ರೈಲಿನಿಂದ ಜಿಗಿದು ಮಹಿಳೆ ಆತ್ಮಹತ್ಯೆ
ಬೆಂಗಳೂರು, ಎ.7: ಚಲಿಸುತ್ತಿದ್ದ ರೈಲಿನಿಂದ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಾಜಿನಗರ ಸಂಗೀತಾ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ.
ಎರಡು ದಿನದ ಹಿಂದಷ್ಟೇ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಸಂಗೀತಾ ನಾಪತ್ತೆ ಆಗಿರುವ ಬಗ್ಗೆ ದೂರು ದಾಖಲಾಗಿತ್ತು. ಶನಿವಾರ 12:30 ಗಂಟೆ ಸುಮಾರಿಗೆ ಚಲಿಸುತ್ತಿದ್ದ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸಂಗೀತಾ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಮೃತ ದೇಹವನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ.
Next Story