಾಗುತ್ತಿದೆ. ಮತದಾನದ ದಿನ ಚುನಾವಣೆ ಕುರಿತಂತೆ ಚುನಾವಣಾ ಆಯೋಗ ಭಿತ್ತಿಪತ್ರಗಳಲ್ಲಿ ಮಾಹಿತಿಯನ್ನು ಒದಗಿಸಲಿದೆ. ಚುನಾವಣಾ ಆಯೋಗ ಸಾಕಷ್ಟು ಜಾಗೃತಿ ಕಾರ್ಯಕ್ರಮ ಕೈಗೊಂಡಿದ್ದು, ಈ ಬಾರಿ ಶೇ. 80ರಷ್ಟು ಮತದಾನವಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತಕೇಂದ್ರದ ಸಿಬ್ಬಂದಿಯ ಶೌಚಾಲಯ, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಮತದಾರರಿಗೆ ಕುಡಿಯುವ ನೀರಿನ ವ್ಯವಸ್ಥೆ, ದೃಷ್ಟಿದೋಷವಿರುವವರಿಗೆ ಅಭ್ಯರ್ಥಿಗಳ ಪಟ್ಟಿ ವೀಕ್ಷಣೆಗೆ ಭೂತಗನ್ನಡಿ ಹೀಗೆ ಹಲವು ಸೌಲಭ್ಯಗಳನ್ನು ಚುನಾವಣಾ ಆಯೋಗ ಮತದಾರರಿಗೆ ಕಲ್ಪಿಸಿಕೊಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X